ಉಕ್ರೇನ್‌ನಲ್ಲಿ ಓದಿದ ವಿದ್ಯಾರ್ಥಿಗಳಿಗೆ ಭಾರತದಲ್ಲಿ ವೈದ್ಯಕೀಯ ಸೀಟ್‌ ನೀಡಲು ಸಾಧ್ಯವಿಲ್ಲ: ಕೇಂದ್ರ

Public TV
1 Min Read
Russia Ukraine

ನವದೆಹಲಿ: ರಾಷ್ಟ್ರೀಯ ವೈದ್ಯಕೀಯ ಆಯೋಗದ ಕಾಯ್ದೆಯಲ್ಲಿ ಅವಕಾಶವಿಲ್ಲದ ಕಾರಣದಿಂದಾಗಿ ಉಕ್ರೇನ್‌ನಿಂದ(Ukraine) ಹಿಂದಿರುಗಿದ ವೈದ್ಯಕೀಯ(Medical) ವಿದ್ಯಾರ್ಥಿಗಳಿಗೆ ಭಾರತೀಯ ವಿಶ್ವವಿದ್ಯಾನಿಲಯಗಳಲ್ಲಿ ವಸತಿ ಕಲ್ಪಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ (Union Government) ಸುಪ್ರೀಂಕೋರ್ಟ್‌ಗೆ(Supreme Court) ತಿಳಿಸಿದೆ.

ಈ ಬಗ್ಗೆ ಅಫಿಡವಿಟ್(Affidavit) ಸಲ್ಲಿಸಿರುವ ಕೇಂದ್ರ ಸರ್ಕಾರ, ಇಂತಹ ಸಡಿಲಿಕೆಗಳಿಂದ ಭಾರತದಲ್ಲಿ ವೈದ್ಯಕೀಯ ಶಿಕ್ಷಣದ ಗುಣಮಟ್ಟಕ್ಕೆ ತೊಂದರೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಸೆಮಿಕಂಡಕ್ಟರ್‌ ಘಟಕ ಸ್ಥಾಪನೆಗೆ ಕರ್ನಾಟಕವನ್ನು ಬಿಟ್ಟು ಗುಜರಾತ್‌ ಆಯ್ಕೆ ಮಾಡಿದ್ದು ಯಾಕೆ – ಪ್ರಶ್ನೆಗೆ ಉತ್ತರ ಕೊಟ್ಟ ವೇದಾಂತ ಕಂಪನಿ

Supreme Court

ಉಕ್ರೇನ್, ರಷ್ಯಾ(Russia) ಯುದ್ಧದಿಂದ ಸಾವಿರಾರು ವೈದ್ಯಕೀಯ ವಿದ್ಯಾರ್ಥಿಗಳು ಭಾರತಕ್ಕೆ ಮರಳಿದ್ದರು. ತಮ್ಮ ಶಿಕ್ಷಣ ಅರ್ಧಕ್ಕೆ ನಿಂತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ(India) ಮುಂದುವರಿಸಲು ಅವಕಾಶ ನೀಡುವಂತೆ ಕೋರಿ ಹಲವು ವಿದ್ಯಾರ್ಥಿಗಳು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ನೋಟಿಸ್ ಜಾರಿ ಮಾಡಿ ಈ ಬಗ್ಗೆ ಉತ್ತರಿಸಲು ಸೂಚಿಸಿತ್ತು.

ukraine indians 1

ಕೋರ್ಟ್ ನೋಟಿಸ್ ಹಿನ್ನೆಲೆ ಅಫಿಡವಿಟ್ ಸಲ್ಲಿಸಿರುವ ಕೇಂದ್ರ ಸರ್ಕಾರ, ನೀಟ್‌ನಲ್ಲಿ (NEET) ಕಳಪೆ ಅರ್ಹತೆ ಮತ್ತು ಸುಲಭದಲ್ಲಿ ವೈದ್ಯಕೀಯ ಸೀಟುಗಳು ಕೈಗೆಟುಕುವ ಕಾರಣಗಳಿಂದ ವಿದ್ಯಾರ್ಥಿಗಳು ವಿದೇಶಗಳಿಗೆ ಹೋಗಿದ್ದಾರೆ. ಭಾರತದ ಪ್ರಧಾನ ವೈದ್ಯಕೀಯ ಕಾಲೇಜುಗಳಲ್ಲಿ ಕಳಪೆ ಮೆರಿಟ್ ವಿದ್ಯಾರ್ಥಿಗಳಿಗೆ ಅವಕಾಶ ನೀಡುವುದು ಭವಿಷ್ಯದಲ್ಲಿ ಸಮಸ್ಯೆಗೆ ಕಾರಣವಾಗಬಹುದು ಎಂದು ಅಫಿಡವಿಟ್‌ನಲ್ಲಿ ಸರ್ಕಾರ ಉಲ್ಲೇಖಿಸಿದೆ. ಇದನ್ನೂ ಓದಿ: ಲವರ್ ಜೊತೆ ಪತ್ನಿಯ ಜಾಲಿ ರೈಡ್ – ಸ್ಕೂಟಿಯನ್ನು ಚೇಸ್ ಮಾಡಿ ಪ್ರಿಯಕರನಿಗೆ ಕಪಾಳಮೋಕ್ಷ ಮಾಡಿದ ಪತಿ

ಯುದ್ಧದ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಉಕ್ರೇನ್‌ನಿಂದ ಹಿಂದಿರುಗಿದ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಕ್ರಮಗಳನ್ನು ತೆಗೆದುಕೊಂಡಿದೆ. ಆದರೆ ಅವರಿಗೆ ಭಾರತದ ಕಾಲೇಜುಗಳಲ್ಲಿ ಸೀಟುಗಳನ್ನು ನೀಡಲು ಸಾಧ್ಯವಾಗುವುದಿಲ್ಲ. ಸರ್ಕಾರ ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕಿದೆ ಎಂದು ಉಲ್ಲೇಖಿಸಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *