InternationalLatestLeading NewsMain PostNational

ಲಂಕಾ ಆರ್ಥಿಕ ಬಿಕ್ಕಟ್ಟಿನ ಕುರಿತು ಚರ್ಚಿಸಲು ಜು.19 ರಂದು ಸರ್ವಪಕ್ಷಗಳ ಸಭೆ – ಪ್ರಹ್ಲಾದ್ ಜೋಶಿ

Advertisements

ನವದೆಹಲಿ: ಇಂದಿಗೆ 100 ದಿನಗಳನ್ನು ಪೂರೈಸಿರುವ ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿನ ಕುರಿತು ಚರ್ಚಿಸಲು ಮಂಗಳವಾರ (ಜುಲೈ 21ರಂದು) ಸರ್ವಪಕ್ಷಗಳ ಸಭೆ ಕರೆಯಲಾಗಿದ್ದು, ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ನೇತೃತ್ವದಲ್ಲಿ ಸಭೆ ನಡೆಯಲಿದೆ.

ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ವಿವಿಧ ಪಕ್ಷಗಳ ನಾಯಕರು ಭಾಗವಹಿಸಿದ್ದ ಸರ್ವಪಕ್ಷ ಸಭೆಯ ನಂತರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಸಂಸತ್ತಿನ ನಿಯಮಗಳು ಮತ್ತು ಕಾರ್ಯವಿಧಾನಗಳ ಅಡಿಯಲ್ಲಿ ಸರ್ಕಾರವು ಎಲ್ಲಾ ವಿಷಯಗಳ ಬಗ್ಗೆ ಚರ್ಚೆಗೆ ಮುಕ್ತವಾಗಿದೆ ಎಂದು ಹೇಳಿದ್ದಾರೆ.

ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿನ ಕುರಿತು ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಇಂದಿಗೆ 100ನೇ ದಿನ ತಲುಪಿದೆ. ಇದನ್ನೂ ಓದಿ: ವಿದ್ಯಾರ್ಥಿನಿ ಸಾವಿಗೆ ತೀವ್ರಗೊಂಡ ಪ್ರತಿಭಟನೆ – ಸ್ಕೂಲ್ ಬಸ್, ಪೊಲೀಸ್ ವಾಹನಗಳಿಗೆ ಬೆಂಕಿ

ಆರ್ಥಿಕ ಬಿಕ್ಕಟ್ಟಿನಿಂದಾಗಿ ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಗೊಟಬಯ ರಾಜಪಕ್ಸೆ ತಮ್ಮ ಸ್ಥಾನಕ್ಕೆ ಈಚೆಗೆ ರಾಜೀನಾಮೆ ನೀಡಿದರು. ತಮ್ಮ ವಿರುದ್ಧದ ಪ್ರತಿಭಟನೆಯಿಂದ ತಪ್ಪಿಸಿಕೊಳ್ಳಲು ಶ್ರೀಲಂಕಾ ತೊರೆದು ಪಲಾಯನಗೈದಿರುವ ಹಿನ್ನೆಲೆ ಕಳೆದ ಗುರುವಾರ ಸಂಸತ್ತಿನ ಸ್ಪೀಕರ್‌ಗೆ ರಾಜೀನಾಮೆ ಪತ್ರವನ್ನು ಇ-ಮೇಲ್ ಮಾಡಿದ್ದರು.

ಇದಕ್ಕೂ ಮುನ್ನ ಲಂಕಾದ ಆರ್ಥಿಕ ಬಿಕ್ಕಟ್ಟಿನಿಂದಾಗಿ ಅಲ್ಲಿನ ಜನರು ಬೃಹತ್ ಪ್ರತಿಭಟನೆ ನಡೆಸಿದ್ದು, ರಾಜಪಕ್ಸೆ ಹಾಗೂ ಪ್ರಧಾನಿ ವಿಕ್ರಮಸಿಂಘೆ ತಮ್ಮ ಅಧಿಕಾರದಿಂದ ಕೆಳಗಿಳಿಯುವಂತೆ ಒತ್ತಾಯಿಸಿ, ಅಧ್ಯಕ್ಷೀಯ ಭವನಕ್ಕೆ ಮುತ್ತಿಗೆ ಹಾಕಿದ್ದರು. ಇದನ್ನೂ ಓದಿ: 18 ತಿಂಗಳಲ್ಲಿ 200 ಕೋಟಿ ಡೋಸ್‌ ಕೊರೊನಾ ಲಸಿಕೆ- ದಾಖಲೆ ಸೃಷ್ಟಿಸಿದ ಭಾರತ

ಆ ನಂತರ ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಪ್ರಮಾಣ ವಚನ ಸ್ವೀಕರಿಸಿದ್ದು, ಹೊಸ ಅಧ್ಯಕ್ಷರ ಆಯ್ಕೆಯ ಪ್ರಕ್ರಿಯೆ 7 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದರು. ಸದ್ಯ ಮುಂದಿನ ವಾರ ನಡೆಯುವ ಮತದಾನದಲ್ಲಿ ಅವರು ಶಾಶ್ವತವಾಗಿ ಉತ್ತರಾಧಿಕಾರಿಯಾಗುವ ಪ್ರಮುಖ ಅಭ್ಯರ್ಥಿಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

Live Tv

Leave a Reply

Your email address will not be published.

Back to top button