ಹುಬ್ಬಳ್ಳಿ: ಸಾರ್ವಜನಿಕ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ತಂದಿರುವ Public Examinations (Prevention of Unfair Means) Amendment Bill-2026 ಅನ್ನು ಲೋಕಸಭೆ ಅಂಗೀಕರಿಸಿದ್ದು, ಇದು ಪ್ರಶ್ನೆಪತ್ರಿಕೆ ಸೋರಿಕೆ ಜಾಲವನ್ನು ಸಂಪೂರ್ಣ ನಿರ್ಮೂಲನೆ ಮಾಡುವ ನಿಟ್ಟಿನ ಮಹತ್ವದ ಹೆಜ್ಜೆಯಾಗಿದೆ ಎಂದು ಕೇಂದ್ರ ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ ಈ ತಿದ್ದುಪಡಿ ಮಸೂದೆ ಪರೀಕ್ಷಾ ಅಕ್ರಮಗಳನ್ನು ತಡೆಯಲು ಕಠಿಣ ಕಾನೂನು ಚೌಕಟ್ಟನ್ನು ಒದಗಿಸಲಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಶಿಕ್ಷೆಯ ನಿಯಮಗಳನ್ನು ಒಳಗೊಂಡಿದೆ ಎಂದು ಅವರು ಹೇಳಿದ್ದಾರೆ.ಇದನ್ನೂ ಓದಿ: ಕೇಸರಿ ಬಣ್ಣದಲ್ಲಿ ಹಾಕಿ ತಂಡ| ಇದು ದೇಶದ ಇತಿಹಾಸ ಬದಲಿಸುವ ಯತ್ನ: ಪ್ರಿಯಾಂಕಾ ಆಕ್ರೋಶ
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ತ್ವರಿತ ನ್ಯಾಯಾಲಯಗಳ (Fast-Track Courts) ಸ್ಥಾಪನೆಯೂ ಮಹತ್ವದ ಹೆಜ್ಜೆಯಾಗಿದ್ದು, ಪರೀಕ್ಷಾ ಅಕ್ರಮ ಪ್ರಕರಣಗಳ ತ್ವರಿತ ವಿಚಾರಣೆಗೆ ಇದು ನೆರವಾಗಲಿದೆ ಎಂದು ತಿಳಿಸಿದ್ದಾರೆ.
ಈ ಮಸೂದೆಯಿಂದ ದೇಶದಾದ್ಯಂತ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ, ನ್ಯಾಯಸಮ್ಮತತೆ ಮತ್ತು ವಿಶ್ವಾಸಾರ್ಹತೆ ಮತ್ತಷ್ಟು ಬಲಗೊಳ್ಳಲಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಜಾಲದ ವಿರುದ್ಧ ಪರಿಣಾಮಕಾರಿ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಕಟಿಬದ್ಧವಾಗಿದೆ ಎಂದು ಹೇಳಿದ್ದಾರೆ.ಇದನ್ನೂ ಓದಿ: ರಾಜ್ಯದಲ್ಲಿ ಹಲವು ಬಾರಿ ಪ್ರಶ್ನೆಪತ್ರಿಕೆ ಸೋರಿಕೆ ಆಗಿದೆ, ರಾಹುಲ್ ಗಾಂಧಿ ಮಾತನಾಡಿದ್ರಾ? – ಗೋವಿಂದ ಕಾರಜೋಳ
