ಬೆಳಗಾವಿ: ಈ ಬಾರಿ ಸಹ ಮಳೆ ಮತ್ತು ಪ್ರವಾಹದಿಂದ ಜಿಲ್ಲೆಯಲ್ಲಿ ಅಪಾರ ಹಾನಿ ಸಂಭವಿಸಿದೆ. ಈ ಹಿನ್ನೆಲೆ ಕೇಂದ್ರ ನೆರೆ ಅಧ್ಯಯನ ತಂಡ ಇಂದು ಜಿಲ್ಲೆಗೆ ಆಗಮಿಸಿದ್ದು, ಪ್ರವಾಹದಿಂದ ಹಾನಿಯಾದ ಸ್ಥಳಕ್ಕೆ ಭೇಟಿ ನೀಡಲಿದೆ.
Advertisement
ಇಂದು ಮತ್ತು ನಾಳೆ ಜಿಲ್ಲೆಯ ನೆರೆಪೀಡಿತ ಪ್ರದೇಶಗಳಿಗೆ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಲಿದೆ. ಇಂದು ಖಾನಾಪುರ, ಬೆಳಗಾವಿ, ಹುಕ್ಕೇರಿ, ಗೋಕಾಕ ತಾಲೂಕಿಗೆ ಭೇಟಿ ನೀಡಲಿದ್ದು, ನಾಳೆ ಅಥಣಿ, ಕಾಗವಾಡ, ಚಿಕ್ಕೋಡಿ, ನಿಪ್ಪಾಣಿ ತಾಲೂಕುಗಳಲ್ಲಿ ಸಂಚರಿಸಲಿದೆ. ಇದನ್ನೂ ಓದಿ: ಸಾರಿಗೆ ಸಚಿವರ ಜಿಲ್ಲೆಯಲ್ಲೇ ಇಲ್ಲ ಸಿಟಿ ಬಸ್- ವಿದ್ಯಾರ್ಥಿಗಳು, ಕಾರ್ಮಿಕರ ಪರದಾಟ
Advertisement
Advertisement
ಮಲಪ್ರಭಾ, ಘಟಪ್ರಭಾ, ಹಿರಣ್ಯಕೇಶಿ, ಕೃಷ್ಣಾ ಸೇರಿ ಸಪ್ತ ನದಿಗಳ ಪ್ರವಾಹದಿಂದ ಆದ ಹಾನಿಯ ಪರಿಶೀಲನೆಯನ್ನು ತಂಡ ನಡೆಸಲಿದೆ. ಸೇತುವೆಗಳು, ಬೆಳೆ, ಶಾಲೆ, ಮನೆಗಳ ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ, ಅಂಕಿಅಂಶಗಳನ್ನು ಕಲೆಹಾಕಲಾಗುತ್ತಿದೆ.