Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ ಅನುದಾನವನ್ನು ಕೇಂದ್ರ ತಕ್ಷಣವೇ ಬಿಡುಗಡೆಗೊಳಿಸಲಿ : ಎಚ್.ಕೆ ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ ಅನುದಾನವನ್ನು ಕೇಂದ್ರ ತಕ್ಷಣವೇ ಬಿಡುಗಡೆಗೊಳಿಸಲಿ : ಎಚ್.ಕೆ ಪಾಟೀಲ್

Bengaluru City

ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ ಅನುದಾನವನ್ನು ಕೇಂದ್ರ ತಕ್ಷಣವೇ ಬಿಡುಗಡೆಗೊಳಿಸಲಿ : ಎಚ್.ಕೆ ಪಾಟೀಲ್

Public TV
Last updated: September 10, 2024 6:27 pm
Public TV
Share
2 Min Read
HK Patil
SHARE

ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಗೆ (Bhadra Meldande Project) 5,300 ಕೋಟಿ ರೂ. ಅನುದಾನವನ್ನು ತಕ್ಷಣವೇ ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್ (H K Patil) ಒತ್ತಾಯಿಸಿದ್ದಾರೆ.

2023-24ನೇ ಸಾಲಿನ ಮುಂಗಡ ಪತ್ರದಲ್ಲಿ ಕೇಂದ್ರ ಸರ್ಕಾರವು ಘೋಷಿಸಿರುವಂತೆ ಬರ ಸಂಭವನೀಯ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದಿದ್ದಾರೆ.ಇದನ್ನೂ ಓದಿ: ಕಾಶಿನಾಥ್ ಪುತ್ರನ ಸಿನಿಮಾದ ಟೀಸರ್ ರಿಲೀಸ್: ಕುತೂಹಲ ಮೂಡಿಸಿದ ಸ್ಟೋರಿ

ಕಳೆದ ವರ್ಷ ಫೆ.01 ರಂದು ಕೇಂದ್ರ ಸರ್ಕಾರದ 2023-24ನೇ ಮುಂಗಡ ಪತ್ರದ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ರವರು ಘೋಷಣೆ ಮಾಡಿದ್ದರು. ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ಯೋಜನೆ ಘೋಷಣೆಗೆ ಎಲ್ಲಾ ಅರ್ಹತೆಗಳನ್ನು ಪಡೆದು, ಎಲ್ಲಾ ಷರತ್ತುಗಳನ್ನು ಪೂರೈಸಿ, ಅನುಮೋದನೆಗೊಂಡಿರುತ್ತವೆ ಎಂದು ತಿಳಿಸಿದ್ದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮುಂಗಡ ಪತ್ರದ ಭಾಷಣದಲ್ಲಿ ತಾನೇ ಘೋಷಿಸಿದ ಘೋಷಣೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ಕಿಡಿಕಾರಿದರು.ಇದನ್ನೂ ಓದಿ: ವೃಷಭಾವತಿ ಏತ ನೀರಾವರಿ ಯೋಜನೆ ಕಾಮಗಾರಿ ಚುರುಕುಗೊಳಿಸಲು ಸಚಿವ ಎನ್.ಎಸ್ ಬೋಸರಾಜು ಸೂಚನೆ

H K Patil

ಕರ್ನಾಟಕ ಸರ್ಕಾರ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರು 2024ರ ಜು.19, ಆ.03 ಹಾಗೂ ಆ.06 ರಂದು ಬರೆದ ಪತ್ರಕ್ಕೆ ಉತ್ತರ ಬರೆದ ಕೇಂದ್ರ ಜಲಶಕ್ತಿ ಸಚಿವಾಲಯದ ಜಲಸಂಪನ್ಮೂಲ, ನದಿ ಅಭಿವೃದ್ಧಿ ಹಾಗೂ ಗಂಗಾ ಪುನರುಜ್ಜೀವನ ಇಲಾಖೆಯ ಕಾರ್ಯದರ್ಶಿ ದೇಬಶ್ರೀ ಮುಖರ್ಜಿಯವರು ಹಾರಿಕೆಯ ಉತ್ತರ ನೀಡಿದ್ದಾರೆ.

ಕೇಂದ್ರದ ನಿಯಮಗಳು ಮತ್ತು ಷರತ್ತುಗಳಂತೆ ಎಲ್ಲಾ ಹಂತಗಳಲ್ಲೂ ಅನುಮೋದನೆಗೊಂಡು ಮುಂಗಡ ಪತ್ರದಲ್ಲಿ ಘೋಷಣೆಯಾಗಿದೆ. ಆದರೆ ಈ ಯೋಜನೆಗೆ ಈಗ ನಿರಾಕರಿಸುತ್ತಿರುವುದು ಒಕ್ಕೂಟ ವ್ಯವಸ್ಥೆಯ ಉನ್ನತ ಸಂಪ್ರದಾಯಗಳಿಗೆ ಮತ್ತು ನಿಯಮಗಳಿಗೆ ತದ್ವಿರುದ್ಧವಾಗಿದೆ.

ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಸರ್ಕಾರಗಳು ಯಾವ ಪಕ್ಷದ್ದೇ ಆಗಿರಲಿ ಪಕ್ಷಪಾತ ರಹಿತವಾಗಿರಬೇಕು. ಜನಹಿತ ಕಾಪಾಡುವ ಮೌಲ್ಯಗಳಿಗೆ ಕೇಂದ್ರದ ಬಿ.ಜೆ.ಪಿ ಸರ್ಕಾರ ತಿಲಾಂಜಲಿ ಇಡುತ್ತಿದೆ. ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಗೆ 5,300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಘೋಷಿತ ಅನುದಾನ ಬಿಡುಗಡೆ ಮಾಡದಿದ್ದರೆ ಕೇಂದದ ಕ್ರಮ ಪ್ರಶ್ನಿಸಿ ಸರ್ವೋಚ್ಛ ನ್ಯಾಯಾಲಯದಲ್ಲಿ ನ್ಯಾಯ ಪಡೆಯಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಹಾಗೂ ಈ ಕುರಿತು ಮುಂದಿನ ಸಚಿವ ಸಂಪುಟ ಸಭೆಯ ಗಮನಕ್ಕೆ ತಂದು ಚರ್ಚಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

TAGGED:bengaluruBhadra meldande projectCentral Governmenth k patilಕೇಂದ್ರ ಸರ್ಕಾರಬೆಂಗಳೂರುಭದ್ರಾ ಮೇಲ್ದಂಡೆ ಯೋಜನೆಹೆಚ್‍ಕೆ ಪಾಟೀಲ್
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

pramod muthalik
Bagalkot

ಪ್ರಮೋದ್ ಮುತಾಲಿಕ್, ಪುನಿತ್ ಕೆರೆಹಳ್ಳಿಗೆ ಬಾಗಲಕೋಟೆ ಪ್ರವೇಶಿಸದಂತೆ ನಿರ್ಬಂಧ

Public TV
By Public TV
16 minutes ago
Siddaramaiah 8
Bengaluru City

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ – ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ಮಾಡಲು ಚಿಂತನೆ!

Public TV
By Public TV
33 minutes ago
Father in law sets fire to house of young man who married his daughter in Mandya
Crime

ಮಗಳನ್ನು ಪ್ರೀತಿಸಿ ಮದುವೆಯಾದ ಯುವಕನ ಮನೆಗೆ ಬೆಂಕಿ ಇಟ್ಟ ಮಾವ!

Public TV
By Public TV
1 hour ago
siddaramaiah
Bengaluru City

5 ಲಕ್ಷ ಲಂಚ ಪಡೆಯುವಾಗ್ಲೇ ಸಿಕ್ಕಿಬಿದ್ದ ಬಿಜೆಪಿ ಶಾಸಕ – ನಾವ್ಯಾರು ತನಿಖೆಗೆ ಅಡ್ಡಿ ಬರಲ್ಲ ಎಂದ ಸಿಎಂ

Public TV
By Public TV
1 hour ago
Siddaramaiah 7
Bengaluru City

2,000 ಸಹಾಯಕ ಪ್ರಾಧ್ಯಾಪಕರ ಹುದ್ದೆ ಭರ್ತಿ ಮಾಡುವ ಪ್ರಕ್ರಿಯೆ ಶುರು: ಸಿದ್ದರಾಮಯ್ಯ

Public TV
By Public TV
2 hours ago
Luiz Inacio Lula da 3
Latest

ಭಾರತ – ಬ್ರೆಜಿಲ್ 5 ವರ್ಷಗಳಲ್ಲಿ 20 ಶತಕೋಟಿ ಡಾಲರ್‌ಗೂ ಹೆಚ್ಚು ವ್ಯಾಪಾರದ ಗುರಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?