ನವದೆಹಲಿ: ನೆರೆ ಪರಿಹಾರ ಬಿಡುಗಡೆ ಮಾಡದ್ದಕ್ಕೆ ಆಕ್ರೋಶ ಹೆಚ್ಚಾದ ಬೆನ್ನಲ್ಲೇ ಕೇಂದ್ರ ಸರ್ಕಾರ 1,200 ಕೋಟಿ ರೂ. ಮಧ್ಯಂತರ ಪರಿಹಾರವನ್ನು ಬಿಡುಗಡೆ ಮಾಡಿದೆ.
ಕೇಂದ್ರ ಸರ್ಕಾರವು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (ಎನ್‌ಡಿಆರ್‌ಎಫ್) ಕರ್ನಾಟಕಕ್ಕೆ 1,200 ಕೋಟಿ ರೂ. ಮತ್ತು ಬಿಹಾರಕ್ಕೆ 400 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿದೆ.
Advertisement
ಗುರುವಾರ ಪ್ರಧಾನಿ ಮೋದಿ ನೇತೃತ್ವದಲ್ಲಿ ಕ್ಯಾಬಿನೆಟ್ ಸಭೆ ನಡೆದಿತ್ತು. ಕ್ಯಾಬಿನೆಟ್ ಸಭೆಗೂ ಮುನ್ನ ಸಚಿವರಾದ ಪ್ರಹ್ಲಾದ್ ಜೋಷಿ ಮತ್ತು ಸದಾನಂದ ಗೌಡ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಭೇಟಿ ಮಾಡಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು.
Advertisement
Advertisement
ನೆರೆ ಪರಿಹಾರ ವಿಳಂಬಕ್ಕಾಗಿ ಜನರು ಪ್ರಶ್ನೆ ಮಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ವಿರೋಧ ಪಕ್ಷಗಳು ಈ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿವೆ. ಆದಷ್ಟು ಬೇಗ ಪರಿಹಾರ ನೀಡುವಂತೆ ಸಚಿವರು ಮನವಿ ಮಾಡಿದ್ದರು.
Advertisement
Central Government has released an amount of 1200 Crores for Karnataka in advance from the National Disaster Response Fund. Expressing gratitude for the support to @PMOIndia Sri @narendramodi ji & @HMOIndia Sri @AmitShah ji on behalf of the people of Karnataka.
— B.S.Yediyurappa (@BSYBJP) October 4, 2019
ಕರ್ನಾಟಕದ ಬಿಜೆಪಿ ನಾಯಕರನ್ನು ಜನ ತರಾಟೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿತ್ತು. ಗುರುವಾರ ಕಂದಾಯ ಇಲಾಖೆ ಕಾರ್ಯದರ್ಶಿ ಟಿ.ಕೆ ಅನೀಲ್ ಕುಮಾರ್ ನೇತೃತ್ವದ ನಿಯೋಗ ದೆಹಲಿಗೆ ಆಗಮಿಸಿ ಗೃಹ ಇಲಾಖೆಗೆ ಹಾನಿಯ ಬಗ್ಗೆ ಸ್ಪಷ್ಟೀಕರಣವನ್ನು ನೀಡಿತ್ತು.