ಡಾಲಿ ಧನಂಜಯ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ, ಶಿವರಾಜ್ ಕುಮಾರ್ ಕಾಂಬಿನೇಷನ್ ನ ಉತ್ತರ ಕಾಂಡ (Uttarkanda) ಸಿನಿಮಾದಲ್ಲಿ ಚೈತ್ರಾ ಆಚಾರ್ಯ್ (Chaitra Acharya) ಕೂಡ ನಟಿಸುತ್ತಿದ್ದಾರೆ. ಚೈತ್ರ ಆಚಾರ್ ಉತ್ತರಕಾಂಡ ತಾರಾಬಳಗಕ್ಕೆ ಸೇರ್ಪಡೆ ಆಗಿದ್ದು, ಇಂದು ಚಿತ್ರೀಕರಣದಲ್ಲೂ ಪಾಲ್ಗೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಅವರು ಲಚ್ಚಿ (Lacchi) ಎಂಬ ಒಂದು ಮುಖ್ಯ ಪಾತ್ರಕ್ಕಾಗಿ ಬಣ್ಣ ಹಚ್ಚಲಿದ್ದಾರೆ.
ಉತ್ತರಕಾಂಡ’ದ ಮುಹೂರ್ತ 2022ರಲ್ಲಿ ಆಗಿದ್ದು, ಚಿತ್ರಕಥೆಯು ಬಯಲುಸೀಮೆಯ ಸಂಸ್ಕೃತಿಯನ್ನು ಎಳೆ ಎಳೆಯಾಗಿ ಬಿಚ್ಚಿಡುವುದರಿಂದ, ಹಾಗೂ ಚಿತ್ರವು ಉತ್ತರ ಕರ್ನಾಟಕದ ಆಡುಭಾಷೆಯನ್ನು ಹೊಂದಿರುವುದರಿಂದ ಚಿತ್ರಕ್ಕೆ ನಿಖರವಾದ ಸಂಶೋಧನೆ ಮತ್ತು ಪ್ಲ್ಯಾನಿಂಗ್ ಅಗತ್ಯವಿತ್ತು. ಈ ಕಾರಣದಿಂದ ಮತ್ತು ಕೆಲವು ಅನಿವಾರ್ಯ ಸಂದರ್ಭಗಳಿಂದಾಗಿ ಚಿತ್ರೀಕರಣ ವಿಳಂಬಗೊಂಡಿತು. ಆದರೆ ಇದೀಗ ಸರ್ವ ಸಿದ್ಧತೆಗಳೊಂದಿಗೆ ಏ.15 ರಿಂದ ಚಿತ್ರೀಕರಣ ಆರಂಭಗೊಂಡಿದ್ದು, ಚಿತ್ರತಂಡದವರು ಉತ್ಸುಕರಾಗಿದ್ದಾರೆ.
‘ಉತ್ತರಕಾಂಡ’ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ (Shivarajukumar) ಮತ್ತು ಡಾಲಿ ಧನಂಜಯ್ (Daali Dhananjay) ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರೋಹಿತ್ ಪದಕಿ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಖ್ಯಾತ ಬಾಲಿವುಡ್ ಗಾಯಕ- ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಚಿತ್ರಕ್ಕೆ ಸಂಗೀತ ಸಂಯೋಜನೆ ಸಾಥ್ ನೀಡುತ್ತಿದ್ದಾರೆ. ಚಿತ್ರಕ್ಕೆ ವಿಶ್ವಾಸ್ ಕಶ್ಯಪ್ ಪ್ರೊಡಕ್ಷನ್ ವಿನ್ಯಾಸ (ಡಿಸೈನ್) ಮಾಡಲಿದ್ದಾರೆ. ಬಹುದೊಡ್ಡ ತಾರಾಬಳಗವನ್ನು ಹೊಂದಿರುವ ಈ ಚಿತ್ರ, ತಾರಾಬಳಗವನ್ನು ಈ ವಾರ ಘೋಷಿಸಲಿದೆ.