ಪ್ರವೀಣ್ ನೆಟ್ಟಾರು ಮನೆಗೆ ಶೋಭಾ ಕರಂದ್ಲಾಜೆ ಭೇಟಿ- ಕುಟುಂಬಸ್ಥರಿಗೆ ಸಾಂತ್ವನ, 5 ಲಕ್ಷ ಪರಿಹಾರ

Public TV
1 Min Read
SHOBHA KARANDLAJE

ಮಂಗಳೂರು: ಇತ್ತೀಚೆಗೆ ದುಷ್ಕರ್ಮಿಗಳ ದಾಳಿಗೆ ಮೃತಪಟ್ಟ ಬಿಜೆಪಿ ಯುವಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಮನೆಗೆ ಇಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

SHOBHA KARANDLAJE 2

ಈ ವೇಳೆ ಸಚಿವೆ ಕುಟುಂಬಕ್ಕೆ 5 ಲಕ್ಷ ರೂ. ನಗದು ಪರಿಹಾರ ನೀಡಿದರು. ಅಲ್ಲದೆ ಒಂದು ತಿಂಗಳ ಸಂಬಳ ನೀಡುವುದಾಗಿ ಘೋಷಣೆ ಮಾಡಿದರು. ಇದೇ ವೇಳೆ ಹಲವಾರು ಕಾರ್ಯಕರ್ತರ ಚೆಕ್ ವಿತರಣೆಯನ್ನು ಕೂಡ ಶೋಭಾ ಕರಂದ್ಲಾಜೆ ಮಾಡಿದರು. ಪ್ರವೀಣ್ ಸಾವಿಗೆ ನ್ಯಾಯ ಒದಗಿಸಬೇಕೆಂದು ಈ ಸಂದರ್ಭದಲ್ಲಿ ಅಚಿವೆ ಮುಂದೆ ಕುಟುಂಬಸ್ಥರು ಕಣ್ಣೀರಿಟ್ಟರು. ಇದನ್ನೂ ಓದಿ: ಕೊಲೆ ಮಾಡಿ ಮನೆಗೆ ಬರಲು ಸಾಧ್ಯವೇ..?: ಬಂಧಿತ ಝಾಕೀರ್ ತಾಯಿ

SHOBHA KARANDLAJE 1

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31), ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‍ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು. ಇದನ್ನೂ ಓದಿ: ಹಲಾಲ್, ಜಟ್ಕಾ ಜಟಾಪಟಿಯೇ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಕಾರಣವಾಯ್ತಾ..?

PRAVEEN KUMAR NETTARU ACCUSED ZAKIR SHAFIQ

ಪ್ರವೀಣ್ ಹತ್ಯೆಯ ಬಳಿಕ ಕರಾವಳಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ ಇಬ್ಬರು ಪ್ರಮುಖ ಆರೋಪಿಗಳಾದ ಸವಣೂರು ಮೂಲದ ಝಕೀರ್ ಮತ್ತು ಶಫೀಕ್ ಬೆಳ್ಳಾರೆಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಇದೀಗ ಮತ್ತೊಬ್ಬ ಆರೋಪಿಯನ್ನು ಕೇರಳದಲ್ಲಿ ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಕೂಡ ದೊರೆತಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *