– ರಾತ್ರೋರಾತ್ರಿ ಶಾಲಾ ಕೊಠಡಿ ಧ್ವಂಸ ಮಾಡಿದ ದುಷ್ಕರ್ಮಿಗಳು
ಹುಬ್ಬಳ್ಳಿ: 100 ವರ್ಷ ಪೂರೈಸಿದ ಶಾಲೆಯೊಂದನ್ನು ಕಿಡಿಗೇಡಿಗಳು ಧ್ವಂಸ ಮಾಡಿರುವ ಘಟನೆಯೊಂದು ಜಿಲ್ಲೆಯ ಗಿರಣಿಚಾಳ ಪ್ರದೇಶದಲ್ಲಿ ನಡೆದಿದೆ.
Advertisement
ಜಿಲ್ಲೆಯ ಗಿರಣಿಚಾಳದ ಮೈದಾನದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯೊಂದನ್ನು (Government School) ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ. 4 ರಿಂದ 5ನೇ ತರಗತಿಯ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದ ಕೊಠಡಿಯನ್ನು ರಾತ್ರೋರಾತ್ರಿ ದುಷ್ಕರ್ಮಿಗಳು ಧ್ವಂಸ ಮಾಡಿದ್ದಾರೆ.ಇದನ್ನೂ ಓದಿ: ವೈದ್ಯಕೀಯ ವೃತ್ತಿಪರರ ರಕ್ಷಣೆಗೆ ಟಾಸ್ಕ್ ಫೋರ್ಸ್ ರಚಿಸಿದ ಸುಪ್ರೀಂ ಕೋರ್ಟ್
Advertisement
Advertisement
ಶತಮಾನಗಳಿಂದ ನಡೆಸಿಕೊಂಡು ಬರುತ್ತಿದ್ದ ಈ ಶಾಲೆಯನ್ನು ಧ್ವಂಸ ಮಾಡಿದ್ದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ತಾವು ಕಲಿತು ಹೋದಂತಹ ಶಾಲೆ ಧ್ವಂಸವಾಗಿರುವುದನ್ನು ಕಂಡು ಹಳೆಯ ವಿದ್ಯಾರ್ಥಿಗಳು ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತಂತೆ ಸ್ಥಳೀಯರು ತನಿಖೆಗೆ ಆಗ್ರಹಿಸಿದ್ದಾರೆ.
Advertisement
ಇದಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ (Mahesh Tenginakai) ಭೇಟಿ ನೀಡಿ ಪರಿಶೀಲಿಸಿದ್ದಾರೆ. ಜೊತೆಗೆ ಶಿಕ್ಷಣ ಇಲಾಖೆಯ (Education Department) ಅಧಿಕಾರಿಗಳು ಭೇಟಿ ನೀಡಿದ್ದು, ಈ ಕುರಿತಂತೆ ಪರಿಶೀಲನೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ಸರ್ಕಾರಿ ಶಾಲೆಯಿಂದ ಹಾಲಿನ ಪುಡಿ ಮನೆಗೆ – ಮೈಸೂರಿನಲ್ಲಿ ಸಿಕ್ಕಿಬಿದ್ದ ಮುಖ್ಯ ಶಿಕ್ಷಕ