– ಆರ್‌ಟಿಇ ಕಾಯ್ದೆಗೆ ಕೇಂದ್ರದಿಂದ ತಿದ್ದುಪಡಿ
– ಫಲಿತಾಂಶ ಪ್ರಕಟವಾದ 2 ತಿಂಗಳ ಒಳಗಡೆ ಪರೀಕ್ಷೆ
– ಸಪ್ಲಿಮೆಂಟರಿ ಪರೀಕ್ಷೆಯಲ್ಲೂ ಫೇಲ್ ಆದರೆ ಅದೇ ಕ್ಲಾಸ್‌ನಲ್ಲಿ ಓದಬೇಕು
ನವದೆಹಲಿ: 5 ಮತ್ತು 8ನೇ ತರಗತಿ ಪರೀಕ್ಷೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ (Union Government) ಮಹತ್ವದ ತೀರ್ಮಾನವನ್ನು ಕೈಗೊಂಡಿದೆ. ಇನ್ನು ಮುಂದೆ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಫೇಲ್ ಆದರೆ ಅದೇ ತರಗತಿಯಲ್ಲೇ ಓದಬೇಕಾಗುತ್ತದೆ.
ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮಕ್ಕಳ ಹಕ್ಕು (RTE) ಕಾಯ್ದೆ ನಿಯಮಗಳು – 2010 ಕ್ಕೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದೆ. ಹೊಸ ನಿಯಮಗಳ ಪ್ರಕಾರ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ನಿಯಮಿತವಾಗಿ ಪರೀಕ್ಷೆಗಳನ್ನು ನಡೆಸುವ ಅಧಿಕಾರವನ್ನು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ನೀಡಿದೆ. ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯಲ್ಲಿ ಫೇಲ್ ಆದರೆ ಅವರು ಅದೇ ತರಗತಿಯಲ್ಲಿ ಮುಂದುವರಿಯಬೇಕಾಗುತ್ತದೆ.
Advertisement
Advertisement
Advertisement
ವಿದ್ಯಾರ್ಥಿ 5 ಮತ್ತು 8 ನೇ ತರಗತಿಯಲ್ಲಿ ಫೇಲ್ (Fail) ಆದರೆ ಫಲಿತಾಂಶ ಪ್ರಕಟವಾದ 2 ತಿಂಗಳ ಒಳಗಡೆ ಮತ್ತೊಮ್ಮೆ ಪರೀಕ್ಷೆ (Exam) ಬರೆಯಬೇಕಾಗುತ್ತದೆ. ಈ ಪರೀಕ್ಷೆಯಲ್ಲೂ ಫೇಲ್ ಆದರೆ ಆ ವಿದ್ಯಾರ್ಥಿ ಅದೇ ತರಗತಿಯಲ್ಲೇ ಓದಬೇಕಾಗುತ್ತದೆ. ಆದರೆ ಪ್ರಾಥಮಿಕ ಶಿಕ್ಷಣವನ್ನು ಪೂರ್ಣಗೊಳಿಸುವವರೆಗೆ ವಿದ್ಯಾರ್ಥಿಯನ್ನು ಶಾಲೆಗಳು ಹಾಕುವಂತಿಲ್ಲ ಎಂದು ಶಿಕ್ಷಣ ಸಚಿವಾಲಯ ಪ್ರಕಟಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ. ಇದನ್ನೂ ಓದಿ: 5 ರೂ. ಕುರ್ ಕುರೆಗಾಗಿ ಮಾರಾಮಾರಿ – 10ಕ್ಕೂ ಹೆಚ್ಚು ಜನ ಆಸ್ಪತ್ರೆ ಪಾಲು
Advertisement
ಕೇಂದ್ರೀಯ ವಿದ್ಯಾಲಯ, ನವೋದಯ ವಿದ್ಯಾಲಯ, ಮತ್ತು ಸೈನಿಕ ಶಾಲೆಗಳು ಸೇರಿದಂತೆ ಕೇಂದ್ರ ಸರ್ಕಾರವು ನಡೆಸುತ್ತಿರುವ 3,000 ಕ್ಕೂ ಹೆಚ್ಚು ಶಾಲೆಗಳಿಗೆ ಅಧಿಸೂಚನೆಯು ಅನ್ವಯವಾಗುತ್ತದೆ.
ಶಾಲಾ ಶಿಕ್ಷಣ ರಾಜ್ಯಕ್ಕೆ ಸಂಬಂಧಿಸಿದ ವಿಷಯವಾಗಿರುವ ಕಾರಣ ರಾಜ್ಯಗಳು ಈ ವಿಷಯದಲ್ಲಿ ತಮ್ಮ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಈಗಾಗಲೇ ದೆಹಲಿ ಸೇರಿದಂತೆ 16 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳು ಈ ನಿಯಮವನ್ನು ಜಾರಿ ಮಾಡಿದೆ. ಹರಿಯಾಣ ಮತ್ತು ಪುದುಚೇರಿ ಇನ್ನೂ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಆದರೆ ಉಳಿದ ರಾಜ್ಯಗಳು ಮತ್ತು ಕೆಂದ್ರಾಡಳಿತ ಪ್ರದೇಶಗಳ ಈ ನೀತಿಯನ್ನು ಮುಂದುವರಿಸಲು ನಿರ್ಧರಿಸಿವೆ ಎಂದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.