ನವದೆಹಲಿ: ಭಯೋತ್ಪಾದಕ ಚಟುವಟಿಕೆಗಳ ವಿರುದ್ಧದ ಹೋರಾಟದಲ್ಲಿ ಕೇಂದ್ರ ಸರ್ಕಾರ (Government of India) ಮಹತ್ವದ ಹೆಜ್ಜೆ ಇಟ್ಟಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಭಯೋತ್ಪಾದಕರು ಹಾಗೂ ಅವರ ಬೆಂಬಲಿಗರ ನಡುವೆ ಸಂವಹನ ನಡೆಸಲು ಬಳಕೆಯಾಗುತ್ತಿದ್ದ 14 ಅಪ್ಲಿಕೇಷನ್‍ಗಳನ್ನು ಕೇಂದ್ರ ನಿಷೇಧಿಸಿದೆ.
ನಿಷೇಧಿಸಲಾದ ಎಲ್ಲಾ ಅಪ್ಲಿಕೇಷನ್‍ಗಳು ಭಯೋತ್ಪಾದಕ ಚಟುವಟಿಕೆಗಳಲ್ಲಿ (Terrorist Activities) ತೊಡಗಿದ್ದ ವ್ಯಕ್ತಿಗಳೊಂದಿಗೆ ಸಂದೇಶ ರವಾನಿಸಲು (Messaging Applications) ಬಳಕೆಯಾಗುತ್ತಿತ್ತು. ಈ ಬಗ್ಗೆ ಭದ್ರತಾ ಮತ್ತು ಗುಪ್ತಚರ ಸಂಸ್ಥೆಗಳು ಸೂಕ್ತ ಮಾಹಿತಿ ನೀಡಿದ್ದವು. ಗುಪ್ತಚರ ಸಂಸ್ಥೆಗಳು (Security and Intelligence Agencies) ಸೂಚಿಸಿದ್ದ ಅಪ್ಲಿಕೇಷನ್‍ಗಳಲ್ಲಿ ಪಾಕಿಸ್ತಾನದಿಂದ (Pakistan) ಸೂಚನೆಗಳು ರವಾನೆಯಾಗುತ್ತಿದ್ದವು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ದಾಂತೇವಾಡ ಸ್ಫೋಟ ಪ್ರಕರಣ- ಮಾಸ್ಟರ್‌ಮೈಂಡ್ ಫೋಟೋ ರಿಲೀಸ್
Advertisement
Advertisement
ನಿಷೇಧಿತ ಅಪ್ಲಿಕೇಷನ್‍ಗಳು:
ಕ್ರಿಪ್‍ವೈಸರ್, ಎನಿಗ್ಮಾ, ಸೇಫ್‍ಸ್ವಿಸ್, ವಿಕ್ರಮ್, ಮೀಡಿಯಾಫೈರ್, ಬ್ರಿಯಾರ್, ಬಿಚಾಟ್, ನಂಡ್‍ಬಾಕ್ಸ್, ಕೊನಿಯನ್, ಐಎಂಒ, ಎಲಿಮೆಂಟ್, ಸೆಕೆಂಡ್ ಲೈನ್, ಝಾಂಗಿ ಮತ್ತು ಥ್ರೀಮಾ ನಿಷೇಧಿತ ಅಪ್ಲಿಕೇಷನ್‍ಗಳಾಗಿವೆ.
Advertisement
Advertisement
ಏ.20 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಸೇನಾ ವಾಹನದ ಮೇಲೆ ನಡೆಸಿದ್ದ ಗ್ರೇನೆಡ್ ದಾಳಿಯಲ್ಲಿ ಐವರು ಯೋಧರು ಮೃತಪಟ್ಟಿದ್ದರು. ಈ ವೇಳೆ ಉಗ್ರರಿಗೆ ಸ್ಥಳೀಯರು ಮಾಹಿತಿ ನೀಡಿದ್ದರು ಎಂಬುದು ತನಿಖೆ ವೇಳೆ ತಿಳಿದು ಬಂದಿತ್ತು. ಇದನ್ನೂ ಓದಿ: ಕೇವಲ 6-8 ವಾರಗಳಲ್ಲಿ ಮತ್ತೆ ಹಾರಾಟಕ್ಕೆ ಸಿದ್ಧವಾಗಲಿದೆ ಸ್ಟಾರ್‌ಶಿಪ್: ಮಸ್ಕ್