– 7 ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಗ್ಯಾಂಗ್
ರಾಮನಗರ: ಅಡ್ರೆಸ್ ಕೇಳುವ ನೆಪದಲ್ಲಿ ಒಂದೇ ದಿನ ಮೂರು ಕಡೆ ಸರಗಳ್ಳತನ (Chain Snatching) ಮಾಡಿದ ಮೂವರು ಆರೋಪಿಗಳನ್ನು ಮಾಗಡಿ ತಾಲೂಕಿನ ಕುದೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಪ್ರಭು (39), ವಸಂತಿ (37) ಮತ್ತು ಜ್ಯೋತಿ (32) ಎಂದು ಗುರುತಿಸಲಾಗಿದೆ. ಮಾ.3ರಂದು ಕುದೂರು ಸಮೀಪದ ಕಳ್ಳಿಪಾಳ್ಯದಲ್ಲಿ ಮೂವರು ಕಾರಿನಲ್ಲಿ ಬಂದು ವಿಳಾಸ ಕೇಳುತ್ತಾ ಚೈನ್ ಕದ್ದು ಎಸ್ಕೇಪ್ ಆಗಿದ್ದರು. ಮುನೇಶ್ವರ ಸ್ವಾಮಿ ರಥೋತ್ಸವಕ್ಕೆ ಹೋಗ್ತಿದ್ದ ಭಕ್ತರ ಬಳಿ, ದೇವಾಸ್ಥಾನಕ್ಕೆ ಹೋಗುವ ದಾರಿ ಕೇಳಿ ಅವರ ಸರಗಳನ್ನೇ ಕದ್ದು ಪರಾರಿಯಾಗಿದ್ದರು. ಇದನ್ನೂ ಓದಿ: ಜಗಳೂರು | ತೋಟಕ್ಕೆ ಬೆಂಕಿ ಇಟ್ಟ ಕಿಡಿಗೇಡಿಗಳು – 1500ಕ್ಕೂ ಹೆಚ್ಚು ಅಡಿಕೆ ಗಿಡಗಳು ಸುಟ್ಟು ಕರಕಲು
ಬಂಧಿತರಿಂದ 112 ಗ್ರಾಂ ತೂಕದ ಮೂರು ಚಿನ್ನದ (Gold) ಸರ, ಕೃತ್ಯಕ್ಕೆ ಬಳಸಿದ್ದ ಒಂದು ವ್ಯಾಗನಾರ್ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಗ್ಯಾಂಗ್ ಒಟ್ಟು 7 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿತ್ತು ಎಂದು ತಿಳಿದು ಬಂದಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದನ್ನೂ ಓದಿ: 9ನೇ ತರಗತಿ ವಿದ್ಯಾರ್ಥಿಯಿಂದ ರಾಡ್‌ನಿಂದ ಭೀಕರ ಹಲ್ಲೆ – ಓರ್ವ ಬಾಲಕ ಸಾವು, 7 ಮಂದಿಗೆ ಗಾಯ

