ನವದೆಹಲಿ: ಹೆಚ್ಚಿನ ಪ್ರಮಾಣದ ಎಥೆನಾಲ್ (Ethanol Fuel) ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕಕ್ಕೆ (Excise Duty) ವಿನಾಯಿತಿ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಇ22 (ಎಥೆನಾಲ್ 22% ಮತ್ತು ಪೆಟ್ರೋಲ್ 78% ಮಿಶ್ರಿತ ಇಂಧನ), ಇ25, ಇ27 ಮತ್ತು ಇ30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ತೆಗೆದುಹಾಕಲಾಗಿದೆ. ಇದನ್ನೂ ಓದಿ: ಪೆಟ್ರೋಲ್‌ಗಿಂತ ಎಥೆನಾಲ್ ಅಗ್ಗ? ದರ ಏರಿಕೆ ಹೊತ್ತಲ್ಲೇ ಚರ್ಚೆಗೆ ಬಂತು ‘E100’
ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಕ್ರಮಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಮಧ್ಯಪ್ರಾಚ್ಯ ಯುದ್ಧದ ಪರಿಣಾಮವಾಗಿ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಕಂಡಿದೆ. ಕಳೆದ ತಿಂಗಳು 11 ದಿನಗಳ ಅಂತರದಲ್ಲಿ ಭಾರತದಲ್ಲಿ ಪೆಟ್ರೋಲ್ ದರವನ್ನು 7.5 ರೂ. ಹೆಚ್ಚಳ ಮಾಡಲಾಯಿತು. ಇದರಿಂದ ವಾಹನ ಸವಾರರ ಮೇಲೆ ಆರ್ಥಿಕ ಹೊರೆ ಹೆಚ್ಚಾಗಿದೆ.
ಭಾರತವು ತನಗೆ ಅಗತ್ಯವಿರುವ ಶೇ.87ರಷ್ಟು ಕಚ್ಚಾ ತೈಲವನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳುತ್ತಿದೆ. ಇದರಿಂದ ದೇಶದ ಆರ್ಥಿಕತೆಗೆ ಹೊಡೆತ ಬೀಳುತ್ತಿದೆ. ಈ ಹಿನ್ನೆಲೆ ದೇಶೀಯವಾಗಿ ತಯಾರಾಗುವ ಎಥೆನಾಲ್ ಬಳಕೆಯನ್ನು ಹೆಚ್ಚಿಸುವುದು ಸರ್ಕಾರದ ಮುಖ್ಯ ಗುರಿಯಾಗಿದೆ. ಇದನ್ನೂ ಓದಿ: ಎಥೆನಾಲ್ ಪೆಟ್ರೋಲ್‌ನಿಂದ ಮೈಲೇಜ್ ಕುಸಿತವಾಗಲ್ಲ, ವಿಮೆ ರದ್ದಾಗಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ
