ಹುಬ್ಬಳ್ಳಿ: ಮುಸ್ಲಿಂ ಸಮುದಾಯದಲ್ಲಿ ಅನೇಕ ಜಾತಿಗಳಿವೆ. ಅದರಲ್ಲಿ ಎಲ್ಲರನ್ನೂ ಒಂದು ಮಾಡಿ ಮುಸ್ಲಿಮರನ್ನು ಅತಿ ಹೆಚ್ಚು ಎಂದು ಬಿಂಬಿಸಿದ್ದಾರೆಂದು ಜಾತಿಗಣತಿ ವಿರುದ್ಧ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಕಿಡಿಕಾರಿದ್ದಾರೆ.
ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಷ್ಟು ದಿನ ಯಾರು ಅಲ್ಪಸಂಖ್ಯಾತರು ಇದ್ದರು, ಈಗ ಅವರು ಬಹುಸಂಖ್ಯಾತರು ಆಗಿದ್ದಾರೆ. ಹಾಗಿದ್ದರೆ ಅವರಿಗೆ ಅಲ್ಪಸಂಖ್ಯಾತ ಸೌಲಭ್ಯ ಯಾಕೆ? ಕಾಂಗ್ರೆಸ್ ಮಾಡುತ್ತಿರುವುದು ಮುಸ್ಲಿಮರಿಗೆ ಯಾವುದೂ ಉಪಯೋಗಕ್ಕೆ ಬರೋದಿಲ್ಲಾ. ಮುಸ್ಲಿಮರನ್ನು ಅತಿ ಹೆಚ್ಚು ಅಂತ ತೋರಿಸಿ ಅವರಿಗೆ ಇತರರ ಕೆಂಗಣ್ಣಿಗೆ ಗುರಿ ಮಾಡಿದ್ದೀರಿ. ಇದು ಅಲ್ಪಾಯುಶಿ ಸರ್ಕಾರ, ಈ ಸರ್ಕಾರ ಯಾವತ್ತಾದ್ರೂ ಹೋಗಬಹುದು ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಜಾತಿ ಸಂಖ್ಯೆ ಕಡಿಮೆ ಆಯ್ತು ಅಂತಾ ಮಂಗ್ಯಾಗಳ ತರ ಕಿತ್ತಾಡಬೇಡಿ – ಪ್ರತಾಪ್ ಸಿಂಹ
ರಾಜ್ಯದಲ್ಲಿ ಜನಾಕ್ರೋಶ ಆರಂಭವಾಗಿ, ಅಭಿವೃದ್ಧಿ ಶೂನ್ಯವಾಗಿದೆ. ಐದು ವರ್ಷ ಆಡಳಿತ ಮುಗಿಸಿದ್ರೆ ಸಾಕು ಎನ್ನುವ ಸ್ಥಿತಿಗೆ ಸರ್ಕಾರ ಬಂದು ತಲುಪಿದೆ. ಇಡೀ ರಾಜ್ಯದಲ್ಲಿ ಗೊಂದಲದಲ್ಲಿದೆ. ಹೀಗಾಗಿ ನಮ್ಮ ಪಕ್ಷ ಜನಾಕ್ರೋಶ ಯಾತ್ರೆ ಕೈಗೊಂಡಿದೆ. ನಾಳೆ ಬೆಳಗಾವಿಯಿಂದ ಎರಡನೇ ಸುತ್ತಿನ ಯಾತ್ರೆ ಆರಂಭವಾಗುತ್ತಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ದೊಡ್ಡ ಗೊಂದಲದ ಗೂಡಾಗಿದೆ. ಕಾಂಗ್ರೆಸ್ ಅಂಬೇಡ್ಕರ್ ಅವರಿಗೆ ಗೌರವದ ಬದಲು ಅಪಮಾನ ಮಾಡುತ್ತಿದೆ. ಬೆಳಗಾವಿ ಗಾಂಧೀಜಿ ಬಂದು ನೂರು ವರ್ಷವಾದ ಹಿನ್ನೆಲೆ ದೊಡ್ಡ ಕಾರ್ಯಕ್ರಮ ಮಾಡಿತು. ಆದರೆ, ಅಂಬೇಡ್ಕರ್ ಬಂದು ನೂರು ವರ್ಷವಾಗಿದೆ. ಯಾಕೆ ಕಾರ್ಯಕ್ರಮ ಮಾಡಿಲ್ಲ. ಈ ಕಾರ್ಯಕ್ರಮವನ್ನು ಬಿಜೆಪಿ ಮಾಡುತ್ತಿದೆ ಎಂದು ಹೇಳಿದ್ದಾರೆ. ಅಂಬೇಡ್ಕರ್‌ರನ್ನು ಸೋಲಿಸಿದ್ದು ಸಾರ್ವಕರ್ ಅಂತ ಸಿಎಂ ಹೇಳಿಕೆ ವಿಚಾರವಾಗಿ ಮಾತನಾಡಿ, ಸಿದ್ದರಾಮಯ್ಯ ಇದನ್ನು ಸಾಬೀತು ಮಾಡಿದ್ರೆ ನನ್ನ ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಅವರು ಸಾಬೀತು ಮಾಡಲು ಆಗದಿದ್ದರೆ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ರಾಜಕೀಯ ಸನ್ಯಾಸತ್ವ ತೆಗೆದುಕೊಳ್ಳಬೇಕು ಎಂದು ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಒಕ್ಕಲಿಗ ಸಮುದಾಯಕ್ಕೆ ಅನ್ಯಾಯ ಆಗಿರುವ ಸಮೀಕ್ಷೆ ನಾನು ಒಪ್ಪಲ್ಲ – ಕುಮಾರಸ್ವಾಮಿ
ಕಾಂಗ್ರೆಸ್ ಸುಳ್ಳು ಹೇಳುವ ಫ್ಯಾಕ್ಟರಿ ಓಪನ್ ಮಾಡಿದ್ದೇವೆ. ಅಂಬೇಡ್ಕರ್ ಪ್ರಶಸ್ತಿ ವಿಚಾರದಲ್ಲಿ ಗೊಂದಲ ಸೃಷ್ಟಿ ಮಾಡಿದೆ. ದಲಿತರಲ್ಲೇ ರೈಟು, ಲೆಫ್ಟ್ ಅಂತ ಕಾಂಗ್ರೆಸ್ ಗೊಂದಲ ಸೃಷ್ಟಿ ಮಾಡಿದೆ. ಅವರಿಗೆ ಜಾಸ್ತಿ ಕೊಟ್ಟಿದ್ದೇವೆ, ಇವ್ರಿಗೆ ಜಾಸ್ತಿ ಕೊಟ್ಟಿದ್ದೇವೆ ಅಂತ ಅಸಮಾಧಾನ ಹುಟ್ಟಿಸಿದ್ದಾರೆ. ಒಕ್ಕಲೆಬ್ಬಿಸಿ ಜನರ ನಡುವೆ ಗೊಂದಲ ಸೃಷ್ಟಿ ಮಾಡಲಾಗುತ್ತಿದೆ ಎಂದು ಟೀಕಿಸಿದ್ದಾರೆ.