ಬೆಂಗಳೂರು: ನೈರುತ್ಯ ರೈಲ್ವೆ ವಲಯಕ್ಕೆ ಪ್ರಸಕ್ತ ಮುಂಗಡ ಪತ್ರದಲ್ಲಿ ಕೇಂದ್ರ ಸರ್ಕಾರವು ಅತೀ ಹೆಚ್ಚು ಅಂದರೆ 6,900 ಕೋಟಿ ರೂ.ಗಳ ಅನುದಾನವನ್ನು ಘೋಷಿಸಿ ಕರ್ನಾಟಕಕ್ಕೆ ಸಿಂಹಪಾಲು ನೀಡಿರುವುದರಿಂದ ನಮ್ಮ ರಾಜ್ಯದ ರೈಲ್ವೆ ಕ್ಷೇತ್ರಕ್ಕೆ ಕೇಂದ್ರ ಸರ್ಕಾರವು ಬಹುದೊಡ್ಡ ಉಡುಗೊರೆ ನೀಡಿದಂತಾಗಿದೆ ಎಂದು ಲೋಕೋಪಯೋಗಿ ಸಚಿವರಾದ ಸಿ.ಸಿ. ಪಾಟೀಲ್ ಹರ್ಷ ವ್ಯಕ್ತಪಡಿಸಿದ್ದಾರೆ.
ಇಷ್ಟು ದೊಡ್ಡ ಪ್ರಮಾಣದ ಅನುದಾನ ದೊರೆತಿರುವುದು ನೈರುತ್ಯ ರೈಲ್ವೆಯ ಇತಿಹಾಸದಲ್ಲೇ ಹೊಸ ದಾಖಲೆಯಾಗಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಶೇಕಡ 43ರಷ್ಟು ಹೆಚ್ಚಿನ ಅನುದಾನ ಘೋಷಣೆಯಾಗಿದ್ದು, ಈ ಬಗ್ಗೆ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವರು ಹಾಗೂ ವಿಶೇಷ ಪರಿಶ್ರಮ ವಹಿಸಿರುವ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದಿಸಿದ್ದಾರೆ. ಇದನ್ನೂ ಓದಿ: ನಕ್ಸಲ್ ನಿಗ್ರಹ ದಳ ಸಿಬ್ಬಂದಿಗೆ ವಿಶೇಷ ಆಹಾರ ಭತ್ಯೆ ಹೆಚ್ಚಿಸಿದ ಸರ್ಕಾರ
Advertisement
Advertisement
ಈ ಹೆಚ್ಚಿನ ಅನುದಾನದಿಂದಾಗಿ ನೂತನ ರೈಲ್ವೆ ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕೆ, ರೈಲ್ವೆ ಮಾರ್ಗಗಳ ಸಾಮರ್ಥ್ಯ ವೃದ್ಧಿಗೆ, ಹೊಸ ರೈಲುಗಳ ಸಂಚಾರಕ್ಕೆ ಮತ್ತು ಮಾರ್ಗಗಳ ವಿದ್ಯುದೀಕರಣಕ್ಕೆ ಅನುಕೂಲವಾಗಲಿದೆ. ಉತ್ತರ ಕರ್ನಾಟಕಕ್ಕೆ ಸೂಪರ್ ಕೊಡುಗೆ ಈ ಬಾರಿ ಉತ್ತರ ಕರ್ನಾಟಕ ಭಾಗದ ರೈಲ್ವೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸಲು ಆದ್ಯತೆ ನೀಡಿರುವುದು ವಿಶೇಷವಾಗಿದೆ ಎಂದು ಪ್ರಶಂಸಿಸಿದ್ದಾರೆ.
Advertisement
ಧಾರವಾಡ ಕಿತ್ತೂರು ಬೆಳಗಾವಿ ಹೊಸ ಮಾರ್ಗಕ್ಕೆ ರೂ. 20 ಕೋಟಿ, ಗದಗ – ವಾಡಿ ಹೊಸ ಮಾರ್ಗಕ್ಕೆ ರೂ.187 ಕೋಟಿ, ಬಾಗಲಕೋಟೆ – ಕುಡಚಿ, ತುಮಕೂರು-ದಾವಣಗೆರೆ, ಶಿವಮೊಗ್ಗ-ರಾಣೆಬೆನ್ನೂರು ಈ 3 ಹೊಸ ಮಾರ್ಗಗಳಿಗೆ ತಲಾ 50 ಕೋಟಿ ರೂ.ಗಳನ್ನು ಹಂಚಿಕೆ ಮಾಡಿರುವುದು, ಗದಗ್ – ಹೂಟಗಿ ಡಬ್ಲಿಂಗ್ ಲೈನ್‍ಗಾಗಿ 200 ಕೋಟಿ ರೂ. ಹಾಗೂ ಹುಬ್ಬಳ್ಳಿ- ಚಿಕ್ಕಜಾಜೂರು ಡಬ್ಲಿಂಗ್ ಲೈನ್‍ಗಾಗಿ 210 ಕೋಟಿ ರೂಪಾಯಿ ಅನುದಾನ ದೊರೆತಿರುವುದು ಸೇರಿದಂತೆ ಅನೇಕ ಯೋಜನೆಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಕೇಂದ್ರ ಸರ್ಕಾರವು ಕರ್ನಾಟಕದ ಮೇಲಿನ ತನ್ನ ಮಮತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಶ್ಲಾಘಿಸಿದ್ದಾರೆ.
Advertisement
ಇದಲ್ಲದೇ ದೇಶಾದ್ಯಂತ 400 ವಂದೇ ಭಾರತ ರೈಲುಗಳ ಸಂಚಾರ ಪ್ರಾರಂಭವಾಗಲಿದ್ದು, ಇವುಗಳಲ್ಲಿ ಒಂದು ರೈಲನ್ನು ಧಾರವಾಡ ಮತ್ತು ಬೆಂಗಳೂರು ನಡುವೆ ಸಂಚರಿಸಲು ಅವಕಾಶ ಮಾಡಿಕೊಡಬೇಕೆಂದು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಈಗಾಗಲೇ ಮನವಿ ಮಾಡಿಕೊಂಡಿದ್ದು, ಇದಕ್ಕೆ ಕೇಂದ್ರವು ಸಕಾರಾತ್ಮಕವಾಗಿ ಸ್ಪಂದಿಸಿರುವುದರಿಂದ ಇದು ನಮ್ಮ ರಾಜ್ಯಕ್ಕೆ ದೊಡ್ಡ ವರದಾನವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ನಾಳೆಯಿಂದ ಥಿಯೇಟರ್ ಹೌಸ್ ಫುಲ್- ಸರ್ಕಾರದಿಂದ ಅನುಮತಿ