ಮಂಗಳೂರು: ಕೊನೆಗೂ ಕರಾವಳಿ ಭಾಗದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದ ಸುರತ್ಕಲ್(Surathkal) ಸಮೀಪದ ಟೋಲ್ ಸಂಗ್ರಹ ಕೇಂದ್ರ(Toll Collection) ರದ್ದಾಗಿದೆ.
ಸಂಸದ ನಳಿನ್ ಕುಮಾರ್ ಕಟೀಲ್(Nalin Kumar Kateel) ಟ್ವೀಟ್ ಮಾಡಿ ಈ ವಿಚಾರವನ್ನು ತಿಳಿಸಿದ್ದಾರೆ. ಈ ಟೋಲ್ ಸಂಗ್ರಹ ಕೇಂದ್ರವನ್ನು ರದ್ದು ಮಾಡಬೇಕೆಂದು ಜನರು ಪ್ರತಿಭಟನೆಗೆ ಇಳಿದಿದ್ದರು.
Advertisement
ಈ ಸಂಬಂಧ ಟ್ವೀಟ್ ಮಾಡಿದ ನಳಿನ್ ಕುಮಾರ್, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು. ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ ಎಂದಿದ್ದಾರೆ.
Advertisement
ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ಶ್ರೀ @nitin_gadkari ಹಾಗೂ ಪ್ರಧಾನಿ ಶ್ರೀ @narendramodi ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು.
ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ.
— Nalinkumar Kateel (@nalinkateel) November 14, 2022
Advertisement
ರದ್ದಾಗಿದ್ದು ಯಾಕೆ?
60 ಕಿ.ಮೀ ಅಂತರದಲ್ಲಿ ಒಂದಕ್ಕಿಂತ ಹೆಚ್ಚು ಟೋಲ್ ಇರಬಾರದು ಎಂಬುದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮ. ಈ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನಲ್ಲಿರುವ ಟೋಲ್‍ಗೇಟ್ ಅಕ್ರಮ ಎಂಬುದು ಟೋಲ್ ವಿರೋಧಿ ಹೋರಾಟಗಾರರ ಆರೋಪವಾಗಿತ್ತು. ಇದನ್ನೂ ಓದಿ: ಕಾಮೋತ್ತೇಜಕ ಮಾತ್ರೆ ಸೇವಿಸಿ ರೇಪ್ – ವಿಪರೀತ ರಕ್ತಸ್ರಾವದಿಂದ ಗೆಳತಿ ಸಾವು
Advertisement
ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್‍ನ ಎನ್‌ಐಟಿಕೆ ಬಳಿ ಕಾರ್ಯಾಚರಿಸುತ್ತಿರುವ ಟೋಲ್‍ಗೇಟ್, ಉಡುಪಿ ಜಿಲ್ಲೆಯ ಹೆಜಮಾಡಿ ಟೋಲ್‍ಗೇಟ್ ಆರಂಭವಾದ ಬಳಿಕ ಮುಚ್ಚುವ ಒಪ್ಪಂದದೊಂದಿಗೆ 6 ವರ್ಷದ ಹಿಂದೆ ತಾತ್ಕಾಲಿಕ ನೆಲೆಯಲ್ಲಿ ಆರಂಭಗೊಂಡಿತ್ತು. ತಾತ್ಕಾಲಿಕ ನೆಲೆಯಲ್ಲಿ ಆರಂಭವಾದ ಟೋಲ್‌ನಲ್ಲೀ ಈಗಲೂ ಹಣ ಸಂಗ್ರಹ ಮಾಡುತ್ತಿರುವುದು ಸುರತ್ಕಲ್ ಟೋಲ್ ವಿರೋಧಿ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿತ್ತು.
ಕೇಂದ್ರದ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು 60 ಕಿ.ಮೀ ಒಳಗಿನ ಎಲ್ಲ ಟೋಲ್‍ಗೇಟ್‍ಗಳನ್ನು 90 ದಿನಗಳೊಳಗೆ ತೆರವುಗೊಳಿಸುವುದಾಗಿ ಲೋಕಸಭೆಯಲ್ಲಿ ಹೇಳಿದ್ದರು. ಈ ಹಿನ್ನೆಲೆ ಸಂಸದರು, ಶಾಸಕರು ಸುರತ್ಕಲ್ ಟೋಲ್‍ಗೇಟ್ ತೆರವು ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಈ ಭರವಸೆಯ ಗಡವು ಜೂನ್ 22ಕ್ಕೆ ಮುಕ್ತಾಯಗೊಂಡಿದ್ದರೂ ಟೋಲ್ ಸಂಗ್ರಹ ನಡೆಯುತ್ತಿತ್ತು. ಹೀಗಾಗಿ ಅಕ್ರಮವಾಗಿ ನಡೆಯುತ್ತಿರುವ ಟೋಲ್ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಇಳಿದಿದ್ದರು.