Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯ ಕಡಲೆ ಬೆಳೆಗಾರರ ಬೆನ್ನಿಗೆ ನಿಂತ ಕೇಂದ್ರ – 1 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಅಸ್ತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ರಾಜ್ಯ ಕಡಲೆ ಬೆಳೆಗಾರರ ಬೆನ್ನಿಗೆ ನಿಂತ ಕೇಂದ್ರ – 1 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಅಸ್ತು

Dharwad

ರಾಜ್ಯ ಕಡಲೆ ಬೆಳೆಗಾರರ ಬೆನ್ನಿಗೆ ನಿಂತ ಕೇಂದ್ರ – 1 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಅಸ್ತು

Public TV
Last updated: January 23, 2026 9:31 pm
Public TV
Share
2 Min Read
Chickpea
SHARE

– ಮೋದಿ, ಚೌಹಣ್‌ಗೆ ಧನ್ಯವಾದ ಹೇಳಿದ ಜೋಶಿ

ನವದೆಹಲಿ: ಕೇಂದ್ರ ಸರ್ಕಾರ ರಾಜ್ಯದ ಕಡಲೆ (Chickpea) ಬೆಳೆಗಾರರ ಬೆಂಬಲಕ್ಕೆ ಬಂದಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಅವರ ಮನವಿ ಮೇರೆಗೆ ರಾಜ್ಯದಿಂದ ಬೆಂಬಲ ಬೆಲೆಯಲ್ಲಿ 1 ಲಕ್ಷ ಮೆಟ್ರಿಕ್ ಟನ್ ಕಡಲೆ ಖರೀದಿಗೆ ಅಸ್ತು ಎಂದಿದೆ.

ಬೆಂಬಲ ಬೆಲೆ ಯೋಜನೆಯಡಿ ಕನಿಷ್ಠ ಬೆಂಬಲ ಬೆಲೆ 5,875 ರೂ. ದರದಲ್ಲಿ ಒಟ್ಟು 10,1340 ಎಂಟಿ ಹಿಂಗಾರು ಹಂಗಾಮಿನ ಕಡಲೆ ಕಾಳು ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಈ ಬಗ್ಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್‌ (Shivraj Singh Chouhan) ಅವರು ಜೋಶಿ ಅವರಿಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆ.

ಕರ್ನಾಟಕದ (Karnataka) ಪ್ರಮುಖ ದ್ವಿದಳ ಧಾನ್ಯಗಳಲ್ಲಿ ಕಡ್ಲೆಯೂ ಒಂದಾಗಿದ್ದು, ಸುಮಾರು 9.24 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಉತ್ಪಾದನೆ ಹೊಂದಿದೆ. ಆದರೆ, ಪ್ರಸ್ತುತ ಮಾರುಕಟ್ಟೆ ಬೆಲೆಗಿಂತ ತೀರಾ ಕಡಿಮೆ ಬೆಲೆಯಿಂದಾಗಿ ಕಡಲೆ ಬೆಳೆಗಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಹಾಗಾಗಿ ಬೆಂಬಲ ಬೆಲೆಯಲ್ಲಿ ಖರೀದಿಗೆ ಕ್ರಮ ಕೈಗೊಳ್ಳುವಂತೆ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್‌ ಅವರಿಗೆ ಪತ್ರ ಬರೆದು ಗಮನ ಸೆಳೆದಿದ್ದರು. ಇದನ್ನೂ ಓದಿ: ಬಿಜೆಪಿಗೆ ಅಧಿಕಾರ ನೀಡಿದರೆ ಶಬರಿಮಲೆ ಚಿನ್ನ ಕಳವು ತನಿಖೆ – ಇದು ಮೋದಿ ಗ್ಯಾರಂಟಿ : ಕೇರಳದಲ್ಲಿ ಪ್ರಧಾನಿ ವಚನ

ರಾಜ್ಯದ ರೈತರು ಹಿಂಗಾರಿನಲ್ಲಿ ಬೆಳೆದ ಕಡಲೆ ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ (MSP) ಅಡಿಯಲ್ಲಿ ಖರೀದಿಗೆ ಕೇಂದ್ರ ಕೃಷಿ ಸಚಿವಾಲಯ ಅನುಮತಿ ನೀಡಿದೆ.

ನಾನು ಕೇಂದ್ರ ಕೃಷಿ ಸಚಿವರಲ್ಲಿ ಕರ್ನಾಟಕದಲ್ಲಿ 2025-26ರ ಹಿಂಗಾರು ಬೆಳೆಯಲ್ಲಿ ಬೆಳೆದ ಕಡಲೆ ಕಾಳು ಬೆಳೆಯನ್ನು ರಾಜ್ಯದ ಪ್ರಸ್ತಾವನೆಯಂತೆ ಬೆಂಬಲ ಬೆಲೆ ಯೋಜನೆಯಡಿ (Price Support Scheme… pic.twitter.com/Z5xDu8Jjuq

— Pralhad Joshi (@JoshiPralhad) January 23, 2026


ಕಡಲೆಗೆ ಪ್ರಸ್ತುತ ಮಾರುಕಟ್ಟೆ ಬೆಲೆ 2026-27ಕ್ಕೆ ಘೋಷಿಸಲಾದ ಪ್ರತಿ ಕ್ವಿಂಟಲ್‌ಗೆ 5,875 ರೂ. ಎಂಎಸ್‌ಪಿಗಿಂತ ತುಂಬಾ ಕಡಿಮೆಯಾಗಿದೆ. ಅಲ್ಲದೇ, ಮುಂದಿನ ದಿನಗಳಲ್ಲಿ ಕಡಲೆ ಬೆಲೆ ಮತ್ತಷ್ಟು ಕುಸಿಯುವ ಆತಂಕವಿದೆ. ಆದ್ದರಿಂದ ಕರ್ನಾಟಕದಲ್ಲಿ ಕಡಲೆಗೆ ಬೆಂಬಲ ಬೆಲೆ ಯೋಜನೆ (PSS) ಅನ್ನು ಆದ್ಯತೆ ಮೇರೆಗೆ ಜಾರಿಗೆ ತರುವ ಅವಶ್ಯಕತೆಯಿದೆ ಎಂದು ಜೋಶಿ ಕೃಷಿ ಸಚಿವರಿಗೆ ಮನದಟ್ಟು ಮಾಡಿಕೊಟ್ಟಿದ್ದರು.

ಜೋಶಿ ಅವರ ಮನವಿಗೆ ತಕ್ಷಣವೇ ಸ್ಪಂದಿಸಿದ ಕೃಷಿ ಸಚಿವರು ರಾಜ್ಯದ ರೈತರ ಹಿತದೃಷ್ಟಿಯಿಂದ 1 ಲಕ್ಷ ಮೆಟ್ರಿಕ್ ಟನ್ ಗೂ ಹೆಚ್ಚು ಕಡಲೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ರಾಜ್ಯ ಸರ್ಕಾರಕ್ಕೆ ಅನುಮೋದನೆ ನೀಡಿದ್ದಾರೆ.  ಇದನ್ನೂ ಓದಿ: ಕೇರಳ ಕಾಂಗ್ರೆಸ್ ಕಾರ್ಯತಂತ್ರ ಸಭೆಗೆ ಶಶಿ ತರೂರ್ ಗೈರು

ರಾಜ್ಯ ಸರ್ಕಾರ ಈ ಕೂಡಲೇ ಜಿಲ್ಲಾವಾರು ಖರೀದಿ ಕೇಂದ್ರಗಳನ್ನು ಸ್ಥಾಪಿಸಿ ರೈತರಿಂದ ಬೆಂಬಲ ಬೆಲೆಯಲ್ಲಿ ಕಡಲೆ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದು ಸಚಿವ ಜೋಶಿ ಒತ್ತಾಯಿಸಿದ್ದಾರೆ.

ಬೆಂಬಲ ಬೆಲೆಯಲ್ಲಿ ಕಡಲೆ ಖರೀದಿಗೆ ಅನುಮತಿ ನೀಡುವ ಮೂಲಕ ರಾಜ್ಯದ ರೈತರ ನೆರವಿಗೆ ಬಂದಿರುವ ಪ್ರಧಾನಿ ನರೇಂದ್ರ ಮತ್ತು ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ಜೋಶಿ ಧನ್ಯವಾದ ಅರ್ಪಿಸಿದ್ದಾರೆ.

 

TAGGED:karnatakaPralhad JoshiShivraj Singh Chouhanಕಡಲೆಕರ್ನಾಟಕಪ್ರಹ್ಲಾದ್ ಜೋಶಿಶಿವರಾಜ್ ಸಿಂಗ್ ಚೌಹಾಣ್
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

HAL Techie Murder
Bengaluru City

ಹಣಕಾಸಿನ ವಿಚಾರಕ್ಕಾಗಿ ಡಬಲ್ ಮರ್ಡರ್ – ತಂದೆ, ತಾಯಿಯನ್ನೇ ಕೊಂದ ಟೆಕ್ಕಿ ಅರೆಸ್ಟ್

Public TV
By Public TV
2 minutes ago
Bengaluru Road Rage
Bengaluru City

ಗಾಡಿ ಟಚ್ ಆಗಿದ್ದಕ್ಕೆ ಕಿರಿಕ್ – ಕಾರ್‌ ಬಾನೆಟ್ ಮೇಲೆ ಗೂಡ್ಸ್ ಚಾಲಕನನ್ನು 1 ಕಿ.ಮೀ ಎಳೆದೊಯ್ದು ದುರ್ವರ್ತನೆ

Public TV
By Public TV
17 minutes ago
9 year old girl dies in accident belagavi
Belgaum

ಅಪಘಾತದಲ್ಲಿ 9 ವರ್ಷದ ಬಾಲಕಿ ಸಾವು

Public TV
By Public TV
26 minutes ago
Byrati Basavaraj 1
Bengaluru City

ನಿರೀಕ್ಷಣಾ ಜಾಮೀನು ಅರ್ಜಿ ವಜಾ – ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಬೈರತಿ ಬಸವರಾಜ್

Public TV
By Public TV
52 minutes ago
Cattle fair begins in Motagi Bagalkote 2
Bagalkot

ಬಾಗಲಕೋಟೆ ಮೋಟಗಿಯಲ್ಲಿ ಶುರುವಾಗಿದೆ ಜಾನುವಾರು ಜಾತ್ರೆ

Public TV
By Public TV
1 hour ago
Kaduru Officer 2
Chikkamagaluru

ಶಾಸಕರ ಪಿಎ ಕಿರುಕುಳಕ್ಕೆ ಡೆತ್‌ನೋಟ್ ಬರೆದಿಟ್ಟು ಸರ್ಕಾರಿ ನೌಕರ ನಾಪತ್ತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?