– ಯುವಕರ ಕಾರ್ಯಕ್ಕೆ ಭಾರೀ ಮೆಚ್ಚುಗೆ
ಬೀಜಿಂಗ್: ಸುಮಾರು 6 ಮಂದಿ ಯುವಕರು ಮಾನವ ಸರಪಳಿ ನಿರ್ಮಿಸಿ ಬಾಲಕಿಯರಿಬ್ಬರನ್ನು ಭಾರೀ ಅವಘಡದಿಂದ ಪಾರು ಮಾಡಿದ ಘಟನೆ ಚೀನಾದಲ್ಲಿ ನಡೆದಿದೆ.
ಚೀನಾದ ಕ್ಸಿಂಟಿಯನ್ ಬಹುಮಹಡಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಇಬ್ಬರು ಪುಟ್ಟ ಬಾಲಕಿಯರು ಕಟ್ಟಡದೊಳಗೆ ಸಿಲುಕಿಕೊಂಡಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಬಾಲಕಿಯರನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ಬಾಲಕಿಯರನ್ನು ರಕ್ಷಿಸುತ್ತಿರುವ ವೀಡಿಯೋವನ್ನು ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಅಲ್ಲದೆ ಆ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಅಘ್ಘಾನ್ ಪ್ರಜೆಗಳಲ್ಲಿ ಇ-ವೀಸಾವಿದ್ದರೆ ಮಾತ್ರ ಭಾರತ ಪ್ರವೇಶ
Advertisement
Advertisement
25 ಸೆಕೆಂಡ್ ವೀಡಿಯೋದಲ್ಲಿ ಆರು ಮಂದಿ ಯುವಕರು ಒಬ್ಬರ ಮೇಲೆ ಒಬ್ಬರಂತೆ ಚೈನ್ ತರ ನಿಂತು ಬೆಂಕಿ ಕಾಣಿಸಿಕೊಂಡ ಕಟ್ಟಡದಿಂದ ಬಾಲಕಿಯನ್ನು ಹೊರಗೆ ಎಳೆದು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಯುವಕರ ಸಾಹಸ ಕಾರ್ಯಕ್ಕೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ. ಕೆಲವರು ಕಿಟಕಿಗಳ ಮೇಲೆ ಯಾಕೆ ಗ್ರಿಲ್ ಗನ್ನು ಅಳವಡಿಸಲಾಗಿದೆ ಎಂದು ಪ್ರಶ್ನಿಸಿದ್ದಾರೆ. ಇನ್ನೂ ಕೆಲವರು ಬಾಲಕಿಯರನ್ನು ರಕ್ಷಿಸಿದ ಯುವಕರನ್ನು ದೇವರು ಚೆನ್ನಾಗಿಟ್ಟಿರಲಿ ಎಂದು ಆಶೀರ್ವದಿಸಿದ್ದಾರೆ. ಇದನ್ನೂ ಓದಿ: ದೇಶ ಬಿಟ್ಟು ತೆರಳಬೇಡಿ- ತಾಲಿಬಾನ್ ಬೆದರಿಕೆ