ನವದೆಹಲಿ: ಮಹದಾಯಿ ನ್ಯಾಯಾಧೀಕರಣ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಕೆ ಹಿನ್ನೆಲೆಯಲ್ಲಿ ಕಳಸಾ ಬಂಡೂರಿ ಯೋಜನೆಗೆ ನೀಡಿದ್ದ ಪರಿಸರ ಒಪ್ಪಿಗೆಯನ್ನು ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ತಡೆ ಹಿಡಿದಿದೆ. ಈ ಬಗ್ಗೆ ಪತ್ರ ಬರೆದಿರುವ ಕೇಂದ್ರ ಸರ್ಕಾರ ಪ್ರಕರಣ ಸುಪ್ರೀಂಕೋರ್ಟ್‍ನಲ್ಲಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಒಪ್ಪಿಗೆ ತಡೆ ಹಿಡಿದಿದೆ ಎಂದು ರಾಜ್ಯ ಸರ್ಕಾರಕ್ಕೆ ಮಾಹಿತಿ ತಿಳಿಸಿದೆ.
2018 ಅಗಸ್ಟ್ 14 ರಂದು ಮಹದಾಯಿ ನ್ಯಾಯಾಧೀಕರಣ ನೀಡಿದ್ದ ತೀರ್ಪು ಪ್ರಶ್ನಿಸಿ ಗೋವಾ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಮತ್ತಷ್ಟು ನೀರಿನ ಬೇಡಿಕೆ ಇಟ್ಟು ಕರ್ನಾಟಕವೂ ಅರ್ಜಿ ಸಲ್ಲಿಸಿತ್ತು. ಸದ್ಯ ಪ್ರಕರಣ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿದೆ.
Advertisement
Advertisement
ಇತ್ತೀಚಿಗೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದ ಕೇಂದ್ರ ಅರಣ್ಯ ಪರಿಸರ ಇಲಾಖೆ ಕಳಸಾ ಬಂಡೂರಿ ಯೋಜನೆಗೆ ಅನುಮತಿ ನೀಡಿತ್ತು. ಇದೊಂದು ಕುಡಿಯುವ ನೀರಿನ ಯೋಜನೆಯಾದ ಹಿನ್ನೆಲೆಯಲ್ಲಿ ಅನುಮತಿ ನೀಡಲಾಗಿದೆ. ಇಲ್ಲಿ ಯಾವುದೇ ನೀರಾವರಿ ಮತ್ತು ಜಲ ವಿದ್ಯುತ್ ಯೋಜನೆ ಇಲ್ಲದಿರುವ ಹಿನ್ನೆಲೆ ಇಲಾಖೆ ಅನುಮತಿ ನೀಡಲಾಗಿತ್ತು. ಕೇಂದ್ರ ಸರ್ಕಾರದ ಯಾಕ ಆಕ್ಷೇಪಣೆ ಇಲ್ಲದೇ ನೀವೂ ಕಾಮಗಾರಿ ಆರಂಭಿಸಬಹುದು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಆದರೆ ಈ ನಿರಪೇಕ್ಷಣಾ ಪತ್ರವನ್ನು ವಿರೋಧಿಸಿ ಗೋವಾ ನಿಯೋಗ ಕೇಂದ್ರ ಸಚಿವ ಪ್ರಕಾಶ್ ಜಾವೇಡ್ಕರ್ ಭೇಟಿಯಾಗಿ ಒಪ್ಪಿಗೆಯನ್ನು ಹಿಂದೆ ಪಡೆಯುವಂತೆ ಒತ್ತಾಯ ಮಾಡಿತ್ತು.
Advertisement
ಎಚ್‍ಡಿಕೆ ಕಿಡಿ: ಕನ್ನಡಿಗರನ್ನು ರಾಜಕೀಯಕ್ಕೆ ದುಡಿಸಿಕೊಳ್ಳುವುದು, ಯೋಜನೆ, ಕಾರ್ಯಕ್ರಮ, ಅನುದಾನಗಳ ವಿಷಯದಲ್ಲಿ ಶೋಷಿಸುವುದು ಬಿಜೆಪಿಯ ಚಾಳಿಯಾಗಿದೆ. ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಸರ್ಕಾರ ತಡೆ ನೀಡಿರುವುದನ್ನು ಕನ್ನಡಿಗರಾಗಿ ಟೀಕಿಸಬೇಕೋ? ಬೆಂಬಲಿಸಬೇಕೋ? ಕನ್ನಡಿಗರ ಆತ್ಮಾಭಿಮಾನ ಕೆಣಕುವುದರಲ್ಲಿ ನಿಮಗೆಂಥ ಸಂತೋಷ ಎಂದು ಮಾಜಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
Advertisement
ಕನ್ನಡಿಗರನ್ನು ರಾಜಕೀಯಕ್ಕೆ ದುಡಿಸಿಕೊಳ್ಳುವುದು, ಯೋಜನೆ, ಕಾರ್ಯಕ್ರಮ, ಅನುದಾನಗಳ ವಿಷಯದಲ್ಲಿ ಶೋಷಿಸುವುದು ಬಿಜೆಪಿಯ ಚಾಳಿಯಾಗಿದೆ. ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಸರ್ಕಾರ ತಡೆ ನೀಡಿರುವುದನ್ನು ಕನ್ನಡಿಗರಾಗಿ ಟೀಕಿಸಬೇಕೋ? ಬೆಂಬಲಿಸಬೇಕೋ? ಕನ್ನಡಿಗರ ಆತ್ಮಾಭಿಮಾನ ಕೆಣಕುವುದರಲ್ಲಿ ನಿಮಗೆಂಥ ಸಂತೋಷ?
(1/2)
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 18, 2019
ಚುನಾವಣೆ ವೇಳೆ ಮಹದಾಯಿ ಸಮಸ್ಯೆ ಬಗೆಹರಿಸುತ್ತೇವೆ ಎಂದು ವೋಟು ಹಾಕಿಸಿಕೊಂಡ ರಾಜ್ಯದ ಬಿಜೆಪಿ ನಾಯಕರು ಇದೀಗ ಮೋದಿಗೆ ಬೆದರಿ ತಮ್ಮ ಧ್ವನಿಯನ್ನೇ ಕಳೆದುಕೊಂಡಿದ್ದಾರೆ. ಕನ್ನಡಿಗರನ್ನು ದಾಸ್ಯಕ್ಕೆ ಈಡು ಮಾಡುವ ದಲ್ಲಾಳಿಗಳಾಗಿದ್ದಾರೆ ಎಂದು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚುನಾವಣೆ ವೇಳೆ ಮಹದಾಯಿ ಸಮಸ್ಯೆ ಬಗೆಹರಿಸುತ್ತೇವೆ ಎಂದು ವೋಟು ಹಾಕಿಸಿಕೊಂಡ ರಾಜ್ಯದ ಬಿಜೆಪಿ ನಾಯಕರು ಇದೀಗ ಮೋದಿಗೆ ಬೆದರಿ ತಮ್ಮ ಧ್ವನಿಯನ್ನೇ ಕಳೆದುಕೊಂಡಿದ್ದಾರೆ. ಕನ್ನಡಿಗರನ್ನು ದಾಸ್ಯಕ್ಕೆ ಈಡು ಮಾಡುವ ದಲ್ಲಾಳಿಗಳಾಗಿದ್ದಾರೆ.
(2/2)
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 18, 2019