ಬೆಂಗಳೂರು: ರಾಜ್ಯಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ತೆರಿಗೆ ಪಾಲನ್ನು ಇನ್ನಷ್ಟು ಕಡಿತಗೊಳಿಸಲು ಕೇಂದ್ರ ಸರ್ಕಾರ ಮಾಡುತ್ತಿರುವ ಪ್ರಯತ್ನ ಕರ್ನಾಟಕ ವಿರೋಧಿ ಮಾತ್ರವಲ್ಲ, ಒಕ್ಕೂಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಾರುವ ಸಂವಿಧಾನಕ್ಕೆ ಕೂಡಾ ವಿರುದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಕಿಡಿಕಾರಿದ್ದಾರೆ.
ಮಾಧ್ಯಮ ಪ್ರಕಟಣೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸಿಎಂ, ರಾಜ್ಯದ ತೆರಿಗೆ ಪಾಲನ್ನು ಶೇ.41ರಿಂದ 40ಕ್ಕೆ ಇಳಿಸಲು ಶಿಫಾರಸು ಮಾಡುವಂತೆ ಹಣಕಾಸು ಆಯೋಗಕ್ಕೆ ಕೇಂದ್ರದ ಎನ್‌ಡಿಎ ಸರ್ಕಾರ ಸಿದ್ಧತೆ ನಡೆಸಿದೆ ಎಂದು ವರದಿಯಾಗಿದೆ. ನರೇಂದ್ರ ಮೋದಿ ಅವರು ಪ್ರಧಾನಿಯಾದ ದಿನದಿಂದ ಕೇಂದ್ರ ಸರ್ಕಾರದ ನೀತಿ-ನಿರ್ಧಾರಗಳನ್ನು ಗಮನಿಸುತ್ತಾ ಬಂದರೆ ನಿರಂತರವಾಗಿ ರಾಜ್ಯಗಳ ಸಂವಿಧಾನಬದ್ಧ ಅಧಿಕಾರಗಳನ್ನು ಮೊಟಕುಗೊಳಿಸುತ್ತಾ, ಅವುಗಳನ್ನು ದುರ್ಬಲಗೊಳಿಸುತ್ತಾ ಬಂದಿರುವುದನ್ನು ಕಾಣಬಹುದು ಎಂದು ಟೀಕಿಸಿದರು.ಇದನ್ನೂ ಓದಿ: ಭಾರತ ಸೇರಿ ವಿಶ್ವಾದ್ಯಂತ ಫೇಸ್‌ಬುಕ್, ವಾಟ್ಸಪ್ ಡೌನ್
Advertisement
Advertisement
ರಾಜ್ಯಗಳು ಸಂಗ್ರಹಿಸಿ ಕೇಂದ್ರ ಸರ್ಕಾರಕ್ಕೆ ನೀಡುವ ತೆರಿಗೆಯಲ್ಲಿ ನ್ಯಾಯಬದ್ಧ ಪಾಲು ರಾಜ್ಯಗಳಿಗೆ ಹಂಚಿಕೆಯಾಗುವಂತೆ ನೋಡಿಕೊಳ್ಳಬೇಕಾಗಿರುವ ಜವಾಬ್ದಾರಿಯನ್ನು ಕೇಂದ್ರ ಹಣಕಾಸು ಆಯೋಗ ಹೊಂದಿದೆ. ಆದರೆ ಇದು ರಾಜ್ಯಗಳ ಹಕ್ಕುಗಳನ್ನು ದಮನಿಸಲು ಹೊರಟ ಕೇಂದ್ರ ಸರ್ಕಾರದ ಕೈಗಳ ಆಯುಧವಾಗಿರುವುದು ದುರಂತವೇ ಸರಿ. ರಾಜ್ಯಗಳು ಕೇಂದ್ರ ಸರ್ಕಾರದ ಮರ್ಜಿ ಕಾಯುವಂತಹ ಪರವಾಲಂಬಿ ಸ್ಥಿತಿಗೆ ನೂಕುವುದು ಈ ಹುನ್ನಾರದ ದುರುದ್ದೇಶವಾಗಿರುವಂತೆ ಕಾಣುತ್ತಿದೆ. ಇದನ್ನ ಸಹಿಸಲು ಸಾಧ್ಯ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
Advertisement
ಅಧಿಕಾರದ ವಿಕೇಂದ್ರೀಕರಣ ಪ್ರಜಾಪ್ರಭುತ್ವ, ಅಧಿಕಾರದ ಕೇಂದ್ರೀಕರಣ ಸರ್ವಾಧಿಕಾರ. ದೇಶದಲ್ಲಿ ಪ್ರಜಾಪ್ರಭುತ್ವ ಸ್ಥಾಪನೆಯಾಗಿ ಎಂಟು ದಶಕಗಳು ಪೂರ್ಣಗೊಳ್ಳುತ್ತಿರುವ ಇಂದಿನ ಸ್ಥಿತಿಯಲ್ಲಿ ಪ್ರಜಾಪ್ರಭುತ್ವವನ್ನು ಇನ್ನಷ್ಟು ವಿಕಾಸಗೊಳಿಸಿ ಅಧಿಕಾರದ ವಿಕೇಂದ್ರೀಕರಣ ಮಾಡಬೇಕಾದ ಕಾಲದಲ್ಲಿ ಕೇಂದ್ರ ಸರ್ಕಾರ ರಾಜ್ಯಗಳನ್ನು ತಮ್ಮ ಅಧೀನದ ಮಾಂಡಲಿಕರ ರೀತಿ ನಡೆಸಿಕೊಳ್ಳುತ್ತಿರುವುದು ವಿಷಾದನೀಯ. ಪ್ರತಿ ವರ್ಷ ಕನ್ನಡಿಗರಿಂದ ಸಂಗ್ರಹಿಸಲಾದ ಅಂದಾಜು ನಾಲ್ಕು ಲಕ್ಷ ಕೋಟಿ ರೂಪಾಯಿಗಳನ್ನು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತದೆ. ಅದರಲ್ಲಿ ರಾಜ್ಯಕ್ಕೆ ವಾಪಸು ಬರುವುದು ರೂಪಾಯಿಗೆ 15 ಪೈಸೆ ಮಾತ್ರ. ಹದಿನೈದನೇ ಹಣಕಾಸು ಆಯೋಗ ತೆರಿಗೆ ಹಂಚಿಕೆಯ ಪ್ರಮಾಣವನ್ನು ಶೇಕಡಾ 4.713ರಿಂದ ಶೇಕಡಾ 3.64ಕ್ಕೆ ಇಳಿಸಿದ್ದ ಕಾರಣದಿಂದಾಗಿ ಕರ್ನಾಟಕ ಕಳೆದ ಐದು ವರ್ಷಗಳಲ್ಲಿ 68,775 ಕೋಟಿ ರೂಪಾಯಿಯನ್ನು ಕಳೆದುಕೊಂಡಿದೆ. 15ನೇ ಹಣಕಾಸು ಆಯೋಗದ ಅವಧಿ ಮುಂದಿನ ವರ್ಷ ಪೂರ್ಣಗೊಳ್ಳಲಿದ್ದರೂ ಇಲ್ಲಿಯವರೆಗೆ ಆಯೋಗವೇ ಶಿಫಾರಸು ಮಾಡಿರುವ ವಿಶೇಷ ಅನುದಾನ 5495 ಕೋಟಿ ರೂ. ಮತ್ತು ರಾಜ್ಯ ಕೇಂದ್ರಿತ 6000 ರೂ. ಕೋಟಿ ಮೊತ್ತದ ವಿಶೇಷ ಅನುದಾನವನ್ನು ಬಿಡುಗಡೆ ಮಾಡಿಲ್ಲ ಎಂದರು.
Advertisement
ಕೇಂದ್ರ ಹಣಕಾಸು ಆಯೋಗ ತಾನು ಶಿಫಾರಸು ಮಾಡಿದ್ದಕ್ಕಿಂತ ಕಡಿಮೆ ಮೊತ್ತದ ಹಣವನ್ನು ರಾಜ್ಯ ಸರ್ಕಾರಕ್ಕೆ ನೀಡುತ್ತಾ ಬಂದಿದೆ. 2021-22, 2022-23 ಮತ್ತು 2023-24ರ ಹಣಕಾಸು ವರ್ಷದಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ 1,311 ಕೋಟಿ ರೂ. ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ 775 ಕೋಟಿ ರೂ. ಕಡಿಮೆ ಅನುದಾನ ನೀಡಲಾಗಿದೆ. 2022-23 ಮತ್ತು 2023-24ರ ಹಣಕಾಸು ವರ್ಷದಲ್ಲಿ, ಆರೋಗ್ಯ ಅನುದಾನದಲ್ಲಿ 826 ಕೋಟಿ ರೂ., ಎಸ್‌ಡಿಆರ್‌ಎಫ್ ಅಡಿಯಲ್ಲಿ 340 ಕೋಟಿ ರೂ. ಹಣವನ್ನು ಕಡಿತ ಮಾಡಲಾಗಿದೆ. ಈ ಒಟ್ಟು ಬಾಕಿ 3,300 ಕೋಟಿ ರೂ. ಮತ್ತು 2024-25 ಮತ್ತು 2025-26ರ ಅವಧಿಯಲ್ಲಿ ಆಯೋಗ ಶಿಫಾರಸು ಮಾಡಿರುವ ವಿಶೇಷ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.ಇದನ್ನೂ ಓದಿ: ಮುಂದುವರಿದ ರಾಜ್ಯಪಾಲರು Vs ರಾಜ್ಯ ಸರ್ಕಾರದ ಜಟಾಪಟಿ – ಎರಡು ವಿಧೇಯಕ ವಾಪಸ್