ಬೆಂಗಳೂರು: ಮೈಸೂರು ರಸ್ತೆನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಬಿಎಂಟಿಸಿ ಹಾಗೂ ಟೆಂಪೋ ನಡುವೆ ಆಟೋ ಸಿಲುಕಿಕೊಂಡಿದೆ.
ಇಂದು ಮುಂಜಾನೆ ಮೈಸೂರು ರಸ್ತೆಯ ಸ್ಯಾಟ್ಲೈಟ್ ನಿಲ್ದಾಣದ ಬಳಿ ಕ್ಯಾಂಟರ್, ಟೆಂಪೋ, ಬಿಎಂಟಿಸಿ ಬಸ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಬಿಎಂಟಿಸಿ ಹಾಗೂ ಟೆಂಪೋ ನಡುವೆ ಆಟೋ ಸಿಲುಕಿದೆ.
ಸರಣಿ ಅಪಘಾತದಲ್ಲಿ ಸಿಲುಕಿದ ಆಟೋ ಸಂಪೂರ್ಣ ಜಖಂ ಆಗಿದ್ದು, ಸ್ಥಳೀಯರು ಆಟೋ ಚಾಲಕನ ರಕ್ಷಣೆಗೆ ಹರಸಾಹಸ ಪಟ್ಟಿದ್ದಾರೆ. ಅರ್ಧಗಂಟೆಗಳ ಕಾಲ ಹರಸಾಹಸದ ಬಳಿಕ ಆಟೋ ಚಾಲಕನನ್ನು ಹೊರತೆಗೆಯಲಾಗಿದೆ. ಇದನ್ನೂ ಓದಿ: ಇಂದು ಶಿಕ್ಷಕ, ಪದವೀಧರ ಕ್ಷೇತ್ರಕ್ಕೆ ಮತದಾನ: 1 ಮತಕ್ಕೆ 10 ಸಾವಿರ ರೂ.?
ಗಂಭೀರಗಾಯಗೊಂಡ ಆಟೋ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಪೊಲೀಸರು ಅಪಘಾತವಾದ ನಾಲ್ಕು ವಾಹನಗಳನ್ನು ತೆರವು ಮಾಡುತ್ತಿದ್ದಾರೆ. ನಡುರಸ್ತೆಯಲ್ಲಿ ಅಪಘಾತ ಆಗಿದ್ದು, ಮೈಸೂರು ರೋಡ್ ಫುಲ್ ಟ್ರಾಫಿಕ್ ಜಾಮ್ ಆಗಿದೆ.
ಬ್ಯಾಟರಾಯನಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.