ಚೆನ್ನೈ: ಕಸಾಯಿಖಾನೆಗಳಿಗೆ ಗೋವುಗಳ ಮಾರಾಟದ ಮೇಲೆ ಕೇಂದ್ರ ಸರ್ಕಾರ ಹೇರಿದ್ದ ನಿಷೇಧಕ್ಕೆ ಮದ್ರಾಸ್ ಹೈಕೋರ್ಟ್ ನ ಮಧುರೈ ಪೀಠ ನಾಲ್ಕು ವಾರಗಳ ತಡೆಯಾಜ್ಞೆ ನೀಡಿದೆ.
ಆಹಾರದ ಆಯ್ಕೆ ವ್ಯಕ್ತಿಯ ಮೂಲಭೂತ ಹಕ್ಕು ಎಂದು ವಾದಿಸಿ ಕೋರ್ಟ್‍ನಲ್ಲಿ ಪಿಐಎಲ್ ಅರ್ಜಿ ಸಲ್ಲಿಕೆಯಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ನಾಲ್ಕು ವಾರಗಳ ಒಳಗಾಗಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಹೇಳಿದೆ.
Advertisement
ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆಯು ಕಳೆದ ವಾರ ಪ್ರಾಣಿ ಹಿಂಸೆ ತಡೆ ಕಾಯ್ದೆಯ ಅಡಿ ಹೊಸ ನಿಯಮಗಳನ್ನ ಹೇರಿತ್ತು. ಜಾನುವಾರುಗಳನ್ನು ಕೃಷಿ ಉಪಯೋಗಕ್ಕೆ ಮಾತ್ರ ಮಾರಾಟ ಮಾಡಬೇಕು, ಕೊಲ್ಲುವ ಉದ್ದೇಶದಿಂದ ಜಾನುವಾರಗಳ ಮಾರಾಟ ಅಥವಾ ಖರೀದಿ ಮಾಡುವಂತಿಲ್ಲ ಎಂದು ನಿರ್ಬಂಧ ಹೇರಲಾಗಿತ್ತು.
Advertisement
ಇದಕ್ಕೆ ದೇಶದ ಹಲವೆಡೆ ವಿರೋಧ ವ್ಯಕ್ತವಾಗಿದೆ. ಕೆರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕೂಡ ಇದರ ವಿರುದ್ಧ ಪ್ರತಿಭಟಿಸಿದ್ದಾರೆ.
Advertisement
Madurai Bench of Madras HC grants a 4 week stay on central govt notification on cattle slaughter, directs state and GoI to reply in 4 weeks.
— ANI (@ANI_news) May 30, 2017