ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ನನ್ನ ಮೇಲೆ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ರಾಜ್ಯದ ಮಾಜಿ ಮುಖ್ಯಮಂತ್ರಿ, ಸದ್ಯ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡುವ ಭರದಲ್ಲಿ ತಾವು ಸದಾ ಅಸ್ಪೃಶ್ಯ ಅಂತಾ ನಮ್ಮ ಜಾತಿ ನಿಂದನೆ ಮಾಡಿದ್ದಾರೆ. ಸಿದ್ದರಾಮಯ್ಯ ಬಗ್ಗೆ ನಮಗೆ ಬಹಳ ಗೌರವ ಇದೆ. ಅವರು ಮುಖ್ಯಮಂತ್ರಿ ಆಗಿದ್ದವರು, ಇಂದು ವಿಪಕ್ಷ ನಾಯಕರಾಗಿರುವವರು. ಈ ತಿಂಗಳ 7ರಂದು ನಾರಾಯಣಸ್ವಾಮಿ ಅವರೇ, ನೀವು ಸದಾ ಅಸ್ಪೃಶ್ಯರು ಅಂತಾ ನಿಂದಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ರೈತರನ್ನು ಬಲಿ ಕೊಟ್ಟಾಯಿತು, ಈಗ ಸೈನಿಕರ ಸರದಿಯೇ?: ಅಗ್ನಿಪಥ್ ಯೋಜನೆಗೆ ಸಿದ್ದು ವಿರೋಧ
Advertisement
Advertisement
ನಿಮ್ಮ ಗುಲಾಮ ಮನಸ್ಥಿತಿಗೆ ನನ್ನ ಧಿಕ್ಕಾರವಿರಲಿ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ನನ್ನನ್ನ ನಿಂದಿಸುವ ಭರದಲ್ಲಿ ನನ್ನ ಜಾತಿಯನ್ನ ನಿಂದಿಸಿದ್ದಾರೆ. ಈ ವಿಚಾರ ದೌರ್ಜನ್ಯ ತಡೆ ಕಾಯ್ದೆಅಡಿ ದೂರು ನೀಡಿದ್ದೇನೆ. ಜಾತಿ ನಿಂದನೆ ಕೇಸ್ ದಾಖಲಿಸಿದ್ದೇನೆ, ಅವರನ್ನ ಅರೆಸ್ಟ್ ಮಾಡಬೇಕಾಗುತ್ತದೆ. ಇದರಲ್ಲಿ ಯಾವುದೇ ರೀತಿಯ ತಡ ಮಾಡಿದ್ರೆ ನಾನು ಧರಣಿ ಮಾಡ್ತೇನೆ ಎಂದು ತಿಳಿಸಿದ್ದಾರೆ.
Advertisement
Advertisement
ಜಾತಿಗೆ ಅಪಮಾನ ಮಾಡುವ ಕೆಲಸ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ವಿರುದ್ಧ ಜಾತಿ ನಿಂದನೆ, ದಲಿತ ವಿರೋಧಿ ಕೇಸ್ ದಾಖಲಿಸಬೇಕು ಎಂದು ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ.