ಬೆಂಗಳೂರು: ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿ, ಬೆಂಬಲ ಬೆಲೆ (Support Price) ಯೋಜನೆಯಲ್ಲಿ ಹೆಸರುಕಾಳು ಮತ್ತು ಸೂರ್ಯಕಾಂತಿ (Sunflower) ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ (Shivanand Patil) ತಿಳಿಸಿದ್ದಾರೆ.
ಮಾರುಕಟ್ಟೆಯಲ್ಲಿ ಹೆಸರುಕಾಳು ಮತ್ತು ಸೂರ್ಯಕಾಂತಿ ಧಾರಣೆ ಕುಸಿದ ಕಾರಣ ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿಗೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. 22,215 ಮೆಟ್ರಿಕ್ ಟನ್ ಹೆಸರುಕಾಳು ಹಾಗೂ 13,210 ಮೆಟ್ರಿಕ್ ಟನ್ ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ. ಬೆಂಬಲ ಬೆಲೆ ಯೋಜನೆಯಲ್ಲಿ ಎಫ್‍ಎಕ್ಯೂ ಗುಣಮಟ್ಟದ ಹೆಸರುಕಾಳಿಗೆ ಪ್ರತಿ ಕ್ವಿಂಟಲ್‍ಗೆ 8,682 ರೂ. ಹಾಗೂ ಸೂರ್ಯಕಾಂತಿಗೆ 7,280 ರೂ. ಬೆಲೆ ನಿಗದಿಪಡಿಸಲಾಗಿದೆ. ಇದನ್ನೂ ಓದಿ: ಲಾರಿ ಚಾಲಕನ ನಿರ್ಲಕ್ಷ್ಯ – 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ
Advertisement
Advertisement
ಕೇಂದ್ರ ಸರ್ಕಾರ ರಾಜ್ಯದ ಪ್ರಸ್ತಾವನೆಗೆ ಸಮ್ಮತಿಸಿರುವುದರಿಂದ ಖರೀದಿ ಏಜನ್ಸಿ ನೇಮಕ ಮಾಡಿ ಆದೇಶ ಹೊರಡಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಹೀಗಾಗಿ ಧಾರಣೆ ಕುಸಿದಿದೆ ಎಂದು ರೈತರು ಆತಂಕ ಪಡುವ ಅಗತ್ಯವಿಲ್ಲ. ಖರೀದಿ ಕೇಂದ್ರಗಳನ್ನು ಆರಂಭಿಸುತ್ತಿದ್ದಂತೆ ನೋಂದಣಿ ಮಾಡಿಸಿಕೊಂಡು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಬಹುದು ಎಂದು ತಿಳಿಸಿದ್ದಾರೆ.
Advertisement
Advertisement
ಹೆಸರುಕಾಳು ಮತ್ತು ಸೂರ್ಯಕಾಂತಿ ಬೆಳೆಯುವ ಪ್ರಮುಖ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಟಾಸ್ಕ್ ಫೋರ್ಸ್ ಸಭೆ ನಡೆಸಿ ಅಗತ್ಯ ಇರುವ ಕಡೆ ಖರೀದಿ ಕೇಂದ್ರಗಳನ್ನು ಗುರುತಿಸಿ ನೋಂದಣಿ ಆರಂಭಿಸಲಿದ್ದಾರೆ. ನಂತರ ಖರೀದಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ವಿಳಂಬ ಮಾಡದೆ ಟಾಸ್ಕ್ ಫೋರ್ಸ್ ಸಭೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ.
ರೈತರ ಹಿತದೃಷ್ಟಿಯಿಂದ ತ್ವರಿತವಾಗಿ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆ ಆರಂಭಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: MUDA Scam | ಪ್ರಾಸಿಕ್ಯೂಷನ್ ಸಮರದಲ್ಲಿ ಸೈಲೆಂಟ್ ಅಸ್ತ್ರ ಪ್ರಯೋಗಿಸಿದ ರಾಹುಲ್ ಗಾಂಧಿ!