ತುಮಕೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಗುರಿಯಾಗಿಸಿಕೊಂಡು ಕೇಂದ್ರ ಸರ್ಕಾರವು ಪ್ರವೀಣ್ ಸೂದ್ ಅವರನ್ನು ಸಿಬಿಐ ನಿರ್ದೇಶಕರನ್ನಾಗಿ ನೇಮಕ ಮಾಡಿದೆ ಎಂದು ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ ಗಂಭೀರ ಆರೋಪ ಮಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆದರಿಸುವುದು, ಬ್ಲ್ಯಾಕ್‌ಮೇಲ್ ರಾಜಕಾರಣ ಮಾಡುವುದು ಬಿಜೆಪಿಗರ ಕೆಲಸ. 40% ಕಮಿಷನ್, ಬೆಲೆ ಏರಿಕೆಯಿಂದ ಬಿಜೆಪಿ ಸೋತಿದೆ. ಬಿಜೆಪಿ ರಾಜ್ಯ ನಾಯಕರಿಗೆ ಮತ ಸೆಳೆಯುವ ಶಕ್ತಿ ಇಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ಇಷ್ಟು ದಿನ ಏಕೆ ಸುಮ್ಮನಿದ್ದರು?- ಸುಧಾಕರ್ ವಿರುದ್ಧವೇ ತಿರುಗಿ ಬಿದ್ದ ಎಂಟಿಬಿ
Advertisement
Advertisement
ಕಾಂಗ್ರೆಸ್ ಹೈಕಮಾಂಡ್ ಒಲವು ಸಿದ್ದರಾಮಯ್ಯ ಪರವಾಗಿದ್ದು, ಅವರು ಮುಖ್ಯಮಂತ್ರಿ ಆಗುವುದು ಖಚಿತ. ಡಿ.ಕೆ. ಶಿವಕುಮಾರ್ ಕೂಡ ಸಿದ್ದರಾಮಯ್ಯ ಅವರಿಗೆ ಸಹಕಾರ ನೀಡುತ್ತಾರೆ ಎಂಬ ವಿಶ್ವಾಸ ಇದೆ. ಪ್ರಮಾಣ ವಚನ ಸ್ವೀಕರಿಸಿದ ನಂತರ 10 ಕೆ.ಜಿ ಅಕ್ಕಿ ಘೋಷಣೆ ಮಾಡುತ್ತಾರೆ ಎಂದರು.
Advertisement
Advertisement
ನಾನು ಸಹಕಾರ ಸಚಿವ ಸ್ಥಾನದ ಆಕಾಂಕ್ಷಿ. ಅದು ಬಿಟ್ಟು ಬೇರೆ ಏನು ಕೇಳುವುದಿಲ್ಲ. ಮುಂದಿನ ದಿನಗಳಲ್ಲಿ ಮಧುಗಿರಿ ಜಿಲ್ಲೆ ಮಾಡಲು ಪ್ರಯತ್ನಿಸಲಾಗುವುದು. ನುಡಿದಂತೆ ನಡೆಯುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆಗೆ ಕಿರುಕುಳ – ಬಿವಿ ಶ್ರೀನಿವಾಸ್‍ಗೆ ಸುಪ್ರೀಂ ಜಾಮೀನು