Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೈವಾಹಿಕ ಅತ್ಯಾಚಾರ ಅಪರಾಧೀಕರಣ – ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಹೇಳಿದ್ದೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ವೈವಾಹಿಕ ಅತ್ಯಾಚಾರ ಅಪರಾಧೀಕರಣ – ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಹೇಳಿದ್ದೇನು?

Court

ವೈವಾಹಿಕ ಅತ್ಯಾಚಾರ ಅಪರಾಧೀಕರಣ – ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಹೇಳಿದ್ದೇನು?

Public TV
Last updated: October 3, 2024 11:39 pm
Public TV
Share
2 Min Read
SUPREME COURT
SHARE

ನವದೆಹಲಿ: ಒಬ್ಬ ವ್ಯಕ್ತಿ ತನ್ನ ಪತ್ನಿಯೊಂದಿಗೆ ನಡೆಸುವ ಲೈಂಗಿಕ ಕ್ರಿಯೆಗಳನ್ನು ದಂಡನಾರ್ಹ ʻಅತ್ಯಾಚಾರʼ ಎಂದು ಪರಿಗಣಿಸಿದಲ್ಲಿ, ಅದು ವೈವಾಹಿಕ ಸಂಬಂಧದ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ (Supreme Court) ಗುರುವಾರ ತಿಳಿಸಿದೆ.

ವೈವಾಹಿಕ ಸಂಬಂಧದಲ್ಲಿ ಅತ್ಯಾಚಾರ (marital rape) ನಡೆದರೆ, ಕಾನೂನಿನ ತತ್ವಗಳ ಆಧಾರದಲ್ಲಿ, ಪತಿಗೆ ಕ್ರಿಮಿನಲ್‌ ಕ್ರಮದಿಂದ ವಿನಾಯಿತಿ ನೀಡಿರುವುದನ್ನು ತೆಗೆದುಹಾಕಿದಲ್ಲಿ ಅದು ವೈವಾಹಿಕ ಸಂಬಂಧದ ಮೇಲೆ ಅಗಾಧ ಪರಿಣಾಮ ಬೀರಲಿದೆ. ಸಾಮಾಜಿಕ ಮತ್ತು ಕೌಟುಂಬಿಕ ಸಂರಚನೆಯಲ್ಲಿ ವೇಗದ ಬದಲಾವಣೆಗಳನ್ನು ಕಾಣುತ್ತಿದ್ದೇವೆ. ಈಗ, ಈ ವಿಷಯಕ್ಕೆ ಸಂಬಂಧಿಸಿದ ಕಾನೂನಿನಲ್ಲಿ ಮಾಡುವ ತಿದ್ದುಪಡಿಗಳು ದುರ್ಬಳಕೆಯಾಗುತ್ತದೆ ಎಂಬುದನ್ನು ಅಲ್ಲಗಳೆಯುವಂತಿಲ್ಲ ಎಂದೂ ಕೇಂದ್ರ ಸರ್ಕಾರ (Union Government) ತಿಳಿಸಿದೆ.

supreme Court 1

ವೈವಾಹಿಕ ಸಂಬಂಧದಲ್ಲಿ ನಡೆಯುವ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಪ್ರತಿಕ್ರಿಯೆಯಲ್ಲಿ ಕೇಂದ್ರವು ಈ ಅಭಿಪ್ರಾಯ ತಿಳಿಸಿದೆ.

ಅಪ್ರಾಪ್ತ ವಯಸ್ಕಳಲ್ಲದ ತನ್ನ ಹೆಂಡತಿಯನ್ನು ಲೈಂಗಿಕ ಕ್ರಿಯೆಗೆ ಒತ್ತಾಯಿಸಿದರೇ ಅತ್ಯಾಚಾರದ ಅಪರಾಧಕ್ಕಾಗಿ ಪತಿ ಕಾನೂನು ಕ್ರಮದಿಂದ ವಿನಾಯಿತಿ ಪಡೆಯಬೇಕೇ ಎಂಬ ಕಾನೂನಾತ್ಮಕ ಪ್ರಶ್ನೆಯನ್ನು ಎತ್ತುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ತ್ವರಿತಗತಿಯಲ್ಲಿ ಕೈಗೆತ್ತಿಕೊಂಡಿದೆ. ಈಗ ರದ್ದಾಗಿ ಭಾರತೀಯ ನ್ಯಾಯ ಸಂಹಿತೆ ಎಂದಾಗಿರುವ ಐಪಿಸಿ ಸೆಕ್ಷನ್ 375ರ ಅಡಿಯಲ್ಲಿ, ಅಪ್ರಾಪ್ತ ವಯಸ್ಕಳಲ್ಲದ ತನ್ನ ಪತ್ನಿಯೊಂದಿಗೆ ಲೈಂಗಿಕ ಸಂಭೋಗ ಅಥವಾ ಲೈಂಗಿಕ ಕ್ರಿಯೆ ನಡೆಸಿದರೆ ಅದು ಅತ್ಯಾಚಾರವಲ್ಲ. ಹೊಸ ಕಾನೂನಿನ ಅಡಿಯಲ್ಲಿಯೂ ಸೆಕ್ಷನ್ 63 ವಿನಾಯಿತಿ 2 (ಅತ್ಯಾಚಾರ) 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಪತ್ನಿಯೊಂದಿಗೆ ಪುರುಷ ಲೈಂಗಿಕ ಸಂಭೋಗ ಅಥವಾ ಲೈಂಗಿಕ ಕ್ರಿಯೆ ನಡೆಸುವುದು ಅತ್ಯಾಚಾರವಲ್ಲ. ಸಾಂವಿಧಾನಿಕ ಸಿಂಧುತ್ವದ ಆಧಾರದ ಮೇಲೆ ಐಪಿಸಿಯ ಸೆಕ್ಷನ್ 375 ರಡಿ ಪತಿಗೆ ಕ್ರಿಮಿನಲ್ ಕ್ರಮದಿಂದ ವಿನಾಯಿತಿ ನೀಡಿರುವುದನ್ನು ತೆಗೆದುಹಾಕಿದ್ದಲ್ಲಿ ಅದು ವೈವಾಹಿಕ ಸಂಬಂಧದ ಮೇಲೆ ಅಗಾಧ ಪರಿಣಾಮ ಬೀರಲಿದೆ. ಜೊತೆಗೆ ಮದುವೆ ಸಂಸ್ಥೆಯಲ್ಲಿ ಗಂಭೀರ ಅಡಚಣೆಗಳಿಗೆ ಕಾರಣವಾಗಬಹುದು ಎದು ಕೇಂದ್ರ ಸರ್ಕಾರ ತನ್ನ ಅಫಿಡವಿಟ್ ನಲ್ಲಿ ತಿಳಿಸಿದೆ.

Marriage

ಕೇಂದ್ರ ಸರ್ಕಾರ ಅಫಿಡವಿಟ್‌ನಲ್ಲಿ ಹೇಳಿರುವುದೇನು?
ವೈವಾಹಿಕ ಸಂಬಂಧದಲ್ಲಿ ಅತ್ಯಾಚಾರ ನಡೆದರೆ ಪತಿಗೆ ಕ್ರಿಮಿನಲ್‌ ಕ್ರಮದಿಂದ ವಿನಾಯಿತಿ ನೀಡಿರುವುದು ಸಮರ್ಥನೀಯವಾಗಿದೆ. ಈ ವಿಷಯವನ್ನು ಕಟ್ಟುನಿಟ್ಟಿನಿಂದ ಕಾನೂನಾತ್ಮಕ ದೃಷ್ಟಿಯಿಂದ ನೋಡುವ ಬದಲು ಸಮಗ್ರವಾಗಿ ನೋಡಬೇಕು. ಪತ್ನಿಯ ಒಪ್ಪಿಗೆ ಉಲ್ಲಂಘನೆ ಮಾಡುವ ಮೂಲಭೂತ ಹಕ್ಕನ್ನು ಪತಿ ಹೊಂದಿಲ್ಲ. ಆದರೆ ವೈವಾಹಿಕ ಸಂಬಂಧದಲ್ಲಿ ‘ಅತ್ಯಾಚಾರ’ ಸ್ವರೂಪದಲ್ಲಿ ಅಪರಾಧವಾಗಿ ಪರಿಗಣಿಸುವುದು ವಿಪರೀತ ಕಠಿಣವೆಂದೇ ಪರಿಗಣಿಸಬಹುದು. ಹೀಗಾಗಿ ಇದು ಅಳತೆಮೀರಿದ ಕ್ರಮವೆನಿಸಲಿದೆ ಎಂದಿದೆ.

ಒಬ್ಬ ವಿವಾಹಿತ ಮಹಿಳೆ ಹಾಗೂ ಆಕೆಯ ಪತಿಗೆ ಸಂಬಂಧಿಸಿದ ಪ್ರಕರಣವನ್ನು ಇತರ ಪ್ರಕರಣಗಳಂತೆ ಪರಿಗಣಿಸಬಾರದು. ಮಹಿಳೆ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿ ಪ್ರಕರಣಗಳಲ್ಲಿ ಕಾನೂನು ಕ್ರಮಕ್ಕೆ ಬೇರೆ ಬೇರೆ ಅವಕಾಶಗಳಿವೆ. ವೈವಾಹಿಕ ಸಂಬಂಧದಲ್ಲಿ ಲೈಂಗಿಕ ಕ್ರಿಯೆಗೆ ಸಂಬಂಧಿಸಿ ಪರಸ್ಪರರಲ್ಲಿ ನಿರಂತರ ನಿರೀಕ್ಷೆಗಳು ಇರುತ್ತವೆ. ಇಂತಹ ನಿರೀಕ್ಷೆಯು ಲೈಂಗಿಕ ಕ್ರಿಯೆಗಾಗಿ ಪತ್ನಿಯನ್ನು ಬಲವಂತ ಮಾಡುವ ಅಥವಾ ಆಕೆಯ ಇಚ್ಛೆಗೆ ವಿರುದ್ಧವಾಗಿ ನಡೆದುಕೊಳ್ಳುವ ಹಕ್ಕನ್ನು ಪತಿಗೆ ನೀಡುವುದಿಲ್ಲ. ಆದರೆ ಇತರ ಅನ್ನೋನ್ಯ ಸಂಬಂಧ ಅಥವಾ ಅಪರಿಚಿತನಿಂದ ಲೈಂಗಿಕ ಕ್ರಿಯೆಗೆ ಒತ್ತಾಯ ಕಂಡುಬಂದಲ್ಲಿ ಪ್ರಕರಣವೇ ಬೇರೆಯಾಗುತ್ತದೆ.

ಆಗ ವೈವಾಹಿಕ ಸಂಬಂಧದಲ್ಲಿಯೇ ಒಪ್ಪಿತ ಲೈಂಗಿಕತೆ ಹಾಗೂ ವಿವಾಹೇತರ ಸಂಬಂಧದಲ್ಲಿ ಲೈಂಗಿಕತೆ ನಡುವಿನ ವ್ಯತ್ಯಾಸವನ್ನು ನಿರೂಪಿಸಲು ಕಾನೂನು ರಚನೆಗೆ ಆಧಾರವಾಗಲಿದೆ ಎಂದು ಹೇಳಿದೆ.

TAGGED:married womenNew DelhiSupreme Courtಮದುವೆಮಹಿಳೆಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

CSK 3
Cricket

ಕೋಲ್ಕತ್ತಾಗೆ 4ನೇ ಸೋಲು- ಚೆನ್ನೈಗೆ 32 ರನ್‌ಗಳ ಸೂಪರ್‌ ಜಯ, ಮುಂಬೈ ಹಿಂದಿಕ್ಕಿದ ಕಿಂಗ್ಸ್‌

Public TV
By Public TV
52 minutes ago
Rayareddy
Districts

25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ

Public TV
By Public TV
1 hour ago
IPL all teams captains
Cricket

ಆಸ್ಟ್ರೇಲಿಯಾದಲ್ಲಿ ಐಪಿಎಲ್‌, ಭಾರತದಲ್ಲಿ ಬಿಗ್‌ ಬ್ಯಾಷ್‌ ಲೀಗ್‌ – ಆಡಿಲೇಡ್‌ನಲ್ಲಿ ಪಂದ್ಯ ಆಯೋಜನೆಗೆ ಭಾರೀ ಚರ್ಚೆ

Public TV
By Public TV
2 hours ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೀಶ್ ಗೌಡ ಕೊಲೆ ಕೇಸ್; 10 ವರ್ಷಗಳ ಬಳಿಕ ಬುಧವಾರ ಕೋರ್ಟ್ ತೀರ್ಪು – ವಿನಯ್ ಕುಲಕರ್ಣಿಗೆ ಟೆನ್ಷನ್

Public TV
By Public TV
3 hours ago
AYODHYA
Bengaluru City

ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು

Public TV
By Public TV
3 hours ago
PM Narendra Modi Inaugurates Delhi Dehradun Expressway
Latest

ದೆಹಲಿ-ಡೆಹ್ರಾಡೂನ್‌ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ – ಸಂಚಾರ 6 ಗಂಟೆಯಿಂದ 2.5 ಗಂಟೆಗೆ ಇಳಿಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?