ನವದೆಹಲಿ: ಪ್ರವಾಸೋದ್ಯಮಕ್ಕೆ (Tourism) ಉತ್ತೇಜನ ನೀಡುವ ಸಲುವಾಗಿ ಹೋಂಸ್ಟೇ (Homestays) ನಿರ್ಮಾಣಕ್ಕೆ ಮುದ್ರಾ ಲೋನ್ (Mudra Loans) ವಿಸ್ತರಿಸುವುದಾಗಿ ಬಜೆಟ್ (Union Budget 2025 ) ಮಂಡನೆ ವೇಳೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
50 ಪ್ರವಾಸೋದ್ಯಮ ತಾಣಗಳನ್ನು ಅಭಿವೃದ್ಧಿಪಡಿಸಲು ಕೇಂದ್ರ ಹಾಗೂ ರಾಜ್ಯಗಳ ಸಹಭಾಗಿತ್ವದಲ್ಲಿ ಟಾಪ್ 50 ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲಿದೆ. ಇದಕ್ಕಾಗಿ ಹೋಂಸ್ಟೇ ನಿರ್ಮಾಣಕ್ಕೆ ಮುದ್ರಾ ಸಾಲ ವಿಸ್ತರಿಸಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕರ್ನಾಟಕಕ್ಕೆ ಬಜೆಟ್‌ನಲ್ಲಿ ದೊಡ್ಡ ಅನ್ಯಾಯ: ಸಿಎಂ
Advertisement
ದೇಶದಲ್ಲಿ ಪ್ರವಾಸೋದ್ಯಮವನ್ನು ಹೆಚ್ಚಿಸುವ ಪ್ರಯತ್ನ ನಡೆಯುತ್ತಿದೆ. ಇನ್ನೂ ಖಾಸಗಿ ವಲಯದ ಸಹಭಾಗಿತ್ವದಲ್ಲಿ ವೈದ್ಯಕೀಯ ಪ್ರವಾಸೋದ್ಯಮವನ್ನು ಉತ್ತೇಜಿಸಲಾಗುವುದು. ಸರ್ಕಾರವು ಭಗವಾನ್ ಬುದ್ಧನ ಜೀವನ ಮತ್ತು ಸಮಯಕ್ಕೆ ಸಂಬಂಧಿಸಿದ ತಾಣಗಳ ಬಗ್ಗೆ ವಿಶೇಷ ಗಮನ ನೀಡಲಿದೆ ಎಂದು ಅವರು ಹೇಳಿದ್ದಾರೆ.
Advertisement
Advertisement
ಇದೇ ವೇಳೆ ಬಿಹಾರದ ಮಿಥಿಲಾಂಚಲ್ ಪ್ರದೇಶದ 50,000 ಹೆಕ್ಟೇರ್‌ಗೆ ಪ್ರಯೋಜನವನ್ನು ನೀಡುವ ಪಶ್ಚಿಮ ಕೋಸಿ ಕಾಲುವೆಗೆ ಆರ್ಥಿಕ ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ.
Advertisement
ಪ್ರಧಾನ ಮಂತ್ರಿ ಮುದ್ರಾ ಯೋಜನೆ (PMMY) ಏಪ್ರಿಲ್ 8, 2015 ರಂದು ಪ್ರಧಾನಿ ಮೋದಿಯವರು ಪ್ರಾರಂಭಿಸಿದ ಯೋಜನೆಯಾಗಿದ್ದು, ಇದು ಕಾರ್ಪೊರೇಟ್ ಅಲ್ಲದ, ಕೃಷಿಯೇತರ ಸಣ್ಣ, ಸೂಕ್ಷ್ಮ ಉದ್ಯಮಗಳಿಗೆ ಬ್ಯಾಂಕ್ ಮೂಲಕ 20 ಲಕ್ಷ ರೂ.ವರೆಗೆ ಸಾಲವನ್ನು ಒದಗಿಸುತ್ತದೆ. ಇದನ್ನೂ ಓದಿ: Budget 2025: ಗ್ರಾಮೀಣ ಆರ್ಥಿಕತೆಗೆ ವೇಗವರ್ಧಕವಾಗಿ ಭಾರತೀಯ ಅಂಚೆ ಸೇವೆಗಳ ಕಾರ್ಯನಿರ್ವಹಣೆ