ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಅಸ್ಥಿರಗೊಳಿಸಲು ರಾಜಕೀಯ ಪಿತೂರಿ ನಡೆಸುತ್ತಿರುವ ಬಿಜಪಿ, ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಪ್ರಯತ್ನಿಸುತ್ತಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿರುವುದಾಗಿ ದೆಹಲಿ ಸಚಿವೆ ಅತಿಶಿ (Atishi) ಆರೋಪಿಸಿದ್ದಾರೆ.
Advertisement
ದೆಹಲಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅರವಿಂದ್ ಕೇಜ್ರಿವಾಲ್ ಅವರನ್ನು ಸುಳ್ಳು ಪ್ರಕರಣದಲ್ಲಿ (Liquor Policy Scam) ಬಂಧಿಸಲಾಗಿದೆ. ಅವರ ವಿರುದ್ಧ ಅಪರಾಧ ಸಾಬೀತುಪಡಿಸಲು ಯಾವುದೇ ಸಾಕ್ಷ್ಯಗಳಿಲ್ಲ. ಆದ್ದರಿಂದ ದೆಹಲಿಯ ಚುನಾಯಿತ ಸರ್ಕಾರ ಉರುಳಿಸಲು ಸಂಚು ನಡೆಯುತ್ತಿದೆ. ಈ ಹಿಂದೆ ನಡೆದ ಕೆಲವು ಬೆಳವಣಿಗೆಗಳನ್ನು ನೋಡಿದಾಗ ಪೂರ್ವನಿಯೋಜಿತವಾಗಿಯೇ ಪ್ಲ್ಯಾನ್ ಮಾಡಿದ್ದಾರೆ ಅನ್ನೋದು ಗೊತ್ತಾಗುತ್ತಿದೆ ಎಂದು ಅತಿಶಿ ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಸ್ವತಂತ್ರ ಭಾರತದ 2ನೇ ಲೋಕಸಭಾ ಚುನಾವಣೆ ಬಗ್ಗೆ ನಿಮಗೆಷ್ಟು ಗೊತ್ತು?
Advertisement
Advertisement
ಬಿಜೆಪಿ ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಸಂಚು ರೂಪಿಸುತ್ತಿದೆ ಅನ್ನೋದು ಸ್ಪಷ್ಟವಾಗಿ ತಿಳಿಯುತ್ತಿದೆ. ಅದರ ಸೂಚನೆಗಳು ನಮಗೆ ಸಿಕ್ಕಿವೆ. ಲೋಕಸಭಾ ಚುನಾವಣೆ ಘೋಷಣೆಯಾದಾಗಿನಿಂದ ದೆಹಲಿಯಲ್ಲಿ ಯಾವುದೇ ಅಧಿಕಾರಿಯ ನೇಮಕಾತಿ, ವರ್ಗಾವಣೆ ಆಗಿಲ್ಲ. ಅಧಿಕಾರಿಗಳು ಸರ್ಕಾರದ ಸಭೆಗಳಿಗೆ ಬರುತ್ತಿಲ್ಲ. ಕಳೆದ ವಾರ, ಲೆಫ್ಟಿನೆಂಟ್ ಗವರ್ನರ್ ಅವರು ಕೇಂದ್ರ ಗೃಹ ಸಚಿವಾಲಯಕ್ಕೆ ಆಧಾರರಹಿತ ಪತ್ರ ಬರೆದು, ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿಯನ್ನೂ ವಜಾ ಮಾಡಿಸಿದ್ದಾರೆ. ಇವೆಲ್ಲವೂ ದೆಹಲಿ ಸರ್ಕಾರವನ್ನು ಮುಗಿಸಲು ಮಾಡಿರುವ ಸಂಚು ಎಂದು ಅತಿಶಿ ಆರೋಪಿಸಿದ್ದಾರೆ.
Advertisement
ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೆ ತರುವುದು ಕಾನೂನು ಬಾಹಿರ, ಅಸಾಂವಿಧಾನಿಕ ಮತ್ತು ಜನರ ತೀರ್ಪಿಗೆ ವಿರುದ್ಧವಾದದ್ದು ಎಂದು ಬಿಜೆಪಿಯನ್ನು ಎಚ್ಚರಿಸಲು ಬಯಸುತ್ತೇನೆ. ದೆಹಲಿಯ ಜನರು ಅರವಿಂದ್ ಕೇಜ್ರವಾಲ್ ಮತ್ತು ಆಪ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ರಾಮನಗರಲ್ಲಿ 30 ಕೆಜಿಗೂ ಅಧಿಕ ಪ್ರಮಾಣದ ಚಿನ್ನ; ದಾವಣಗೆರೆಯಲ್ಲಿ 12.50 ಕೋಟಿ ರೂ. ಮೌಲ್ಯದ ಚಿನ್ನಾಭರಣ, ವಜ್ರ ಜಪ್ತಿ!