– ಒಬ್ಬ ಅಧಿಕಾರಿ ಬಂದು ನಿಮ್ಮನ್ನ ಕ್ರಿಮಿನಲ್ ಅಂದ್ರೆ ಏನ್ ಮಾಡ್ತೀರಿ ಸಿದ್ಧರಾಮಯ್ಯನವರೇ?
– ನಾನು ಬೇಲ್ ತೆಗೆದುಕೊಂಡಿದ್ದೇನೆ, ಆ ಅಧಿಕಾರಿ ಸ್ಟೇ ತೆಗೆದುಕೊಂಡಿದ್ದಾರೆ ಎಂದ ಕೇಂದ್ರ ಸಚಿವ
ನವದೆಹಲಿ: ಹಿಂದೆ ಇದೇ ಸಿದ್ದರಾಮಯ್ಯ (Siddaramaiah) ಅವರ ಪಟಾಲಂ ನನ್ನನ್ನು ಒಂದು ದಿನವಾದರೂ ಜೈಲಿಗೆ ಕಳಿಸಬೇಕು ಎಂದು ಸಂಚು ಹೂಡಿತ್ತು. ಈಗಿರುವ ಅವರ ಪಟಾಲಂ ಕೂಡ ಅದೇ ರೀತಿಯಲ್ಲಿ ಕನಸು ಕಾಣುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಆರೋಪಿಸಿದರು.
ದೆಹಲಿಯಲ್ಲಿ (New Delhi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಒಬ್ಬ ಅಧಿಕಾರಿಯ ಕರ್ಮಕಾಂಡದ ಬಗ್ಗೆ ಮಾತಾಡಿದ್ದೆ. ಮಾಧ್ಯಮಗಳ ಮುಂದೆ ಅವರ ಕಥೆಯನ್ನು ಬಯಲು ಮಾಡಿದ್ದೆ. ಆದರೆ, ಅವರು ನನ್ನನ್ನ ಜೈಲಿಗೆ ಕಳಿಸುವ ತಿರುಕನ ಕನಸು ಕಾಣುತ್ತಿದ್ದಾರೆ. ಅವರು ಎಲ್ಲಿ ಯಾರ ಚೇಂಬರ್ ನಲ್ಲಿ ಕುಳಿತು ಮಾತಾಡಿದ್ದಾರೆ ಎನ್ನುವ ಮಾಹಿತಿ ನನಗೆ ಇದೆ. ಒಂದು ದಿನವಾದರೂ ಕುಮಾರಸ್ವಾಮಿಯನ್ನು ಜೈಲಿಗೆ ಹಾಕಬೇಕು ಕಳಿಸಬೇಕೆಂದು ಚರ್ಚೆ ಮಾಡಲಾಗಿದೆ ಆರೋಪ ಮಾಡಿದರು.
Advertisement
Advertisement
ನಾನು ಜಾಮೀನು ತೆಗೆದುಕೊಂಡಿದ್ದೇನೆ. ಅದಕ್ಕೆ ಕಾನೂನಿನಲ್ಲಿ ಅವಕಾಶವಿದೆ. ಆದರೆ ಈ ಸರ್ಕಾರದ ಕೆಟ್ಟ ಅಧಿಕಾರಿಗಳು ಏನು ಬೇಕಾದರೂ ಮಾಡುತ್ತಾರೆ ಎಂದು ನನ್ನ ವಕೀಲರು ಜಾಮೀನು ಪಡೆದುಕೊಳ್ಳಬೇಕು ಎಂದು ಹೇಳಿದ್ದರು. ಅದಕ್ಕೆ ಜಾಮೀನು ಪಡೆದಿದ್ದೇನೆ ಎಂದು ಅವರು ಹೇಳಿದರು. ಇದನ್ನೂ ಓದಿ: ರೇಪ್ ಆರೋಪಿಗಳಿಗೆ ಪುರುಷತ್ವ ಹರಣ – ಇಟಲಿಯಲ್ಲಿ ಶೀಘ್ರವೇ ಬರಲಿದೆ ಹೊಸ ಕಾನೂನು
Advertisement
Advertisement
ಕಳೆದ 3-4 ತಿಂಗಳಿಂದ ರಾಜ್ಯದಲ್ಲಿ ಏನೆಲ್ಲಾ ನಡೆಯುತ್ತಿದೆ ಎನ್ನುವುದು ನನಗೆ ಗೊತ್ತಿದೆ. 80 ಕೋಟಿ ರೂ. ಗುಳುಂ ಮಾಡಿರೋ ಪ್ರಕರಣದಲ್ಲಿ ಏನಾಯಿತು? ಎಸ್‌ಐಟಿ ಯಾರನ್ನೋ ಬಂಧನ ಮಾಡಿದ್ದರು. ಯಾರೋ ಸಂಬಂಧವಿಲ್ಲದ ವ್ಯಕ್ತಿಯ ಹೆಸರನ್ನು ಪ್ರಕರಣದಲ್ಲಿ ಸೇರಿಸಿದಿರಿ. ನಾನು ಯಾವುದೇ ಅಧಿಕಾರಿಯನ್ನು ವೈಯಕ್ತಿಕವಾಗಿ ಬಳಸಿಕೊಂಡಿಲ್ಲ. ನಾನು ಆ ಅಧಿಕಾರಿಯನ್ನು ಪ್ರಶ್ನೆ ಮಾಡಿದ್ದು ನನ್ನ ಕೇಸ್ ಬಗ್ಗೆ ಅಲ್ಲ. ರಾಜ್ಯಪಾಲರ ಕಚೇರಿ ತನಿಖೆ ಮಾಡುವುದಕ್ಕೆ ಅವಕಾಶ ಕೇಳಿ ಪತ್ರ ಬರೆದು, ಒಂದು ಖಾಸಗಿ ಚಾನೆಲ್‌ಗೆ ಲೀಕ್ ಮಾಡಿರುವ ಹಿನ್ನೆಲೆಯಲ್ಲಿ ನಾನು ಪ್ರಶ್ನೆ ಮಾಡಿದ್ದು ಎಂದು ಅವರು ಹೇಳಿದರು.
ನಾನು ಆ ಪೋಲಿಸ್ ಅಧಿಕಾರಿಯ ಉದ್ಧಟನವನ್ನು ಖಂಡಿಸಿದ್ದೆ. ಆ ಅಧಿಕಾರಿಯ ಹಿನ್ನೆಲೆ ಏನಿದೆ ಎನ್ನುವುದನ್ನು ಹೇಳಿದ್ದೇನೆ. ಬೆಂಗಳೂರಿನ ಲ್ಯಾಂಡ್ ಮಾಫಿಯಾ, ಕಾನೂನು ಬಾಹಿರ ಚಟುವಟಿಕೆ ಮಾಡುವವರ ಜೊತೆ ಅವರ ನೇರ ನಂಟಿದೆ. ಸಮಾಜ ವಿದ್ರೋಹಿ ಶಕ್ತಿಗಳಿಗೆ ಸಾಥ್ ನೀಡಲು ಈ ವ್ಯಕ್ತಿಗೆ ಐಪಿಎಸ್ ಸ್ಥಾನ ಕೊಟ್ಟಿದ್ದಾರಾ? ಕ್ರಿಮಿನಲ್ ಪ್ರಕರಣದಲ್ಲಿ (Criminal Case) ಅಧಿಕಾರಿಯೇ ಆರೋಪಿ ನಂಬರ್ 2 ಆಗಿದ್ದಾರೆ. ಸದ್ಯ ಜಾಮೀನು ಮೇಲೆ ಹೊರಗಡೆ ಇದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು. ಇದನ್ನೂ ಓದಿ: ಅಣ್ಣನಿಗೆ ಆಗದೇ ಇರೋರು ಹಗರಣ ಮಾಡಿದ್ದಾರೆ, ಸಿದ್ದರಾಮಯ್ಯ ರಾಜೀನಾಮೆ ಕೊಡಬಾರದು: ಸಿಎಂ ಸಹೋದರ
ನಿಮ್ಮನ್ನ ಕ್ರಿಮಿನಲ್ ಅಂದ್ರೆ ಏನ್ ಮಾಡ್ತೀರಿ?
ಅಧಿಕಾರಿಗಳು ಸಿಎಂ ಬಳಿ ಬಂದು ನೀವು ಕ್ರಿಮಿನಲ್ ಸಿಎಂ ಅಂದ್ರೆ ಏನು ಮಾಡುತ್ತೀರಿ? ಶನಿವಾರ ಕಚೇರಿಗೆ ರಜೆ ಇದ್ದರೂ ಸಹೋದ್ಯೋಗಿಗಳಿಗೆ ಪತ್ರ ಬರೆಯುವ ನೆಲದಲ್ಲಿ ನನ್ನ ಬಗ್ಗೆ ಅಶ್ಲೀಲ ಭಾಷೆ ಬಳಕೆ ಮಾಡಿದ್ದಾರೆ. ಅದು ಕಚೇರಿ ಮೆಮೊ ಅಲ್ಲ, ಅದರಲ್ಲಿ ಸೀಲ್ ಇಲ್ಲ, ಆ ಇಲಾಖೆಯ ಎಂಬಲಂ ಇಲ್ಲ ಎಂದು ಸಚಿವರು ಹೇಳಿದರು.
ಇಂಥ ಅಧಿಕಾರಿಗಳು ಸರ್ಕಾರವನ್ನು ಮೆಚ್ಚಿಸಲು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಾರೆ. ಅದಕ್ಕಾಗಿ ಸಲುವಾಗಿ ಜಾಮೀನು ತೆಗೆದುಕೊಂಡೆ. ಆ ಅಧಿಕಾರಿ ಮೇಲೆಯೂ ಪ್ರಕರಣ ಇದೆ. ಅವರು ಆರೋಪಿ ನಂಬರ್ 2, ಹೈಕೋರ್ಟ್ ನಲ್ಲಿ ತನಿಖೆಗೆ ಸ್ಟೇ ತಗೊಂಡಿದ್ದಾರೆ. ನಾನು ಬರೀ ಜಾಮೀನು ತಗೊಂಡಿದ್ದೇನೆ. ಸ್ಟೇ ತೆಗೆದುಕೊಂಡಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು. ಇದನ್ನೂ ಓದಿ: ರೇಪ್ ಆರೋಪಿಗಳಿಗೆ ಪುರುಷತ್ವ ಹರಣ – ಇಟಲಿಯಲ್ಲಿ ಶೀಘ್ರವೇ ಬರಲಿದೆ ಹೊಸ ಕಾನೂನು
ಗೃಹ ಸಚಿವ ಡಾ.ಪರಮೇಶ್ವರ್ ಶದ್ಧ ಪಂಡಿತರು. ನನ್ನ ಹೆಸರು ಉಲ್ಲೇಖಿಸಿಲ್ಲ ಅಂತಾರೆ. ಸಿಎಂ ಮೇಲೂ ಆರೋಪ ಇದೆ, ನಾಳೆ ಬೆಳಗ್ಗೆ ಬಂದು ನಿಮ್ಮ ಅಧಿಕಾರಿ ನಿಮ್ಮನ್ನು ಕ್ರಿಮಿನಲ್ ಮುಖ್ಯಮಂತ್ರಿ ಅಂತಾ ಕರೆದರೆ ಏನು ಮಾಡುತ್ತೀರಿ? ನನ್ನ ವಿರುದ್ಧ ಬರೆದ ಪತ್ರ ಹೇಗೆ ಹಂಚಲಾಯಿತು? ನನ್ನ ವಿರುದ್ಧ ಸಿಎಂ ಕಚೇರಿಯಿಂದ ಸೋಮವಾರ ರಾತ್ರಿ ಮತ್ತೊಂದು ಪತ್ರ ದಾಖಲೆಗಳು ಹೋಗಿವೆ. ಪತ್ರದಲ್ಲಿ ಉಲ್ಲೇಖಿಸಿರುವ ಕಿಶೋರ್ ಕುಮಾರ ಅವರನ್ನು ಇವರು ಎಲ್ಲಿಗೆ ಕರೆಸಿಕೊಂಡಿದ್ದರು? ಎಂದು ಅವರು ಪ್ರಶ್ನಿಸಿದರು.