ನವದೆಹಲಿ: ರಾಜ್ಯದಲ್ಲಿ ಬೆಂಬಲ ಬೆಲೆಯೊಂದಿಗೆ ಹೆಚ್ಚುವರಿ ಹೆಸರು ಕಾಳು (Moong) ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದ್ದಾರೆ.
ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ರೈತರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಹೆಚ್ಚುವರಿ ಖರೀದಿಗೆ ಅನುಮತಿ ನೀಡಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕಾಗಿತ್ತು: ಛಲವಾದಿ ಕಿಡಿ
Advertisement
Advertisement
ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಈಗಾಗಲೇ 22,215 ಮೆಟ್ರಿಕ್ ಟನ್ ಹೆಸರುಕಾಳು ಖರೀದಿಸಿದೆ. ರಾಜ್ಯದಲ್ಲಿ ಹೆಸರು ಕಾಳು ಹೆಚ್ಚುವರಿಯಾಗಿ ಬೆಳೆದಿರುವ ಹಿನ್ನೆಲೆ ಸರ್ಕಾರದಿಂದ ಖರೀದಿಗೆ ರೈತರು ಮನವಿ ಮಾಡಿದ್ದರು. ಈ ಹಿನ್ನೆಲೆ 16,105 ಮೆಟ್ರಿಕ್ ಟನ್ ಹೆಚ್ಚುವರಿಯಾಗಿ ಖರೀದಿಸಲು ಕೃಷಿ ಸಚಿವರ ಜೊತೆಗೆ ಮಾತುಕತೆ ನಡೆಸಲಾಗಿತ್ತು. ಇದನ್ನೂ ಓದಿ: ಜಾಗತಿಕ ಶಾಂತಿಗಾಗಿ ಒಟ್ಟಾಗಿ ಕೆಲಸ ಮಾಡೋಣ – ಟ್ರಂಪ್‌ಗೆ ಮೋದಿ ಅಭಿನಂದನೆ
Advertisement
Advertisement
ಮನವಿ ಮೇರೆಗೆ ಕೃಷಿ ಸಚಿವಾಲಯವೂ ಅನುಮತಿ ನೀಡಿದ್ದು, ಸರ್ಕಾರದ ಈ ನಿರ್ಧಾರದಿಂದಾಗಿ ಈ ಬಾರಿ ಒಟ್ಟು 38,320 ಮೆಟ್ರಿಕ್ ಟನ್ ಬೆಂಬಲ ಬೆಲೆ ಅಡಿಯಲ್ಲಿ ಖರೀದಿಗೆ ಅನುಮತಿ ನೀಡಿದಂತಾಗಲಿದೆ. ಶೀಘ್ರದಲ್ಲಿ ಎಫ್‌ಎಕ್ಯೂ ಗುಣಮಟ್ಟದಲ್ಲಿ ಕೇಂದ್ರದ ಸಂಸ್ಥೆಗಳು ಹೆಸರು ಕಾಳು ಖರೀದಿ ಮಾಡಲಿದೆ ಎಂದು ವಿವರಿಸಿದರು. ಇದನ್ನೂ ಓದಿ: ಅಮೆರಿಕ ಅಧ್ಯಕ್ಷೀಯ ಚುನಾವಣೆ; ಟ್ರಂಪ್‌ಗೆ ಐತಿಹಾಸಿಕ ಗೆಲುವು