Connect with us

Karnataka

ಬೆಳಗ್ಗೆಯಷ್ಟೇ ವಿವಾಹ- ಸಂಜೆ ವೇಳೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಚೈತ್ರಾ ಕೊಟ್ಟೂರು ದಂಪತಿ

Published

on

– ನನಗೆ ಚೈತ್ರಾ ಇಷ್ಟವಿಲ್ಲವೆಂದ ನಾಗಾರ್ಜುನ್

ಕೋಲಾರ: ಬೆಳಗ್ಗೆಯಷ್ಟೇ ದೇವಸ್ಥಾನದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟದ್ದ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೊಟ್ಟೂರು ಹಾಗೂ ನಾಗಾರ್ಜುನ್ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ವಿವಾಹ ವಿವಾದ ಸಂಜೆ ವೇಳೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ನಾಗಾರ್ಜುನ್ ನನಗೆ ಈ ವಿವಾಹ ಇಷ್ಟವಿಲ್ಲ ಎಂದು ಹೇಳಿದ್ದಾರೆ. ಆದರೆ ಚೈತ್ರಾ ಕೊಟ್ಟೂರು ಮಾತ್ರ ನನಗೆ ನಾಗಾರ್ಜುನ್ ತುಂಬಾ ಇಷ್ಟ. ಅವರ ಜೊತೆಯೇ ಹೋಗುತ್ತೇನೆ ಎಂದು ಪಟ್ಟು ಹಿಡಿದ್ದಾರೆ.

ನಾಗಾರ್ಜುನ್ ಗೆ ಚೈತ್ರಾ ಜೊತೆ ಮದುವೆಯಾಗುವುದು ಇಷ್ಟವಿರಲಿಲ್ಲ. ಸಂಘಟನೆಗಳ ಜೊತೆಗೂಡಿ ಬಲವಂತವಾಗಿ ನಾಗಾರ್ಜುನ್ ರನ್ನ ಕೂಡಿ ಹಾಕಿ ದೇಗುಲದಲ್ಲಿ ವಿವಾಹ ಮಾಡಿಸಲಾಗಿದೆ. ಸಂಘಟನೆಗಳ ಬೆದರಿಕೆಗೆ ಬಗ್ಗಿದ ನಾಗಾರ್ಜುನ್, ಬಲವಂತವಾಗಿ ಚೈತ್ರಾಗೆ ತಾಳಿ ಕಟ್ಟಿದ್ದಾರೆ. ನಾಗಾರ್ಜುನ್ ಸೇರಿ ಮನೆಯವರಿಗೆ ಚೈತ್ರಾ ಜೊತೆ ಮದುವೆ ಇಷ್ಟವಿರಲಿಲ್ಲ ಎಂದು ಕೋಲಾರದ ಕುರುಬರಪೇಟೆಯ ಚೈತ್ರಾ ಮನೆಗೆ ಬಂದು ನಾಗಾರ್ಜುನ್ ಕುಟುಂಬದವರು ತಗಾದೆ ತೆಗೆದಿದ್ದಾರೆ ಎನ್ನಲಾಗಿದೆ.

ಇದೀಗ ನಾಗಾರ್ಜುನ್ ಕುಟುಂಬದವರು ಕೋಲಾರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಚೈತ್ರಾ ಕೊಟ್ಟೂರು ಹಾಗೂ ನಾಗಾರ್ಜುನ್ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಈ ವೇಳೆ ಚೈತ್ರಾ ಜೊತೆ ಮದುವೆ ಇಷ್ಟವಿಲ್ಲ ಎಂದು ನಾಗಾರ್ಜುನ್ ಪಟ್ಟು ಹಿಡಿದಿದ್ದಾರೆ. ಆದರೆ ಚೈತ್ರಾ ಕೊಟ್ಟೂರು ಮಾತ್ರ ನನಗೆ ನಾಗಾರ್ಜುನ್ ಇಷ್ಟ, ಅವನ ಜೊತೆಯೇ ಹೋಗುತ್ತೇನೆ ಎಂದು ಬಿಗಿಪಟ್ಟು ಹಿಡಿದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಚೈತ್ರಾ ಕೊಟ್ಟೂರು ಹಾಗೂ ನಾಗಾರ್ಜುನ್ ಇಂದು ಬೆಂಗಳೂರಿನ ಬ್ಯಾಟರಾಯನಪುರದ ಗಣಪತಿ ದೇವಸ್ಥಾನದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬಿಗ್ ಬಾಸ್ ಸೀಸನ್ 7 ರಲ್ಲಿ ಭಾಗವಹಿಸಿದ್ದ ಕೋಲಾರ ಮೂಲದ ಚೈತ್ರಾ ಕೊಟ್ಟೂರು. ಮಂಡ್ಯ ಮೂಲದ ನಾಗಾರ್ಜುನ್ ಜೊತೆಗೆ ಮದುವೆಯಾಗಿದ್ದರು. ಹಲವು ವರ್ಷಗಳಿಂದ ಚೈತ್ರಾ ಹಾಗೂ ನಾಗರ್ಜುನ್ ಇಬ್ಬರು ಪ್ರೀತಿಸುತ್ತಿದ್ದರು. ಬಳಿಕ ವಿವಾಹವಾಗಿದ್ದಾರೆ ಎನ್ನಲಾಗಿತ್ತು.

Click to comment

Leave a Reply

Your email address will not be published. Required fields are marked *