ನವದೆಹಲಿ: ಇಲ್ಲಿನ ಅಸೋಲಾ ಅಭಯಾರಣ್ಯದಲ್ಲಿ ದೆಹಲಿಯ ಆಮ್ ಆದ್ಮಿ ಪಕ್ಷ (AAP) ನೇತೃತ್ವದ ಸರ್ಕಾರ ಆಯೋಜಿಸಿದ್ದ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ಹೈಜಾಕ್ ಮಾಡಲು ಪ್ರಯತ್ನಿಸಿದೆ ಎಂದು ಪರಿಸರ ಸಚಿವ ಗೋಪಾಲ್ ರೈ ಆರೋಪಿಸಿದ್ದಾರೆ.
Delhi Govt के वन महोत्सव में CM @ArvindKejriwal को शामिल होना था
लेकिन प्रधानमंत्री कार्यलय के आदेश पर Police ने मंच पर कब्ज़ा कर ज़बरदस्ती Modi जी की तस्वीर लगा दी और हटाने पर गिरफ़्तारी की धमकी दी
मोदी जी दिल्ली Govt के कायर्क्रम में अपनी तस्वीर लगाकर क्या साबित करना चाहते? pic.twitter.com/B3Hdo5KCLr
— AAP (@AamAadmiParty) July 24, 2022
Advertisement
ದೆಹಲಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಸೋಲಾ ವನ್ಯಜೀವಿ ಅಭಯಾರಣ್ಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಭಾಗಿಯಾಗಬೇಕಿತ್ತು. ಕೇಂದ್ರ ಸರ್ಕಾರ ಹೈಜಾಕ್ ಮಾಡಲು ಪ್ರಯತ್ನಿಸಿದ್ದರಿಂದಾಗಿ ಅವರು ಭಾಗಿಯಾಗದಿರಲು ನಿರ್ಧರಿಸಿದ್ದಾರೆ. ಕಾರ್ಯಕ್ರಮ ನಿಗದಿಯಾದ ಸ್ಥಳದಲ್ಲಿ ಕಳೆದ ರಾತ್ರಿ ಪೊಲೀಸರು ಪ್ರಧಾನಿ ನರೇಂದ್ರ ಮೋದಿ ಅವರಿರುವ ಬ್ಯಾನರ್‌ಗಳನ್ನು ಅಳವಡಿಸಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವೆಯ 18 ವಯಸ್ಸಿನ ಪುತ್ರಿ ಅಕ್ರಮ ಬಾರ್ ನಡೆಸುತ್ತಿದ್ದಾರೆಂದು ಆರೋಪ – ಕೈ ನಾಯಕರಿಗೆ ಸ್ಮೃತಿ ಇರಾನಿ ನೋಟಿಸ್
Advertisement
Advertisement
ದೆಹಲಿ ಪೊಲೀಸರು ಪ್ರಧಾನಿ ಕಾರ್ಯಾಲಯದ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಕೇಜ್ರಿವಾಲ್ ಸರ್ಕಾರದ ಕಾರ್ಯಕ್ರಮವನ್ನು ಪ್ರಧಾನಿ ಮೋದಿ ಅವರ ರಾಜಕೀಯ ಕಾರ್ಯಕ್ರಮವಾಗಿ ಪರಿವರ್ತಿಸಿದ್ದಾರೆ. ಕಳೆದ ರಾತ್ರಿಯೇ ಪೊಲೀಸರು ಕಾರ್ಯಕ್ರಮ ನಿಗದಿಯಾದ ಸ್ಥಳಕ್ಕೆ ಧಾವಿಸಿ ಪ್ರದೇಶವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ಎಎಪಿ ಸರ್ಕಾರದ ಬ್ಯಾನರ್‌ಗಳನ್ನು ಹರಿದು ಹಾಕಿ, ಪ್ರಧಾನಿ ಮೋದಿ ಅವರಿರುವ ಬ್ಯಾನರ್‌ಗಳನ್ನು ಅಳವಡಿಸಿದ್ದಾರೆ. ಪ್ರಧಾನಿ ಮೋದಿ ಭಾವಚಿತ್ರವಿರುವ ಬ್ಯಾನರ್‌ಗಳನ್ನು ಮುಟ್ಟದಂತೆ ಜನರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮರಳು ಮೂಟೆ ಅಳವಡಿಸಿದ ನಂತರ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಲಘು ವಾಹನ ಸಂಚಾರ: ಬಿ.ಸಿ.ನಾಗೇಶ್
Advertisement
ಈ ಬೆಳವಣಿಗೆಯು ಪ್ರಧಾನಿ ನರೇಂದ್ರ ಮೋದಿ ಅವರು ಕೇಜ್ರಿವಾಲ್ ಅವರಿಗೆ ಹೆದರಿಕೊಂಡಿರುವ ಸೂಚನೆಯನ್ನು ತೋರಿಸುತ್ತದೆ. ಎಎಪಿ ಸರ್ಕಾರದ ವಿರುದ್ಧ ಅಪಪ್ರಚಾರದ ಪ್ರಯತ್ನಗಳು ನಡೆಯುತ್ತಿದ್ದು, ಸತ್ಯೇಂದ್ರ ಜೈನ್ ಅವರನ್ನು ಸುಳ್ಳು ಆರೋಪದ ಮೇಲೆ ಬಂಧಿಸಲಾಗಿದೆ. ಎಎಪಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸುವ ಪಿತೂರಿ ನಡೆಸಲಾಗುತ್ತಿದೆ. ಪೊಲೀಸರು ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಗಾಗಿ ಇರಬೇಕು. ಪ್ರಧಾನಿ ಮೋದಿ ಭಾವಚಿತ್ರದ ಬ್ಯಾನರ್ ಅಳವಡಿಸಲು ಅಲ್ಲ’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.