ಉಗ್ರರನ್ನು ಕಾಂಗ್ರೆಸ್ ರಕ್ಷಿಸುತ್ತಿದೆ: ಶೋಭಾ ಕರಂದ್ಲಾಜೆ ವಾಗ್ದಾಳಿ

Public TV
2 Min Read
SHOBHA KARANDLAJE

ನವದೆಹಲಿ: ಕಾಂಗ್ರೆಸ್ ಸರ್ಕಾರ (Congress Govt) ಉಗ್ರರರನ್ನು ರಕ್ಷಣೆ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಮತ್ತೊಂದು ಉಗ್ರಗಾಮಿ ಚಟುವಟಿಕೆ ಬಯಲಾಗಿದೆ. 2008ರ ಸರಣಿ ಸ್ಫೋಟ ನಡೆದಿತ್ತು, ಆರೋಪಿ ಜೈಲಿನಲ್ಲಿದ್ದಾನೆ. ಜಾಹಿದ್ ತರ್ಬೇಜ್ ಮನೆಯಲ್ಲಿ ನಾಲ್ಕು ಜೀವಂತ ಗ್ರಾನೈಡ್ ಸಿಕ್ಕಿವೆ. ಬಂಧಿಸಿದವರ ಬಳಿ ಏಳು ಕಂಟ್ರಿಮೇಡ್ ಬುಲೆಟ್, ಸ್ಯಾಟಲೈಟ್ ಫೋನ್ ಸೆಟ್ ಸಿಕ್ಕಿವೆ ಎಂದರು.

ಬಾಂಬ್ ಸ್ಫೋಟಕ್ಕೆ ಬೇಕಾದ ಸಾಮಗ್ರಿ ಸಿಕ್ಕಿವೆ. ಮೊಹಮ್ಮದ್ ಜುನೈದ್ ಸಾಮಗ್ರಿ ಸರಬರಾಜು ಮಾಡಿದ್ದಾನೆ. ಜುನೈದ್ ಪಾರ್ಸೆಲ್ ಮೂಲಕ ಸಾಮಗ್ರಿ ಕಳುಹಿಸಿದ್ದಾನೆ. ಕರ್ನಾಟಕ ಗೃಹ ಸಚಿವರು ಇವರು ಅಪರಾಧಿಗಳಲ್ಲ ಎಂದಿದ್ದಾರೆ. ತನಿಖೆಯನ್ನು ದಾರಿ ತಪ್ಪಿಸುವ ವರ್ತನೆ ಇದು. ಭಯೋತ್ಪಾದಕರ ರಕ್ಷಣೆ ಮಾಡುವ ಕೆಲಸ ನಡೆಯುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಮಾನಹಾನಿ ಕೇಸ್‌ನಲ್ಲಿ ಜೈಲು ಶಿಕ್ಷೆ – ಸುಪ್ರೀಂ ಕೋರ್ಟ್‌ನಲ್ಲೂ ರಾಹುಲ್ ಗಾಂಧಿಗೆ ಹಿನ್ನಡೆ

ಲಷ್ಕರ್ ಇ ತೋಯ್ಬಾ ಸಂಘಟನೆ ಲಿಂಕ್ ಇದೆ. ವಿದೇಶಿ ಸಂಘಟನೆಗಳ ಕೈವಾಡ ಇದೆ. ಈ ಕೇಸ್ ಅನ್ನು ಎನ್ ಐಎ ಗೆ ವಹಿಸಬೇಕು. ಎನ್ ಐಎ (NIA)  ಇಂದ ಮಾತ್ರ ತನಿಖೆ ಸಾಧ್ಯ. ಸರ್ಕಾರ ಕೇಸ್ ಅನ್ನು ಹಗುರವಾಗಿ ತೆಗೆದುಕೊಳ್ಳಬಾರದು. ದಕ್ಷಿಣ ಭಾರತದ ರಕ್ಷಣೆಯ ದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಬೇಕು. ನಮ್ಮ ಜನರನ್ನು ಕಾಪಾಡುವ ಜವಾಬ್ದಾರಿ ಸರ್ಕಾರದ ಮೇಲಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಸರ್ಕಾರ ಭಜರಂಗದಳದ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದೆ. ಕಾರ್ಯಕರ್ತರನ್ನು ಹೆದರಿಸುವಂತ ಕೆಲಸ ಮಾಡುತ್ತಿದೆ. ಆರ್ ಎಸ್ ಎಸ್ ಜಮೀನು ತೆಗೆದುಕೊಳ್ಳುವ ಕೆಲಸ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಎಷ್ಟು ಜನರನ್ನು ಗಡಿ ಪಾಡು ಮಾಡುತ್ತೀರಿ. ನಾನು ಭಗರಂಗದಳ ಕಾರ್ಯಕರ್ತೆ, ಆರ್ ಎಸ್ ಎಸ್ ಕಾರ್ಯಕರ್ತೆ. ನನ್ನನ್ನು ಎಲ್ಲಿಗೆ ಗಡಿಪಾರು ಮಾಡುತ್ತೀರಿ ಎಂದು ಪ್ರಶ್ನಿಸಿದ್ದಾರೆ.

ದೇಶದಲ್ಲಿ ಪ್ರಜಾಪ್ರಭುತ್ವ ಜೀವಂತವಾಗಿದೆ. ಭಯೋತ್ಪಾದಕರನ್ನು ರಕ್ಷಣೆ ಮಾಡುತ್ತೀರಿ. ಇನ್ನೊಂದು ಕಡೆ ಸಂಘಪರಿವಾರದವರನ್ನು ಟಾರ್ಗೆಟ್ ಮಾಡುತ್ತೀರಿ. 135 ಸೀಟು ಬಂದಿದೆ ಎಂಬ ಅಹಂಕಾರದಿಂದ ಮುಂದುವರಿದರೆ ಜನರು ಪಾಠ ಕಲಿಸುತ್ತಾರೆ ಎಂದು ಶೋಭಾ ಕರಂದ್ಲಾಜೆ ಗರಂ ಆಗಿದ್ದಾರೆ.

Web Stories

Share This Article