ನವದೆಹಲಿ: ದೆಹಲಿಯ ಸ್ವಾಮಿ ಚೈತನ್ಯಾನಂದ ಸರಸ್ವತಿಯ ಒಂದೊಂದೆ ಕರ್ಮಕಾಂಡ ಬಯಲಾಗಿದೆ. ‘ನೀನು ಸುಂದರವಾಗಿ ಕಾಣ್ತೀಯಾ.. ಬೇಬಿ ಐ ಲವ್ಯೂ’ ಅಂತ ಕಾಲೇಜು ವಿದ್ಯಾರ್ಥಿನಿಯರ ಬೆನ್ನುಬಿದ್ದಿದ್ದರು ಸ್ವಾಮೀಜಿ ಎಂಬ ಆರೋಪ ಕೇಳಿಬಂದಿದೆ.
62 ವರ್ಷದ ಸ್ವಾಮೀಜಿಯು ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಲೈಂಗಿಕ ಕಿರುಕುಳ ಆರೋಪದ ಮೇಲೆ ದೆಹಲಿಯ ವಸಂತ್ ಕುಂಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಸ್ವಾಮೀಜಿ ಬಯಕೆ ಈಡೇರಿಸುವಂತೆ ಮಹಿಳಾ ಅಧ್ಯಾಪಕರಿಂದ್ಲೇ ವಿದ್ಯಾರ್ಥಿನಿಯರ ಮೇಲೆ ಒತ್ತಡ – ತನಿಖೆ ತೀವ್ರ
ಎಫ್‌ಐಆರ್‌ನಲ್ಲಿ ಕಿರುಕುಳ ನೀಡಿರುವ ಬಗ್ಗೆ ಯುವತಿಯರ ಹೇಳಿಕೆ ಉಲ್ಲೇಖವಾಗಿದೆ. EWS ಕೋಟಾದಡಿ ಬಂದ ವಿದ್ಯಾರ್ಥಿನಿಯರನ್ನು ಸ್ವಾಮೀಜಿ ಟಾರ್ಗೆಟ್ ಮಾಡುತ್ತಿದ್ದರು. ಸ್ಕಾಲರ್‌ಶಿಪ್ ಕೊಡಿಸುವ, ಅಂಕಗಳನ್ನು ಕಟ್ ಮಾಡುವ, ಮಾರ್ಕ್ಸ್ ಕಾರ್ಡ್ ಕೊಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದರು ಎನ್ನಲಾಗಿದೆ.
ವಿದೇಶ ಪ್ರವಾಸದ ಆಫರ್ ನೀಡಿ ಲೈಂಗಿಕ ಕಿರುಕುಳ ನೀಡುತ್ತಿದ್ದರು. ತಡರಾತ್ರಿ ಮೆಸೇಜ್ ಮಾಡಿ ಪ್ರತಿಕ್ರಿಯೆ ನೀಡುವಂತೆ ಒತ್ತಾಯಿಸುತ್ತಿದ್ದರು. ಕಾಲೇಜಿನ ಡೀನ್ ಕೂಡ ಸ್ವಾಮೀಜಿಗೆ ಸಾಥ್ ನೀಡುತ್ತಿದ್ದರು. ಡೀನ್‌ಗೆ ದೂರು ನೀಡಲು ಬಂದರೆ, ಮೆಸೇಜ್‌ಗೆ ಪ್ರತಿಕ್ರಿಯೆ ನೀಡುವಂತೆ ಸಲಹೆ ನೀಡುತ್ತಿದ್ದರೆಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.