ನವದೆಹಲಿ: ಆನ್‍ಲೈನ್ ಬೆಟ್ಟಿಂಗ್ (Online Betting) ಪ್ಲಾಟ್‍ಫಾರ್ಮ್‍ಗಳ ಕುರಿತಾದ ಜಾಹೀರಾತುಗಳ ವಿಚಾರವಾಗಿ ಕೇಂದ್ರ ಸರ್ಕಾರ (Central Government) ಮಾಧ್ಯಮಗಳಿಗೆ ಎಚ್ಚರಿಕೆ ನೀಡಿದೆ. ಮಾಧ್ಯಮಗಳು ತಕ್ಷಣ ಇಂತಹ ಜಾಹೀರಾತುಗಳನ್ನು ನಿಲ್ಲಿಸಬೇಕು, ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಖಡಕ್ ಎಚ್ಚರಿಕೆ ರವಾನಿಸಿದೆ.
ಟಿವಿ ಚಾನೆಲ್‍ಗಳು, ಡಿಜಿಟಲ್ ಮೀಡಿಯಾ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ರೀತಿಯ ಬೆಟ್ಟಿಂಗ್ ಹಾಗೂ ಜೂಜು ಸಂಬಂಧಿತ ಜಾಹೀರಾತುಗಳನ್ನು ತಡೆಯುವಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ (Ministry of Information and Broadcasting) ಸೂಚಿಸಿದೆ. ಇಂತಹ ಜಾಹೀರಾತುಗಳಿಗೆ ಪಾವತಿಸಲು ಕಪ್ಪು ಹಣ ಬಳಕೆಯಾಗುವ ಸಾಧ್ಯತೆಯಿದೆ ಎಂದು ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಗಂಡನಿಗೆ ಬುದ್ಧಿ ಕಲಿಸಲು ಹೋಗಿ ಪೇಚಿಗೆ ಸಿಲುಕಿದ ಪತ್ನಿ!
ಇದಲ್ಲದೆ ಪ್ರಮುಖ ಕ್ರೀಡಾಕೂಟಗಳಲ್ಲಿ ವಿಶೇಷವಾಗಿ ಕ್ರಿಕೆಟ್‍ನಲ್ಲಿ ಅಂತಹ ಬೆಟ್ಟಿಂಗ್ ಮತ್ತು ಜೂಜಿನ ವೇದಿಕೆಗಳ ಪ್ರಚಾರವನ್ನು ಹೆಚ್ಚಿಸುವ ಪ್ರವೃತ್ತಿ ಇದೆ. ಶೀಘ್ರದಲ್ಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಕೂಟ ಆರಂಭವಾಗಲಿದೆ. ಈ ನಿಟ್ಟಿನಲ್ಲಿ ಸಚಿವಾಲಯ ಕ್ರಮಕ್ಕೆ ಮುಂದಾಗಿದೆ.
ಆದೇಶವನ್ನು ಪಾಲಿಸಲು ವಿಫಲವಾದರೆ ಸೂಕ್ತ ಕಾಯಿದೆಗಳ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ರೆಸಾರ್ಟ್ ತೋರಿಸುತ್ತೇನೆ ಬಾ ಅಂತ ಕರೆದು ಮಹಿಳೆ ಮೇಲೆ ರೇಪ್ – ಟೆಕ್ಕಿ ಅರೆಸ್ಟ್
Web Stories