ಹುಬ್ಬಳ್ಳಿ: ರಾಮ ಒಳ್ಳೆಯ ಭಕ್ತನಿಗಾಗಿ ಕಾಯುತ್ತಿದ್ದ. ಮೋದಿಯಂತಹ ಒಳ್ಳೆಯ ಭಕ್ತ ಸಿಕ್ಕ ಮೇಲೆ ಪ್ರಾಣ ಪ್ರತಿಷ್ಠಾಪನೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದ್ದಾರೆ.
ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ (Pran Prathistha ceremony) ಹಿನ್ನೆಲೆ ಜೋಶಿಯವರು ಹುಬ್ಬಳ್ಳಿಯಲ್ಲಿ ಅಯೋಧ್ಯೆಯ ನೇರ ಪ್ರಸಾರ ವೀಕ್ಷಣೆ ಮಾಡಿದರು. ಬಳಿಕ ಮಾತನಾಡಿದ ಅವರು, ನಮ್ಮ ಮನೆಗೆ ರಾಮ ಬಂದಿದ್ದಾನೆ ಅನ್ನೋ ರೀತಿನಲ್ಲಿ ಜನ ಖುಷಿಪಡುತ್ತಿದ್ದಾರೆ. ಇದೇ ರಾಮನ ಪ್ರತಿಷ್ಠಾಪನೆಗಾಗಿ 500 ವರ್ಷಗಳ ಹೋರಾಟ ನಡೆದಿತ್ತು. ಇಂದು ಅತ್ಯಂತ ಸರಳವಾಗಿ ಸುಸೂತ್ರವಾಗಿ ರಾಮನ ಪ್ರತಿಷ್ಠಾಪನೆಯಾಗಿದೆ ಎಂದರು.
Advertisement
Advertisement
ಇದೇ ವೇಳೆ ಕರ್ನಾಟಕದಲ್ಲಿ ರಜೆ ನೀಡದೆ ಇರೋದಕ್ಕೆ ಕಿಡಿಕಾರಿದ ಜೋಶಿ, ಕಾಂಗ್ರೆಸ್ (Congress) ತುಷ್ಟೀಕರಣದ ರಾಜಕಾರಣ ಮಾಡುತ್ತಿದೆ. ಅಯೋಧ್ಯೆಗೆ ಹೋಗುವುದರ ಬಗ್ಗೆಯೇ ಅವರಲ್ಲಿ ಗೊಂದಲ ಇದೆ. ರಾಮ ಜನ್ಮಭೂಮಿ ಹೋರಾಟ ಆರಂಭವಾದಾಗಿನಿಂದಲೂ ಕಾಂಗ್ರೆಸ್ ಕನ್ಫ್ಯೂಸ್‍ನಲ್ಲಿದೆ ಎಂದರು. ಇದನ್ನೂ ಓದಿ: ಮಂತ್ರಾಲಯದಲ್ಲಿ ಅದ್ಧೂರಿ ರಾಮೋತ್ಸವ – ಅಭಯರಾಮನ ಅನಾವರಣ
Advertisement
ಮೊದಲು ಆಹ್ವಾನ ಪತ್ರಿಕೆ ಬಂದಿಲ್ಲ ಅಂದ್ರು. ಸೋನಿಯಾ ಗಾಂಧಿ (Sonia Gandhi) ಮತ್ತು ಮಲ್ಲಿಕಾರ್ಜುನ ಖರ್ಗೆಗೆ (Mallikarjun Kharge) ಆಹ್ವಾನ ಕೊಡಲಾಗಿತ್ತು. ಆಹ್ವಾನ ಬಂದ ಮೇಲೆ ನಾವು ಹೋಗಲ್ಲ ಅಂದ್ರು. ಈಗ ರಜೆ ಕೊಡುವ ಕುರಿತು ಅವರಲ್ಲಿ ಗೊಂದಲವಿದೆ. ರಾಹುಲ್ ಗಾಂಧಿಯವರನ್ನು ಸಿದ್ದರಾಮಯ್ಯ ಕೇಳಿರಬೇಕು. ಅವರು ರಜೆ ಬೇಡ ಅಂದಿರಬೇಕು. ಸಿದ್ದರಾಮಯ್ಯ ಮೊದಲಿನಿಂದಲೂ ಹಿಂದೂ ವಿರೋಧಿ. ಮತಕ್ಕಾಗಿ ಸಿದ್ದರಾಮಯ್ಯ ಅಯೋಧ್ಯೆಗೆ ಈಗ ಹೋಗ್ತೀನಿ ಅಂತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.