ನವದೆಹಲಿ: ಹೈದರಾಬಾದ್ ಮೂಲದ ಭಾರತೀಯ ಕಂದಾಯ ಸೇವೆ (IRS) ಹಿರಿಯ ಅಧಿಕಾರಿಯೊಬ್ಬರು ತಮ್ಮ ಹೆಸರು ಮತ್ತು ಲಿಂಗವನ್ನು ಬದಲಾಯಿಸುವಂತೆ ಮಾಡಿದ ಮನವಿಯನ್ನು ಕೇಂದ್ರ ಹಣಕಾಸು ಸಚಿವಾಲಯ ಅನುಮೋದಿಸಿದೆ. ಭಾರತೀಯ ನಾಗರಿಕ ಸೇವೆಯ ಇತಿಹಾಸದಲ್ಲಿ ಇಂತಹ ಬದಲಾವಣೆಯಾಗಿರುವುದು ಇದೇ ಮೊದಲು.
ಹೈದರಾಬಾದ್‌ನಲ್ಲಿರುವ ಕಸ್ಟಮ್ಸ್ ಅಬಕಾರಿ ಮತ್ತು ಸೇವಾ ತೆರಿಗೆ ಮೇಲ್ಮನವಿ ನ್ಯಾಯಾಧಿಕರಣದ ಮುಖ್ಯ ಆಯುಕ್ತರ ಕಚೇರಿಯಲ್ಲಿ ಜಂಟಿ ಆಯುಕ್ತರಾಗಿ ನೇಮಕಗೊಂಡಿರುವ ಎಂ.ಅನುಸೂಯಾ ಅವರು ತಮ್ಮ ಹೆಸರನ್ನು ಎಂ.ಅನುಕತಿರ್ ಸೂರ್ಯ ಎಂದು ಮತ್ತು ಲಿಂಗವನ್ನು ಹೆಣ್ಣಿನಿಂದ ಪುರುಷ ಎಂದು ಬದಲಾಯಿಸಲು ವಿನಂತಿಸಿದ್ದರು. ಇದನ್ನೂ ಓದಿ: ಮಹಿಳೆ ಕಿಡ್ನ್ಯಾಪ್ ಕೇಸ್ – ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್
Advertisement
Advertisement
ಅಧಿಕಾರಿಯ ಮನವಿಯನ್ನು ಪರಿಗಣಿಸಿ ಅನುಮೋದನೆ ನೀಡಲಾಗಿದೆ ಎಂದು ಸಚಿವಾಲಯ ತನ್ನ ಆದೇಶದಲ್ಲಿ ತಿಳಿಸಿದೆ. ಎಂ.ಅನುಸೂಯಾ ಅವರ ಮನವಿಯನ್ನು ಪರಿಗಣಿಸಲಾಗಿದೆ. ಇನ್ಮುಂದೆ ಅಧಿಕಾರಿಯನ್ನು ಎಲ್ಲಾ ಅಧಿಕೃತ ದಾಖಲೆಗಳಲ್ಲಿ ‘ಎಂ.ಅನುಕತಿರ್ ಸೂರ್ಯ’ ಎಂದು ಪರಿಗಣಿಸಲಾಗುತ್ತದೆ ಎಂದು ಕಂದಾಯ ಇಲಾಖೆಯ ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ ಆದೇಶದಲ್ಲಿ ತಿಳಿಸಿದೆ.
Advertisement
ಪ್ರಸ್ತುತ IRS ಅಧಿಕಾರಿಯಾಗಿರುವ ಸೂರ್ಯ, 2013 ರಲ್ಲಿ ಚೆನ್ನೈನಲ್ಲಿ ಸಹಾಯಕ ಆಯುಕ್ತರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. 2018 ರಲ್ಲಿ ಡೆಪ್ಯೂಟಿ ಕಮಿಷನರ್ ಶ್ರೇಣಿಗೆ ಬಡ್ತಿ ಪಡೆದರು. ಇದನ್ನೂ ಓದಿ: ವಿಚ್ಛೇದಿತ ಮುಸ್ಲಿಂ ಮಹಿಳೆಯರು ಜೀವನಾಂಶ ಪಡೆಯಲು ಅರ್ಹರು: ಸುಪ್ರೀಂ ಮಹತ್ವದ ತೀರ್ಪು
Advertisement
ಸೂರ್ಯ ಚೆನ್ನೈನ ಮದ್ರಾಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್‌ನಲ್ಲಿ ಬ್ಯಾಚುಲರ್ ಪದವಿ ಪಡೆದರು. ನಂತರ ಅವರು ನ್ಯಾಷನಲ್ ಲಾ ಇನ್‌ಸ್ಟಿಟ್ಯೂಟ್ ವಿಶ್ವವಿದ್ಯಾಲಯದಿಂದ ಸೈಬರ್ ಕಾನೂನು ಮತ್ತು ಸೈಬರ್ ಫೋರೆನ್ಸಿಕ್ಸ್‌ನಲ್ಲಿ ಪಿಜಿ ಡಿಪ್ಲೊಮಾ ಶಿಕ್ಷಣ ಪೂರೈಸಿದರು.