ಧಾರವಾಡ: ಉತ್ತರ ಕರ್ನಾಟಕ ಭಾಗದ ಅದರಲ್ಲೂ ಧಾರವಾಡ ಜಿಲ್ಲೆಯ ನವಲಗುಂದ ಹಾಗೂ ಗದಗ ಜಿಲ್ಲೆಯ ನರಗುಂದ ರೈತರ (Farmers) ಬಹು ದಿನಗಳ ಬೇಡಿಕೆಯಾಗಿದ್ದ ಕಳಸಾ ಬಂಡೂರಿ (Kalasa-Banduri) ನಾಲಾ ಜೋಡಣೆ ಯೋಜನೆಗೆ ಕೇಂದ್ರ ಸರ್ಕಾರದ ಡಿಪಿಆರ್ (DPR) ಅನುಮೋದನೆ ನೀಡಿದೆ.
Advertisement
ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದನ್ನು ಸ್ವತಃ ಕೇಂದ್ರ ಸಚಿವರೂ ಆಗಿರುವ ಧಾರವಾಡ ಜಿಲ್ಲೆಯ ಸಂಸದರಾದ ಪ್ರಹ್ಲಾದ್ ಜೋಶಿ (Pralhad Joshi) ಅವರೇ ಹೇಳಿಕೊಂಡಿದ್ದು, ಇದು ಈ ಭಾಗದ ರೈತರಲ್ಲಿ ಹರ್ಷವನ್ನುಂಟು ಮಾಡಿದೆ. ವೀಡಿಯೋ ಮೂಲಕ ಮಾಹಿತಿ ಹಂಚಿಕೊಂಡ ಪ್ರಹ್ಲಾದ್ ಜೋಶಿ, ಕರ್ನಾಟಕಕ್ಕೆ ಅತ್ಯಂತ ಅವಶ್ಯಕವಾಗಿದ್ದ ಈ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi), ಗೃಹ ಸಚಿವ ಅಮಿತ್ ಶಾ (AmitShah) ಅವರಿಗೆ ಹಾಗೂ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಬಸವರಾಜ ಬೊಮ್ಮಾಯಿ (Basavaraj Bommai), ಬಿ.ಎಸ್ ಯಡಿಯೂರಪ್ಪ ಮತ್ತು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಗೆ ಧನ್ಯವಾದಗಳು ತಿಳಿಸುವುದಾಗಿ ಹೇಳಿದರು. ಇದನ್ನೂ ಓದಿ: ಕಳಸಾ ಬಂಡೂರಿ ಯೋಜನೆಗೆ ಜಲ ಆಯೋಗ ಅನುಮತಿ: ಪ್ರಹ್ಲಾದ್ ಜೋಶಿ ಮಾಹಿತಿ
Advertisement
ಕಳಸಾ ಭಂಡೂರಿ ಯೋಜನೆಯ ಅನುಮೋದನೆಗಾಗಿ ರಚನಾತ್ಮಕ ಯೋಜನಾ ವರದಿಯನ್ನು ನಿರೂಪಿಸಿದ ಮುಖ್ಯಮಂತ್ರಿಗಳಾದ ಶ್ರೀ @BSBommai ನೇತೃತ್ವದ ರಾಜ್ಯ ಸರ್ಕಾರಕ್ಕೆ , ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ @BSYBJP ವರಿಗೆ ಹಾಗೂ ರಾಜ್ಯದ ನೀರಾವರಿ ಸಚಿವರಾದ ಶ್ರೀ @GovindKarjol ಅವರಿಗೂ ಅನಂತ ಧನ್ಯವಾದಗಳು. pic.twitter.com/xaItc0ndQF
— Pralhad Joshi (@JoshiPralhad) December 29, 2022
Advertisement
ಈ ಯೋಜನೆ ಅನುಷ್ಠಾನಕ್ಕಾಗಿ ಆಗ್ರಹಿಸಿ ಸದಾ ಹೋರಾಟ ಮಾಡುತ್ತ ಬಂದ ರೈತ ಮುಖಂಡ ಶಂಕರ ಅಂಬಲಿ ಹರ್ಷ ವ್ಯಕ್ತಪಡಿಸಿದ್ದು, ಡಿಪಿಆರ್ ಕೇವಲ ಚುನಾವಣೆಗೆ ಮಾತ್ರ ಮೀಸಲಾಗಬಾರದು. ಕೂಡಲೇ ಕಾಮಗಾರಿ ಆರಂಭಿಸಿ ನಮ್ಮ ಪಾಲಿನ ನೀರನ್ನು ನಮಗೆ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ನಾಳೆ ಮಂಡ್ಯಕ್ಕೆ ಅಮಿತ್ ಶಾ ಗ್ರ್ಯಾಂಡ್ ಎಂಟ್ರಿ – ಅನ್ನದಾತರ ಕಿಚ್ಚಿಗೆ ಬೆದರಿ ಕಾರ್ಯಕ್ರಮ ದಿಢೀರ್ ಬದಲಾವಣೆ