ಬೆಂಗಳೂರು: ವಂಚನೆ (Fraud) ಆರೋಪದಡಿ ಚೈತ್ರಾ ಕುಂದಾಪುರ (Chaithra Kundapura) ಮತ್ತು ತಂಡವನ್ನು ಬಂಧಿಸಿ ಸಿಸಿಬಿ (CCB) ಕಚೇರಿಗೆ ಹಾಜರುಪಡಿಸಿದ್ದು, 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ (Police Custody) ತೆಗೆದುಕೊಳ್ಳುವಂತೆ 1ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.
ಇವರೊಂದಿಗೆ 6 ಜನ ಆರೋಪಿಗಳನ್ನೂ ಸಹ ಸೆಪ್ಟೆಂಬರ್ 23 ರವರೆಗೆ ಸಿಸಿಬಿ ಪೊಲೀಸ್ ಕಸ್ಟಡಿಯಲ್ಲಿರಿಸಿ ವಿಚಾರಣೆ ನಡೆಸುವಂತೆ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಈ ವೇಳೆ ಪೊಲೀಸರು ನನಗೆ ತುಂಬಾ ಹೊಡೆದಿದ್ದಾರೆ ಎಂದು ಚೈತ್ರಾ ಕುಂದಾಪುರ ನ್ಯಾಯಾಧೀಶರ ಬಳಿ ಕಣ್ಣೀರಿಟ್ಟಿದ್ದು, ನಾನು ಇವರ ವಿರುದ್ಧ ದೂರು ಕೊಡಬೇಕು. ಯಾರಿಗೆ ಕೊಡಲಿ ಎಂದು ನ್ಯಾಯಾಧೀಶರಿಗೆ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಸರ್ಕಾರ ಅವಕಾಶ ಕೊಡ್ತಿಲ್ಲ: ಅರವಿಂದ ಬೆಲ್ಲದ್
ನನಗೆ ಉಡುಪಿ ಪೊಲೀಸರು ತೊಂದರೆ ಕೊಟ್ಟಿದ್ದಾರೆ. ಬೆಂಗಳೂರು ಪೊಲೀಸರು ಯಾವುದೇ ತೊಂದರೆ ಕೊಟ್ಟಿಲ್ಲ. ಬಂಧನದ ಕುರಿತು ನಮ್ಮ ಕುಟುಂಬಸ್ಥರಿಗೆ ಮಾಹಿತಿ ನೀಡಿಲ್ಲ. ಫೋನ್ ನಂಬರ್ ಕೊಟ್ಟರೂ ಕಾಲ್ ಮಾಡಿಲ್ಲ. ದೂರು ಯಾರು ಕೊಟ್ಟಿದ್ದಾರೆ? ಏನು ದೂರು ಎಂಬ ಬಗ್ಗೆ ಮಾಹಿತಿ ನೀಡಿಲ್ಲ ಎಂದು ಚೈತ್ರಾ ಕುಂದಾಪುರ ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ನಿಫಾ ವೈರಸ್ – ಎಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಅಧಿಕಾರಿಗಳಿಗೆ ಗುಂಡೂರಾವ್ ಸೂಚನೆ
ಎಲ್ಲಾ ಆರೋಪಿಗಳನ್ನು ಯಾವಾಗ ಅರೆಸ್ಟ್ ಮಾಡಿದ್ದಾರೆ ಎಂದು ನ್ಯಾಯಾಧೀಶರು ಚೈತ್ರಾ ಅವರನ್ನು ಪ್ರಶ್ನೆ ಮಾಡಿದ್ದು, ಮಂಗಳವಾರ ಸಂಜೆ 6 ಗಂಟೆಗೆ ನನ್ನನ್ನು ಅರೆಸ್ಟ್ ಮಾಡಿದ್ದಾರೆ. ಅಲ್ಲದೇ ನನ್ನ ತಾಯಿ ಜೊತೆ ಮಾತನಾಡಲು ಅವಕಾಶ ನೀಡಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ: ಸರ್ವಪಕ್ಷ ಸಭೆಯಲ್ಲಿ ಒಮ್ಮತದ ನಿರ್ಣಯ
ಉದ್ಯಮಿಗೆ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ವಂಚಿಸಿ ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಮತ್ತು ಸಹಚರರನ್ನು ಉಡುಪಿಯಲ್ಲಿ (Udupi) ಸಿಸಿಬಿ ಪೊಲೀಸರು ಬಂಧಿಸಿ ಬೆಂಗಳೂರಿನ (Bengaluru) 1ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ವಂಚನೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಚೈತ್ರಾ ಕುಂದಾಪುರ, ಶ್ರೀಕಾಂತ್, ಗಗನ್, ರಮೇಶ್, ಧನ್ ರಾಜ್, ಪ್ರಜ್ವಲ್ ಸೇರಿ ಆರು ಮಂದಿ ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಇದನ್ನೂ ಓದಿ: ಕುಡಿಯುವ ನೀರಿನ ಹೆಸರಿನಲ್ಲಿ ತಮಿಳುನಾಡು ರೈತರಿಗೆ ಅನ್ಯಾಯ: ತ.ನಾಡು ಸಚಿವ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]