ಬೆಂಗಳೂರು: ಕೊರೊನಾ ವೈರಸ್ ಆರಂಭವಾದಗಲಿಂದಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸರಗಳ್ಳತನಕ್ಕೆ ಬ್ರೇಕ್ ಬಿದ್ದಿತ್ತು. ಆದರೆ ಇತ್ತೀಚಿಗೆ ಮತ್ತೆ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದರಲ್ಲೂ ಸರಗಳ್ಳರ ಹಾವಳಿ ಮತ್ತೆ ಶುರುವಾಗಿದೆ.
Advertisement
ನಗರದ ಗೋವಿಂದರಾಜನಗರದ ಪಿಎಫ್ ಲೇಔಟ್‍ನಲ್ಲಿ ಮನೆಯ ಮುಂದೆ ರಂಗೋಲಿ ಹಾಕುತ್ತಿದ್ದ ಸೌಜನ್ಯ ಎಂಬವರ ಸುಮಾರು 45 ಗ್ರಾಂ ತೂಕದ ಚಿನ್ನದ ಸರವನ್ನು ಕಸಿದು ಖದೀಮರು ಎಸ್ಕೇಪ್ ಆಗಿದ್ದಾರೆ. ಇದನ್ನೂ ಓದಿ: ಜಿಮ್‍ನಲ್ಲಿ ಕ್ರಂಚಸ್, ಸಿಟ್ ಅಪ್ – ಬೆಕ್ಕಿನ ವರ್ಕೌಟ್ ವಿಡಿಯೋ ವೈರಲ್
Advertisement
Advertisement
ಸರ ಕಳೆದುಕೊಂಡ ಮಹಿಳೆ ಸೌಜನ್ಯ ಮನೆ ಮುಂದೆ ರಂಗೋಲಿ ಹಾಕುತ್ತಿದ್ದರು. ಈ ವೇಳೆ ವಿಳಾಸ ಕೇಳುವ ನೆಪದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಸರ ಕಸಿದು ಪರಾರಿಯಾಗಿದ್ದಾರೆ. ಈ ಸಂಬಂಧ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ವೆಡ್ಡಿಂಗ್ ಕೇಕ್ ಬೀಳಿಸಿ ದಂಪತಿಗೆ ಶಾಕ್ ಕೊಟ್ಟ ಸಪ್ಲೈಯರ್
Advertisement
ಗೋವಿಂದರಾಜನಗರ ಪೊಲೀಸ್ ಠಾಣೆ ಕೇವಲ ಐದು ದಿನಗಳ ಹಿಂದೆಯಷ್ಟೇ ಉದ್ಘಾಟನೆ ಆಗಿದ್ದು, ಇಲ್ಲಿವರೆಗೂ ಯಾವುದೇ ದೂರು ದಾಖಲಾಗಿರಲಿಲ್ಲ. ಆದರೀಗ ಹೊಸ ಪೊಲೀಸ್ ಠಾಣೆಗೆ ಸರಗಳ್ಳತನವೇ ಮೊದಲ ಕೇಸ್ ಆಗಿದೆ. ಸರಗಳ್ಳತನ ಪ್ರಕರಣಗಳು ದಿನೇ ದಿನೇ ಜಾಸ್ತಿ ಆಗುತ್ತಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಬೇಕೆಂದು ಹಿರಿಯ ಪೊಲೀಸ್ ಅಧಿಕಾರಿಗಳು ಸೂಚನೆ ನೀಡಿದ್ದಾರೆ.