Davanagere
ಮಹಿಳೆಯ ಚೈನ್ ಕಸಿದು ಓಡುವಾಗ ಕೆಸರಲ್ಲಿ ಜಾರಿಬಿದ್ದ- ಕಳ್ಳನಿಗೆ ಸಾರ್ವಜನಿಕರಿಂದ ಸಖತ್ ಗೂಸಾ

ದಾವಣೆಗೆರೆ: ವಾಕಿಂಗ್ ಮಾಡುತ್ತಿದ್ದ ಮಹಿಳೆಯ ಸರ ಕಿತ್ತು ಪರಾರಿಯಾಗುತ್ತಿದ್ದ ಕಳ್ಳನಿಗೆ ಸಾರ್ವಜನಿಕರು ಬೆಳ್ಳಂಬೆಳಗ್ಗೆ ಬಿಸಿಬಿಸಿ ಕಜ್ಜಾಯ ಕೊಟ್ಟಿದ್ದಾರೆ.
ದಾವಣಗೆರೆಯ ವಿದ್ಯಾನಗರ ಬಡಾವಣೆಯ ಪಾರ್ಕ್‍ವೊಂದರ ಬಳಿ ಇಂದು ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದ ಮಹಿಳೆಯ ಸರ ಕಿತ್ತು ಪರಾರಿ ಆಗುತ್ತಿದ್ದ ಧಾರವಾಡ ಮೂಲದ ಹೈದರ್ ಕೆಸರಿನಲ್ಲಿ ಜಾರಿಬಿದ್ದು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ನಂತರ ಸ್ಥಳದಲ್ಲಿದ್ದ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಇತ್ತೀಚೆಗೆ ವಿದ್ಯಾನಗರ ವ್ಯಾಪ್ತಿಯಲ್ಲಿ ಸರಗಳ್ಳತನ ಪ್ರಕರಣ ಹೆಚ್ಚಾಗಿದ್ದು, ಆಕ್ರೋಶಗೊಂಡಿದ್ದ ಸಾರ್ವಜನಿಕರು ಕಳ್ಳ ಕೈಗೆ ಸಿಕ್ಕ ಅಂತ ತಲೆಗೊಂದು ಏಟು ಹಾಕಿದ್ದಾರೆ.
ಗೂಸ ತಿಂದ ಹೈದರ್ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಪಲೀಸರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
