ಹುಬ್ಬಳ್ಳಿ: ಸಿದ್ದರಾಮಯ್ಯ (Siddaramaiah) ಸರ್ಕಾರ ವಕ್ಫ್‌ಗೆ ಕುಮ್ಮಕ್ಕು ನೀಡಿದೆ ಎಂದು ಮಾಜಿ ಸಂಸದ ಪ್ರತಾಪ್‌ಸಿಂಹ (Pratap Simha) ಆರೋಪಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಜನಪ್ರಿಯ ನೇತಾರ ಯತ್ನಾಳ್ ಅವರು ವಕ್ಫ್ ವಿರುದ್ಧ ಧ್ವನಿ ಎತ್ತಿ ಧರಣಿ ಆರಂಭ ಮಾಡಿದ್ದಾರೆ. ಅದಕ್ಕೆ ಸ್ಪಂದಿಸಿ ಇವತ್ತು ಕೇಂದ್ರದಿಂದ ಕಮಿಟಿ ಬಂದಿದೆ. ಇವತ್ತು ವಿಜಯಪುರ (Vijayapura) ಜಿಲ್ಲೆಯ ರೈತರಿಗೆ ಯಾವ ರೀತಿ ಅನ್ಯಾಯ ಆಗುತ್ತಿದೆ, ಸಿದ್ದರಾಮಯ್ಯ ಸರ್ಕಾರ ವಕ್ಫ್‌ಗೆ ಹೇಗೆ ಕುಮ್ಮಕ್ಕು ನೀಡಿದೆ ಅನ್ನುವುದನ್ನು ಹೇಳುವುದಕ್ಕೆ ಇವತ್ತು ಒಂದು ಅವಕಾಶ ಸಿಕ್ಕಿದೆ. ಇದು ನಿಮ್ಮ ಹೋರಾಟದ ಫಲವಾಗಿದೆ. ಯತ್ನಾಳ್ ಅವರಿಗೆ ನಾನು ಅಭಿನಂದನೆ ತಿಳಿಸುತ್ತೇನೆ ಎಂದರು. ಇದನ್ನೂ ಓದಿ: ಸರ್ ಎಂ.ವಿಶ್ವೇಶ್ವರಯ್ಯ ಓದಿದ್ದ ಸರ್ಕಾರಿ ಶಾಲೆಯೂ ವಕ್ಫ್ ಹೆಸರಿಗೆ
ಯತ್ನಾಳ್ ನೇತೃತ್ವದಲ್ಲಿ ಕರ್ನಾಟಕದ ಎಲ್ಲ ರೈತರಿಗೆ ನ್ಯಾಯ ಸಿಗುತ್ತದೆ. ವಕ್ಫ್ ತಿದ್ದುಪಡಿ ಮಾಡುವುದಕ್ಕೆ ಕೇಂದ್ರ ತಯಾರಾಗಿದೆ. ಮುಂದಿನ ಅಧಿವೇಶನದಲ್ಲಿ ತಿದ್ದುಪಡಿ ಆಗಬಹುದು. ಸಿಎಂ ಲೋಕಾಯುಕ್ತ ವಿಚಾರಣೆ ಬಗ್ಗೆ ನಾನು ಕಾಮೆಂಟ್ ಮಾಡುವುದಿಲ್ಲ. ಆರೋಪಕ್ಕೆ ಒಳಗಾದವರು ವಿಚಾರಣೆ ಒಳಗಾಗುವುದು ಸಹಜ. ಸಿದ್ದರಾಮಯ್ಯ ಕೂಡಾ ಕಾನೂನಿಗೆ ತಲೆಬಾಗಿ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಮಹಾರಾಷ್ಟ್ರದ ಸ್ಟೀಲ್ ಕಂಪನಿಯಲ್ಲಿ ಬೆಂಕಿ ಅವಘಡ – 16 ಕಾರ್ಮಿಕರಿಗೆ ಗಾಯ