ನವದೆಹಲಿ: ದೇಶಾದ್ಯಂತ ಮತ್ತೆ ಕೋವಿಡ್ ಕೇಸ್‌ಗಳು ಹೆಚ್ಚಾಗುತ್ತಿದ್ದು, ಕೇಂದ್ರ ಆರೋಗ್ಯ ಸಚಿವಾಲಯ 5 ರಾಜ್ಯಗಳಿಗೆ ಕಣ್ಗಾವಲು ಹಾಗೂ ಪರೀಕ್ಷೆಗಳನ್ನು ಮುಂದುವರಿಸಲು ಸೂಚನೆ ನೀಡಿದೆ. ಈ 5 ರಾಜ್ಯಗಳಲ್ಲಿ ಕರ್ನಾಟಕವೂ ಸೇರಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಕೋವಿಡ್ ಪ್ರಕರಣಗಳ ಹಿನ್ನೆಲೆ ತಮಿಳುನಾಡು, ಕೇರಳ, ತೆಲಂಗಾಣ, ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದೆ. ಇದನ್ನೂ ಓದಿ: ಕಾಶ್ಮೀರದ ಹತ್ಯೆಗಳಿಗೆ ಪಾಕಿಸ್ತಾನವನ್ನು ದೂರಿದ ಕೇಂದ್ರ
Advertisement
Advertisement
ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಈ 5 ರಾಜ್ಯಗಳಿಗೆ ಕಣ್ಗಾವಲು ಹಾಗೂ ಪರೀಕ್ಷೆಗಳನ್ನು ಹೆಚ್ಚಿಸಲು ತಿಳಿಸಿದ್ದಾರೆ. ಜನರಲ್ಲಿ ಕೋವಿಡ್ ಲಕ್ಷಣಗಳು ಕಂಡುಬಂದಲ್ಲಿ ಹಾಗೂ ಉಸಿರಾಟದ ಸಮಸ್ಯೆ ಇದ್ದಲ್ಲಿ ತಕ್ಷಣವೇ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು. ಇದರಿಂದ ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸಬಹುದು ಎಂದಿದ್ದಾರೆ. ಇದನ್ನೂ ಓದಿ: ಬೀದರ್ ಪ್ರವೇಶಕ್ಕೆ ಪ್ರಮೋದ್ ಮುತಾಲಿಕ್, ಆಂದೋಲನ ಶ್ರೀಗಳಿಗೆ ಬ್ಯಾನ್
Advertisement
ಈ 5 ರಾಜ್ಯಗಳು ಕೇಂದ್ರಕ್ಕೆ ನೀಡುವ ಅಂಕಿ ಅಂಶಗಳ ಪ್ರಕಾರ ಕೇರಳದ 11 ಜಿಲ್ಲೆಗಳು, ತಮಿಳುನಾಡುನ 2 ಜಿಲ್ಲೆಗಳು, ಮಹಾರಾಷ್ಟ್ರದ 6 ಜಿಲ್ಲೆಗಳು, ಕರ್ನಾಟಕದ ಬೆಂಗಳೂರು ಹಾಗೂ ತೆಲಂಗಾಣದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ.