ಬೆಂಗಳೂರು : ಯುಜಿಸಿಇಟಿ- ನೀಟ್ (UGCET-NEET) ಕೋರ್ಸ್ ಗಳಲ್ಲಿ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿದೆ. ಸುಮಾರು 15 ಸಾವಿರ ಅಭ್ಯರ್ಥಿಗಳು ಯಾವ ಚಾಯ್ಸ್ ಗಳನ್ನು ದಾಖಲು ಮಾಡಲಿಲ್ಲ. ಈ ಕಾರಣ ಅವರಿಗೆ ಅನುಕೂಲ ಆಗಲಿಯೆಂದು ಚಾಯ್ಸ್ ದಾಖಲು ದಿನಾಂಕವನ್ನು ಸೆ.4ರ ಮಧ್ಯಾಹ್ನ 12ಗಂಟೆವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
ಚಾಯ್ಸ್ ದಾಖಲಿಗೆ ಸೆ.3ರ ರಾತ್ರಿ 12ಗಂಟೆವರೆಗೂ ಅವಕಾಶ ಇತ್ತು. ಅದನ್ನು ವಿಸ್ತರಿಸಲಾಗಿದೆ. ಹಾಗೆಯೇ ಶುಲ್ಕ ಪಾವತಿಗೆ ನಾಳೆ ಸಂಜೆ 4 ಗಂಟೆವರೆಗೆ ಅವಕಾಶ ಇರಲಿದೆ. ನಿಗದಿತ ಅವಧಿಯೊಳಗೆ ಚಾಯ್ಸ್ ದಾಖಲು ಮಾಡಿಕೊಳ್ಳದಿದ್ದರೆ ಅಂತಹ ಅಭ್ಯರ್ಥಿಗಳ ಸೀಟು ರದ್ದಾಗಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚೆನ್ನೈ ಕಾರ್ಪೊರೇಷನ್ ಸಭೆಯಲ್ಲಿ ಡಿಕೆ ಶಿವಕುಮಾರ್ ಭಾಗಿ
ಅಭ್ಯರ್ಥಿಗಳು ಕೊನೆ ದಿನಾಂಕದವರೆಗೂ ಕಾಯದೇ ಚಾಯ್ಸ್ ದಾಖಲು ಮಾಡಿ, ನಂತರದ ಪ್ರವೇಶ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದು ಸಲಹೆ ನೀಡಿದ್ದಾರೆ. ಶುಲ್ಕ ಪಾವತಿ ನಂತರ ಆದೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: ಮಾಜಿ ಆಯುಕ್ತ ಅಮಾನತಿನಿಂದ ಮುಡಾ ನಿರ್ಣಯ ತಪ್ಪೆಂದು ಸಾಬೀತು; ಈಗಲಾದ್ರೂ ಸಿಎಂ ರಾಜೀನಾಮೆ ಕೊಡಲಿ: ಎನ್.ರವಿಕುಮಾರ್
ಇವತ್ತಿನವರೆಗೂ 92 ಸಾವಿರ ಮಂದಿ ತಮ್ಮ ಚಾಯ್ಸ್ ದಾಖಲು ಮಾಡಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಗ್ರೀನ್ ಸಿಗ್ನಲ್ – ಷರತ್ತುಗಳು ಅನ್ವಯ