ಶಿವಮೊಗ್ಗ: ರಾಜ್ಯದ ಅಡಿಕೆ ತೋಟಗಳಲ್ಲಿ(Areca Plantations) ಹಬ್ಬಿರುವ ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರದ ಏಳು ಮಂದಿ ತಜ್ಞರನ್ನು ಒಳಗೊಂಡ ಸಮಿತಿ(Central Team) ಮುಂದಿನ ವಾರ ರಾಜ್ಯಕ್ಕೆ ಆಗಮಿಸಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ತಿಳಿಸಿದ್ದಾರೆ.
ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮಲೆನಾಡು ಹಾಗೂ ಕರಾವಳಿ ಭಾಗದ(Malnad and Coastal Region) ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಕೇಂದ್ರ ತಕ್ಷಣ ಸ್ಪಂದಿಸಿದ್ದು, ಅಡಿಕೆ ಬೆಳೆಗೆ ಎದುರಾಗಿರುವ ರೋಗ ನಿವಾರಣೆಗೆ ಸಮಿತಿ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಲಿದೆ ಎಂದರು.
Advertisement
Advertisement
ಇತ್ತೀಚೆಗೆ ರಾಜ್ಯ ಅಡಿಕೆ ಬೆಳೆಗಾರರ ಆತಂಕಕ್ಕೆ ಕಾರಣವಾದ ಎಲೆ ಚುಕ್ಕೆ ರೋಗಕ್ಕೆ ಪರಿಹಾರ ಬಯಸಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕೇಂದ್ರ ಕೃಷಿ ಸಚಿವ ನರೆಂದ್ರ ಸಿಂಗ್ ತೋಮರ್ ಅವರಿಗೆ ನವದೆಹಲಿಯಲ್ಲಿ ನಿಯೋಗ ಭೇಟಿಯಾಗಿ ಮನವಿ ಸಲ್ಲಿಸಿತ್ತು. ಕೇಂದ್ರ ಸರ್ಕಾರ ಸಮಸ್ಯೆಯ ಪರಿಹಾರಕ್ಕೆ ಪೂರಕವಾಗಿ ಸ್ಪಂದಿಸಿ ಸಮಿತಿ ರಚಿಸಿದೆ ಎಂದರು. ಇದನ್ನೂ ಓದಿ: ಮುಂದೆ ನಮ್ಮದೇ ಸರ್ಕಾರ ಬರುತ್ತೆ: ಹೆಚ್‍ಡಿಕೆ
Advertisement
ರಾಜ್ಯದಲ್ಲಿ ಸುಮಾರು 20 ಸಾವಿರ ಹೆಕ್ಟೇರ್ ಪ್ರದೇಶದ ಅಡಿಕೆ ತೋಟಗಳು ಎಲೆ ಚುಕ್ಕೆ ರೋಗಕ್ಕೆ ಬಲಿಯಾಗಿದ್ದು, ಕಾಳ್ಗಿಚ್ಚಿನಂತೆ ರೋಗ ಇತರೆಡೆ ಹರಡುತ್ತಿದೆ. ಹೀಗಾಗಿ ಇದೇ ತಿಂಗಳ 22 ರಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿಗೆ ಆಗಮಿಸುವ ಸಂಶೋಧನಾ ತಜ್ಞರನ್ನು ಭೇಟಿಯಾಗಿ ಪರಿಸ್ಥಿತಿಯ ಮನವರಿಕೆ ಮಾಡಿಕೊಡುವೆ ಎಂದರು.
Advertisement
ಸುಮಾರು 50 ಲಕ್ಷ ಜನರಿಗೆ, ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಜೀವನೋಪಾಯ ಕಲ್ಪಿಸಿಕೊಟ್ಟಿರುವ ಅಡಿಕೆ ಬೆಳೆ ನಮ್ಮ ಭಾಗದ ರೈತರ ಆರ್ಥಿಕ ಜೀವನಾಡಿಯಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕರಾವಳಿ ಭಾಗದಲ್ಲಿ ರೈತ ಸಮುದಾಯದ ಜೀವನಾಡಿಯದ ಅಡಿಕೆ ಬೆಳೆ ಎಲೆ ಚುಕ್ಕೆ ರೋಗದಿಂದ ನಲುಗಿದ್ದು, ನಿಯಂತ್ರಣ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯುವ ಜೊತೆಗೆ ಪರಿಹಾರ ಕಲ್ಪಿಸುವ ಬಗ್ಗೆ ಕೇಂದ್ರದ ಗಮನಕ್ಕೆ ತರುತ್ತೇವೆ ಎಂದರು.