– ಬಿಜೆಪಿ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಡೀಲ್
ಉಡುಪಿ: ಭಾಷಣ ಹೋರಾಟದ ಮೂಲಕ ಗುರುತಿಸಿಕೊಂಡಿದ್ದ ಚೈತ್ರಾ ಕುಂದಾಪುರ (Chaithra Kundapura) ಆ್ಯಂಡ್ ಗ್ಯಾಂಗ್ ಸಿಸಿಬಿ (CCB) ಬಲೆಗೆ ಬಿದ್ದಿದೆ. ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ನಕಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ನಾಯಕರನ್ನು ತಯಾರು ಮಾಡಿ ಬರೋಬ್ಬರಿ 5 ಕೋಟಿ ರೂ. ದೋಚಿದ್ದ ಪ್ರಕರಣದಲ್ಲಿ ಫೈರ್ ಬ್ರ್ಯಾಂಡ್ ನಾಯಕಿ ಎಂಬ ಹಣೆಪಟ್ಟಿ ಇರುವ ಚೈತ್ರಾ ಕುಂದಾಪುರ ಮತ್ತು ತಂಡವನ್ನು ಬಂಧಿಸಲಾಗಿದೆ.
Advertisement
ಪ್ರಖರ ವಾಗ್ಮಿ, ಹಾರ್ಡ್ ಕೋರ್ ಹಿಂದೂ ಕಾರ್ಯಕರ್ತೆ ಎಂಬ ಮುಖವಾಡ ಧರಿಸಿ ಭಾಷಣದ ಮೂಲಕ ಅಬ್ಬರಿಸುತ್ತಿದ್ದ ಚೈತ್ರಾ ಕುಂದಾಪುರ ಮತ್ತು ಟೀಂ ಆರ್‌ಎಸ್‌ಎಸ್ (RSS) ಮತ್ತು ಬಿಜೆಪಿಗೆ (BJP) ದೋಖಾ ಮಾಡಿದೆ. ಪೊಲೀಸರು ಕಳೆದ ರಾತ್ರಿ ನಡೆಸಿದ ಸಿನಿಮೀಯ ಶೈಲಿಯ ಮಿಂಚಿನ ಕಾರ್ಯಾಚರಣೆಯಲ್ಲಿ ಚೈತ್ರಾ ಕುಂದಾಪುರ ಅವರನ್ನು ಬಂಧಿಸಲಾಗಿದೆ. ಅಲ್ಲದೇ ಗೆಳಯ ಶ್ರೀಕಾಂತ್ ನಾಯಕ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ 2023 ವಿಧಾನಸಭಾ ಚುನಾವಣೆಯನ್ನು ಬಂಡವಾಳ ಮಾಡಿಕೊಂಡು ಈ ತಂಡ ದುಡ್ಡು ಮಾಡುವ ಯೋಜನೆಯನ್ನು ಹಾಕಿತ್ತು. ಈ ಕೃತ್ಯದಲ್ಲಿ ಒಟ್ಟು ಎಂಟು ಜನ ಆರೋಪಿಗಳು ಭಾಗಿಯಾಗಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರಲ್ಲಿ ನಮೋ Vs ಜೈ ಭೀಮ್ – ನಗರಸಭೆ ಅಧ್ಯಕ್ಷನ ವಿರುದ್ಧ ಆಕ್ರೋಶ
Advertisement
Advertisement
ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಐದು ಕೋಟಿ ರೂ. ಉಂಡೇನಾಮ ತಿಕ್ಕಲಾಗಿದೆ. ಈ ಬಗ್ಗೆ ಉದ್ಯಮಿ ಗೋವಿಂದ ಬಾಬು ಪೂಜಾರಿ, ಬೆಂಗಳೂರು ಬಂಡೇಪಾಳ್ಯ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದಾರೆ. ಚೆಫ್ ಟಾಕ್ ಸಂಸ್ಥೆ ಮುಖ್ಯಸ್ಥನಾಗಿರುವ ಗೋವಿಂದ ಬಾಬು ಪೂಜಾರಿ ಬೈಂದೂರು ವಿಧಾನಸಭೆ ಟಿಕೆಟ್ ಆಕಾಂಕ್ಷಿ ಆಗಿದ್ದರು. ಈ ಬಗ್ಗೆ ಬಹಳ ಪ್ರಯತ್ನ ಮಾಡಿದ್ದರು. ಗೋವಿಂದ ಬಾಬು ಜೊತೆಗಿದ್ದವರೇ ತಲೆ ಹೊಡೆದು ಕಾಸು ಮಾಡುವ ಪ್ಲಾನ್ ಮಾಡಿದ್ದಾರೆ. ಇದನ್ನೂ ಓದಿ: ಅರ್ಧ ಬೆಂಗಳೂರಿಗೆ ಇಂದು ನೀರಿನ ಪೂರೈಕೆಯಲ್ಲಿ ವ್ಯತ್ಯಯ
Advertisement
ಅತ್ತ ಟಿಕೆಟ್ ಸಿಗದೆ ಕಾಸು ಕಳೆದುಕೊಂಡ ಗೋವಿಂದ ಬಾಬು ಪೂಜಾರಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರು ಉಡುಪಿಯಲ್ಲಿ (Udupi) ಮಿಂಚಿನ ಕಾರ್ಯಾಚರಣೆ ಮಾಡಿದ್ದಾರೆ. ಉಡುಪಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ರಾತ್ರೋರಾತ್ರಿ ಸಿನಿಮೀಯ ಶೈಲಿಯಲ್ಲಿ ದಾಳಿ ಮಾಡಿ ಕಳೆದ ಹಲವಾರು ದಿನಗಳಿಂದ ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಮತ್ತು ಶ್ರೀಕಾಂತ್ ನಾಯಕ್‌ನನ್ನು ವಶಕ್ಕೆ ಪಡೆದಿದ್ದಾರೆ. ಇಂದು ಬಂಧನ ಪ್ರಕ್ರಿಯೆ ನಡೆಸಿ ಕೋರ್ಟಿಗೆ ಹಾಜರುಪಡಿಸಲಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಚುನಾವಣಾ ಸಿಬ್ಬಂದಿಗೆ ಬೂತಲ್ಲೇ ಅಂಚೆ ಮತದಾನ ಕಡ್ಡಾಯ
ಇತ್ತ ಟಿಕೆಟೂ ಇಲ್ಲ, ಅತ್ತ ಹಣವೂ ಇಲ್ಲವೆಂದಾಗ ಸ್ವತಃ ತಾನೇ ತನಿಖೆ ನಡೆಸಿದ್ದ ಉದ್ಯಮಿ ಗೋವಿಂದ ಬಾಬು ಪೂಜಾರಿ, ಎಲ್ಲಾ ವಿಚಾರಿಸಿದಾಗ ವ್ಯವಸ್ಥಿತವಾಗಿ ಮೋಸ ಮಾಡಿರುವುದು ಪತ್ತೆಯಾಗಿದೆ. ಸದ್ಯ ಕೇಸ್ ಬಂಡೆಪಾಳ್ಯದಿಂದ ಸಿಸಿಬಿಗೆ ವರ್ಗಾವಣೆಯಾಗಿದೆ. ಸಿಸಿಬಿ ತನಿಖೆ ನಡೆಸಿ ನಾಲ್ವರು ಆರೋಪಿಗಳಾದ ಪ್ರಸಾದ್, ಗಗನ್ ಮತ್ತು ಪ್ರಜ್ವಲ್ ಶೆಟ್ಟಿಯನ್ನು ಅರೆಸ್ಟ್ ಮಾಡಲಾಗಿದ್ದು, ಇದೀಗ ತಲೆ ಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಅವರನ್ನೂ ಉಡುಪಿಯ ಕೃಷ್ಣಮಠದ ಪಾರ್ಕಿಂಗ್ ಏರಿಯಾದಲ್ಲಿ ಬಂಧಿಸಲಾಗಿದೆ. ಇದನ್ನೂ ಓದಿ: ತಮಿಳುನಾಡಿಗೆ ನೀರು – ಇಂದು ಸರ್ವಪಕ್ಷ ಸಭೆ ಕರೆದ ಸರ್ಕಾರ
Web Stories