ಬೆಂಗಳೂರು: ಇಂದಿನಿಂದ ರಾಜ್ಯ ಸಿಇಟಿ ಪರೀಕ್ಷೆಗಳು ಪ್ರಾರಂಭವಾಗಲಿದೆ. ದೇಶಾದ್ಯಂತ ನೀಟ್ ಪರೀಕ್ಷೆ ಕಡ್ಡಾಯವಾದ ಬಳಿಕ ನಡೆಯುತ್ತಿರುವ ಪರೀಕ್ಷೆ ಇದಾಗಿದೆ. ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ದತೆಗಳನ್ನ ಮಾಡಿಕೊಂಡಿದೆ.
ಮೊದಲ ದಿನವಾದ ಇಂದು ಜೀವಶಾಸ್ತ್ರ ಹಾಗೂ ಗಣಿತ ವಿಷಯಗಳ ಪರೀಕ್ಷೆ ನಡೆಯಲಿದೆ. ಇದೇ ಮೊದಲ ಬಾರಿಗೆ ಪರೀಕ್ಷಾ ಪ್ರಾಧಿಕಾರ ಗ್ರಾಮೀಣ ಮಕ್ಕಳಿಗೆ ಅನುಕೂಲವಾಗಲು ಪ್ರಶ್ನೆ ಪತ್ರಿಕೆಯನ್ನ ಇಂಗ್ಲೀಷ್ ಜೊತೆಗೆ ಕನ್ನಡದಲ್ಲೂ ಮುದ್ರಣ ಮಾಡುತ್ತಿದೆ. ಬೆಳಗ್ಗೆ 10.30 ರಿಂದ ಪರೀಕ್ಷೆಗಳು ಪ್ರಾರಂಭವಾಗಲಿದ್ದು ಎರಡು ಅವಧಿಯಲ್ಲಿ ಪರೀಕ್ಷೆಗಳು ನಡೆಯಲಿವೆ.
Advertisement
ಈ ಬಾರಿ ಒಟ್ಟು 1 ಲಕ್ಷದ 85 ಸಾವಿರದ 411 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ರಾಜ್ಯಾದ್ಯಂತ 404 ಪರೀಕ್ಷಾ ಕೇಂದ್ರಗಳು ಇದ್ದು, ಬೆಂಗಳೂರಿನಲ್ಲಿ 82 ಪರೀಕ್ಷಾ ಕೇಂದ್ರಗಳಿವೆ. ಪರೀಕ್ಷೆ ಪ್ರಾರಂಭಕ್ಕೂ 15 ನಿಮಿಷ ಮುನ್ನ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ತಡವಾಗಿ ಬಂದ ಅಭ್ಯರ್ಥಿಗಳನ್ನ ಪರೀಕ್ಷೆಗೆ ಕೂರಿಸೋದಿಲ್ಲ. ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ಫೋನ್, ವಾಚ್, ಕ್ಯಾಲ್ಯುಕಲೇಟರ್ ಸೇರಿದಂತೆ ಇನ್ನಿತರ ಎಲೆಕ್ಟ್ರಾನಿಕ್ ವಸ್ತುಗಳನ್ನ ನಿಷೇಧ ಮಾಡಲಾಗಿದೆ. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಪಬ್ಲಿಕ್ ಟಿವಿ ಕಡೆಯಿಂದ ಆಲ್ ದಿ ಬೆಸ್ಟ್.
Advertisement
ಪರೀಕ್ಷಾ ಸಮಯ:
ಬೆಳಗ್ಗೆ- 10.30-11.50
ಮಧ್ಯಾಹ್ನ – 2.30-3.50.
ನಿಷೇಧ- ಮೊಬೈಲ್, ವಾಚ್, ಕ್ಯಾಲ್ಯುಕೇಟರ್ ಸೇರಿದಂತೆ ಎಲೆಕ್ಟ್ರಾನಿಕ್ ವಸ್ತುಗಳು.
Advertisement