ಮಂಗಳೂರು: ವಿಧಾನಸಭಾ ಚುನಾವಣೆಯಲ್ಲಿ (Assembly Election) ಬಿಜೆಪಿ (BJP) ಟಿಕೆಟ್ ಕೊಡಿಸುವುದಾಗಿ ನಂಬಿಸಿ ಚೈತ್ರಾ (Chaithra) ಮತ್ತು ಗ್ಯಾಂಗ್ ಬಹುಕೋಟಿ ವಂಚನೆ ಪ್ರಕರಣಕ್ಕೆ (Fraud Case) ಸಂಬಂಧಿಸಿದಂತೆ ವಜ್ರದೇಹಿ ಮಠದ (Vajradehi Math) ರಾಜಶೇಖರಾನಂದ ಸ್ವಾಮೀಜಿಗೆ (Rajashekharananda swamiji) ಸಿಸಿಬಿ ನೋಟಿಸ್ ಕಳುಹಿಸಿದೆ.
ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಚೈತ್ರಾ ಮತ್ತು ಆಕೆಯ ತಂಡ ಗೋವಿಂದ ಬಾಬು ಪೂಜಾರಿ ಎಂಬ ಉದ್ಯಮಿಯಿಂದ ಹಣ ಪಡೆದು ವಂಚಿಸಿ ಪೊಲೀಸರ ಅತಿಥಿಯಾಗಿದ್ದಾರೆ . ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸಿಸಿಬಿ (CCB) ತನಿಖೆ ನಡೆಸುತ್ತಿದ್ದು, ವಿಚಾರಣೆಗೆ ಹಾಜರಾಗುವಂತೆ ವಜ್ರದೇಹಿ ಸ್ವಾಮೀಜಿಗೆ ಬೆಂಗಳೂರು (Bengaluru) ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ದುರಂತ, ಮೂವರು ಅಧಿಕಾರಿಗಳು ಸಸ್ಪೆಂಡ್: ಡಿಸಿ, ಎಸ್‌ಪಿಗೆ ನೋಟಿಸ್
ವಜ್ರದೇಹಿ ಮಠ ಮಂಗಳೂರಿನ ಗುರುಪುರದಲ್ಲಿದೆ. ಸಿಸಿಬಿ ಎಸಿಪಿ ರೀನಾ ಸುವರ್ಣ ನೋಟಿಸ್ ಜಾರಿ ಮಾಡಿದ್ದು, ಇನ್ನೆರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ಸ್ವಾಮೀಜಿಗೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಮಹಿಷ ದಸರಾ, ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮಗಳಿಗೆ ಬ್ರೇಕ್
Web Stories