ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಕೂಸು ಬುಲೆಟ್ ಟ್ರೈನ್ ಯೋಜನೆಯ ಮುಖ್ಯಸ್ಥರಾಗಿದ್ದ ಸತೀಶ್ ಅಗ್ನಿಹೋತ್ರಿ ಅವರನ್ನು ಕೇಂದ್ರ ಸರ್ಕಾರ ವಜಾಗೊಳಿಸಿದೆ.
Advertisement
ರಾಷ್ಟ್ರೀಯ ಹೈಸ್ಪೀಡ್ ರೈಲ್ವೇ ಕಾರ್ಪೋರೇಶನ್ ಲಿಮಿಟೆಡ್ (NHSRCL) ವ್ಯವಸ್ಥಾಪಕ ನಿರ್ದೇಶಕ ಸತೀಶ್ ಅಗ್ನಿಹೋತ್ರಿ ಮೇಲೆ ಅಧಿಕಾರ ದುರ್ಬಳಕೆ ಮತ್ತು ಯೋಜನೆ ಹಣವನ್ನು ವೈಯಕ್ತಿಕವಾಗಿ ಬಳಕೆ ಮಾಡಿರುವ ಮತ್ತು ಬೇರೆ ಕಂಪನಿಗೆ ಹೂಡಿಕೆ ಮಾಡಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆ ಕೇಂದ್ರ ಸರ್ಕಾರ ಇದೀಗ ವಜಾಗೊಳಿಸಿದೆ. ಇದನ್ನೂ ಓದಿ: ಈದ್‌ನಲ್ಲಿ 1 ದಿನ ಹಸು ತಿನ್ನದಿದ್ರೆ ನೀವು ಸಾಯಲ್ಲ; ಗೋಹತ್ಯೆ ಮಾಡದೇ ಬಕ್ರೀದ್ ಆಚರಿಸೋಣ – ಮುಸ್ಲಿಮರಿಗೆ ಅಜ್ಮಲ್ ಕರೆ
Advertisement
Advertisement
ಸತೀಶ್ ಅಗ್ನಿಹೋತ್ರಿ ಬುಲೆಟ್ ಟ್ರೈನ್ ಮುಖ್ಯಸ್ಥ ಹುದ್ದೆಯನ್ನು ರದ್ದುಗೊಳಿಸಲು ಸಕ್ಷಮ ಪ್ರಾಧಿಕಾರವು ಅನುಮೋದನೆ ನೀಡಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆ ಮಾಡಲು ನಿರ್ದೇಶಿಸಲಾಗಿದೆ ಎಂದು NHSRCL ಕಂಪನಿ ಕಾರ್ಯದರ್ಶಿಗೆ ಜುಲೈ 7 ರಂದು ರೈಲ್ವೇ ಮಂಡಳಿ ಬರೆದ ಪತ್ರದಲ್ಲಿ ಸ್ಪಷ್ಟವಾಗಿದೆ. ಪ್ರಸ್ತುತ NHSRCLನಲ್ಲಿ ನಿರ್ದೇಶಕರಾಗಿ ಅಧಿಕಾರದಲ್ಲಿರುವ ರಾಜೇಂದ್ರ ಪ್ರಸಾದ್ ಅವರಿಗೆ ವ್ಯವಸ್ಥಾಪಕ ನಿರ್ದೇಶಕರಾಗಿ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಳ್ಳಲು ನಿರ್ದೇಶಿಸಲಾಗಿದೆ. ಇದನ್ನೂ ಓದಿ: 100ಕ್ಕೂ ಹೆಚ್ಚು ಟ್ವಿಟ್ಟರ್ ಎಚ್‌ಆರ್ ಉದ್ಯೋಗಿಗಳು ವಜಾ
Advertisement
Center on Thursday sacked MD of the NHSRCL (#bullettrain project body) Satish Agnihotri, who had a year ago been appointed to the post as a special case and on an out-of-turn basis. 1/n pic.twitter.com/t5s9OwMUXE
— Arvind Chauhan (@Arv_Ind_Chauhan) July 7, 2022
ಅಗ್ನಿಹೋತ್ರಿ ವಿರುದ್ಧ ಭ್ರಷ್ಟಾಚಾರ ತಡೆ ಕಾಯಿದೆ, 1988ರ ಅಡಿಯಲ್ಲಿ ತನಿಖೆ ನಡೆಸಿ ಆರು ತಿಂಗಳೊಳಗೆ ಅಥವಾ 2022ರ ಡಿಸೆಂಬರ್ 12 ರೊಳಗೆ ತನಿಖಾ ವರದಿಯನ್ನು ಲೋಕಪಾಲ್ ಕಚೇರಿಗೆ ಸಲ್ಲಿಸುವಂತೆ ಲೋಕಪಾಲ್ ನ್ಯಾಯಾಲಯವು ಸಿಬಿಐಗೆ ನಿರ್ದೇಶನ ನೀಡಿದೆ.