– 370ನೇ ವಿಧಿ ಸೇರಿಸಿದ ದಿನದಿಂದ ಶ್ಯಾಮ್‌ಪ್ರಸಾದ್ ಮುಖರ್ಜಿ ಹೋರಾಟ
ಬೆಂಗಳೂರು: ಬಾಬಾ ಸಾಹೇಬ್ ಅಂಬೇಡ್ಕರನ್ನು ದೂರ ಇಟ್ಟು ನೆಹರೂ ಅವರು ತಮ್ಮ ಅವಶ್ಯಕತೆ ಮತ್ತು ಮುಸ್ಲಿಂ ಓಲೈಕೆಗಾಗಿ 370ನೇ ವಿಧಿಯನ್ನು ಸಂವಿಧಾನದಲ್ಲಿ ಸೇರಿಸಿದರು ಎಂದು ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanswamy) ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಾ.ಶ್ಯಾಮ್‌ಪ್ರಸಾದ್ ಮುಖರ್ಜಿ (Shyamprasad Mukherjee) ಅವರು ಬಾಬಾ ಸಾಹೇಬ್ ಡಾ.ಅಂಬೇಡ್ಕರ್ (B R Ambedkar) ಅವರ ಜೊತೆಯಲ್ಲಿ ಕೆಲಸ ಮಾಡಿದವರು. ಅಂಬೇಡ್ಕರ್ ಅವರು ಸಂವಿಧಾನ ಬರೆದ ಸಂದರ್ಭದಲ್ಲಿ 370ನೇ ವಿಧಿಯನ್ನು ಅಳವಡಿಸಿರಲಿಲ್ಲ. ಬಾಬಾ ಸಾಹೇಬರನ್ನು ದೂರ ಇಟ್ಟು ನೆಹರೂ ಅವರು ತಮ್ಮ ಅವಶ್ಯಕತೆ ಮತ್ತು ಓಲೈಕೆಗಾಗಿ 370ನೇ ವಿಧಿಯನ್ನು ಸಂವಿಧಾನದಲ್ಲಿ ಸೇರಿಸಿದರು. 370ನೇ ವಿಧಿ ಸೇರಿಸಿದ ದಿನದಿಂದ ಡಾ.ಶ್ಯಾಮ್‌ಪ್ರಸಾದ್ ಮುಖರ್ಜಿ ಅವರು ಅದರ ವಿರುದ್ಧ ಹೋರಾಟ ಪ್ರಾರಂಭಿಸಿದ್ದರು. ಈ ದೇಶಕ್ಕಾಗಿ ಹೋರಾಟ ಮಾಡುವ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಸಮರ್ಪಿಸಿದ ಒಬ್ಬ ಮಹಾನ್ ವ್ಯಕ್ತಿ ಡಾ.ಶ್ಯಾಮ್‌ಪ್ರಸಾದ್ ಮುಖರ್ಜಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಧಿಕೃತ ನಿವಾಸದಿಂದ ತಕ್ಷಣವೇ ಚಂದ್ರಚೂಡ್ ತೆರವಿಗೆ ಕೇಂದ್ರಕ್ಕೆ ಸುಪ್ರೀಂ ಪತ್ರ
ಡಾ.ಮುಖರ್ಜಿ ಅವರು ಸ್ವಾತಂತ್ರ್ಯ ನಂತರ ಪ್ರಥಮ ಸರ್ಕಾರದಲ್ಲಿ ಮಂತ್ರಿಯಾಗಿದ್ದವರು. ಆ ಕಾಲಘಟ್ಟದಲ್ಲಿ ಬಹುಮುಖ ಪ್ರತಿಭೆಯಾಗಿದ್ದವರು. ಇವರು ಒಬ್ಬ ರಾಜಕೀಯ ನಾಯಕರು, ಶಿಕ್ಷಣ ತಜ್ಞರು, ಹೋರಾಟಗಾರರು, ಸಮಾಜ ಸೇವಕರು ಹೀಗೆ ಅನೇಕ ರೀತಿಯಲ್ಲಿ ಈ ದೇಶಕ್ಕೆ ಕೊಡುಗೆಯನ್ನು ನೀಡಿದ್ದಾರೆ. ಇವರು ಬ್ರಿಟಿಷರ ವಿರುದ್ಧದ ಕ್ವಿಟ್ ಇಂಡಿಯಾ ಚಳವಳಿಯ ರುವಾರಿಯಾಗಿ ಬಹು ದೊಡ್ಡ ಹೋರಾಟವನ್ನು ರೂಪಿಸಿದ್ದರು ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಮಲಗಿದ್ದಲ್ಲೇ ಹೃದಯಾಘಾತದಿಂದ ಯೋಧ ಸಾವು – ಹುಟ್ಟೂರಲ್ಲಿ ಸೇನಾ ಗೌರವಗಳೊಂದಿಗೆ ಅಂತ್ಯಕ್ರಿಯೆ
ಆರ್‌ಎಸ್‌ಎಸ್ ಮತ್ತು ಬಿಜೆಪಿಯವರು ಸ್ವಾತಂತ್ರ‍್ಯಕ್ಕಾಗಿ ಕೆಲಸ ಮಾಡಿಲ್ಲ ಹಾಗೂ ಸತ್ತಿಲ್ಲ ಎಂದು ಕಾಂಗ್ರೆಸ್ಸಿನವರು ಹೇಳುತ್ತಾರೆ. ಈ ರೀತಿ ಕಾಂಗ್ರೆಸ್ಸಿಗರು ಹೇಳಲೇಬೇಕು ಯಾಕೆಂದರೆ, ಸ್ವಾತಂತ್ರ‍್ಯ ಅನ್ನುವುದು ತಮ್ಮಿಂದ ಮಾತ್ರ ಬಂದಿದೆ ಎಂಬುದು ಅವರಿಗೆ ಬೇಕಾಗಿದೆ ಎಂದು ಟೀಕಿಸಿದ್ದಾರೆ.